ಕನ್ನಡಪ್ರಭ ವಾರ್ತೆ ಮಂಡ್ಯ
ಕೆ.ಆರ್.ಪೇಟೆ ತಾಲೂಕಿನ ಹೊಸಹೊಳಲು, ಮಣಿಗನಹಳ್ಳಿ, ಬಳ್ಳೇಕೆರೆ, ಹೊಸಹಳ್ಳಿ ಸೇರಿದಂತೆ ಹಲವಾರು ಗ್ರಾಮದಿಂದ ರೈತರು ವಾಹನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಧಾವಿಸಿ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕಳೆದ 20 ವರ್ಷಗಳ ಹಿಂದೆ ಹೇಮಾವತಿ ನಾಲಾ ನಿರ್ಮಾಣಕ್ಕಾಗಿ ನಮ್ಮ ಜಮೀನುಗಳನ್ನು ಸ್ವಾನಪಡಿಸಿಕೊಂಡಿದ್ದು, ಸ್ವಲ್ಪ ಪ್ರಮಾಣದ ಪರಿಹಾರ ನೀಡಿದ್ದರು. ಹೆಚ್ಚಿನ ಪರಿಹಾರಕ್ಕಾಗಿ ಒತ್ತಾಯಿಸಿ ನಾವು 20 ವರ್ಷಗಳಿಂದಲೂ ಎಲ್ಲಾ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗಿದ್ದೇವೆ. ನ್ಯಾಯಾಲಯ ಹೆಚ್ಚಿನ ಪರಿಹಾರ ನೀಡುವಂತೆ ಆದೇಶ ನೀಡಿದ್ದರೂ ಸಹ ನೀರಾವರಿ ಇಲಾಖೆ ಅಧಿಕಾರಿಗಳು ಯಾವುದನ್ನೂ ಪರಿಗಣೆನೆಗೆ ತೆಗೆದುಕೊಳ್ಳದೆ ಪರಿಹಾರ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕಿಡಿಕಾರಿದರು.
ಜಿಲ್ಲಾಧಿಕಾರಿಗೂ ಸಹ ರಾಜ್ಯ ಉಚ್ಚ ನ್ಯಾಯಾಲಯದ ಆದೇಶದ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಿದ ಪ್ರತಿಭಟನಾಕಾರರು, ತಕ್ಷಣ ನ್ಯಾಯಾಲಯದ ಆದೇಶದಂತೆ ಹೆಚ್ಚಿನ ಪರಿಹಾರಕ್ಕೆ ಸಂಬಂಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕೆ.ಆರ್.ಪೇಟೆ ತಾಲೂಕಿನ ವಿವಿಧ ಗ್ರಾಮಗಳ ರೈತ ಮುಖಂಡರಾದ ಆರ್. ಪ್ರಕಾಶ್, ಸಣ್ಣೇಗೌಡ, ಸೋಮೇಗೌಡ, ಲೀಲಾವತಿ, ಮಂಗಳಮ್ಮ, ರವಿ, ನಾಗಯ್ಯ, ಸಿ.ಜೆ. ರಮೇಶ, ಶ್ರೀನಿವಾಸ, ಮಂಜುಳ, ಮಂಜು, ಮರಿಸ್ವಾಮಿ, ರಾಜಮ್ಮ, ನಾಗರಾಜು, ಚಂದ್ರೇಗೌಡ, ಕುಂಟಶಿಂಗ್ರಯ್ಯ, ನಾಗರಾಜೇಗೌಡ, ಚಂದ್ರಶೇಖರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.ಸಿಎಂ ಸಿದ್ದರಾಮಯ್ಯರ ದಲಿತ ವಿರೋಧಿ ನೀತಿ ಖಂಡಿಸಿ ದಸಂಸ ಪ್ರತಿಭಟನೆ
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಅಡುಗೆ ಅನಿಲ ಮತ್ತು ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಯಲಾಗದ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿದರು.ಹೊಲೆಯ/ಮಾದಿಗ ಸಮುದಾಯಗಳಿಗೆ ಉದ್ಯೋಗ ನೇಮಕಾತಿಯಲ್ಲಿ ರೂಪಿಸಿರುವ ರೋಸ್ಟರ್ ಬಿಂದು ಅನುಪಾತ 6:6ರಲ್ಲಿ ಎರಡೂ ಸಮುದಾಯಗಳಿಗೆ ಮೋಸವಾಗದಂತೆ ಒಳ ಮೀಸಲಾತಿಯ ಗೊಂದಲ ಸರಿಪಡಿಸಿ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.