ಕನ್ನಡಪ್ರಭ ವಾರ್ತೆ ಗುಡಿಬಂಡೆ
ಈ ಸಮಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು, ಈ ಭಾಗದ ಕ್ರೀಡಾಪಟುಗಳು ಸೇರಿದಂತೆ ಅನೇಕರು ಕ್ರೀಡಾಂಗಣ ನಿರ್ಮಾಣಕ್ಕೆ ಮನವಿ ಮಾಡುತ್ತಿದ್ದಾರೆ. ಅವರ ಮನವಿ ಮೇರೆಗೆ ಗುಡಿಬಂಡೆ ಹೊರವಲಯದ ಅಮಾನಿ ಬೈರಸಾಗರ ಕೆರೆಯ ಬಳಿ 6 ಎಕರೆ ಜಮೀನನ್ನು ಸಹ ಗುರ್ತಿಸಲಾಗಿದೆ. ಜೊತೆಗೆ ಎರಡು ಕೋಟಿ ಅನುದಾನ ಸಹ ಬಿಡುಗಡೆಯಾಗಿದೆ ಎಂದರು.
ಶೀಘ್ರದಲ್ಲೇ ಕ್ರೀಡಾಂಗಣ ನಿರ್ಮಾಣಸುಮಾರು ಸದರಿ ಜಾಗದಲ್ಲಿ ಬೆಟ್ಟ ಗುಡ್ಡಗಳಿರುವ ಕಾರಣದಿಂದ ಕ್ರೀಡಾಂಗಣ ನಿರ್ಮಾಣ ತಡವಾಗುತ್ತಿದೆ. ಇದೇ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣವಾದರೇ ಅನುಕೂಲವಾಗುವ ಉದ್ದೇಶದಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದ್ದೇವೆ. ಬಿಡುಗಡೆಯಾಗಿರುವ ಅನುದಾನಕ್ಕೆ ಮತ್ತಷ್ಟು ಅನುದಾನ ಕೊಟ್ಟು ಸ್ಥಳ ಸಮತಟ್ಟು ಮಾಡಲು ತಿಳಿಸಿದ್ದೇನೆ. ಆದಷ್ಟು ಶೀಘ್ರವಾಗಿ ಕ್ರೀಡಾಂಗಣ ನಿರ್ಮಾಣಕ್ಕೆ ಬೇಕಾಗುವಂತಹ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದರು.
ಇನ್ನೂ ತಾಲೂಕು ಕೇಂದ್ರದಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಜಾಗ ಸಹ ಮಂಜೂರಾಗಿದೆ. ಭವನ ನಿರ್ಮಾಣಕ್ಕೆ 2 ಕೋಟಿ ಅನುದಾನಕ್ಕೆ ಪ್ರಸ್ತಾವನೆ ನೀಡಲಾಗಿತ್ತು. ಈ ಸಂಬಂಧ ಕಳೆದೆರಡು ದಿನಗಳ ಹಿಂದೆ ಬೆಳಗಾವಿ ಅಧಿವೇಶನದಲ್ಲಿ ಪ್ರಶ್ನೆ ಸಹ ಕೇಳಿದ್ದೆ. ಅದಕ್ಕೆ ಮುಖ್ಯಮಂತ್ರಿಗಳು ಉತ್ತರ ನೀಡಿದ್ದು, 2 ಕೋಟಿ ಅನುದಾನ ಒದಗಿಸಿದ್ದಾರೆ ಎಂದರು.