ಸಾಗುವಳಿ ಚೀಟಿಗಾಗಿ ಭೂ ಹಕ್ಕುದಾರರ ವೇದಿಕೆ ಪ್ರತಿಭಟನೆ

KannadaprabhaNewsNetwork |  
Published : May 22, 2026, 01:45 AM IST
21ಜಿಯುಡಿ2 | Kannada Prabha

ಸಾರಾಂಶ

ರೈತರು ಕಳೆದ 30-40 ವರ್ಷಗಳಿಂದ ಜೀವನೋಪಾಯಕ್ಕಾಗಿ ಸರ್ಕಾರಿ ಭೂಮಿ ನಂಬಿಕೊಂಡು ಸಾಗುವಳಿ ಮಾಡುತ್ತಿದ್ದಾರೆ. ಭೂಮಿಯ ಹಕ್ಕು ಕೋರಿ ನಮೂನೆ 50, 53 ಮತ್ತು 57 ರ ಅಡಿ ಅರ್ಜಿ ಸಲ್ಲಿಸಿದ್ದರೂ, ಸರ್ಕಾರ ವರ್ಷಗಳಿಂದ ಅವುಗಳನ್ನು ಇತ್ಯರ್ಥಪಡಿಸದೆ ನೆನಗುದಿಗೆ ಇಟ್ಟಿದೆ.

ಗುಡಿಬಂಡೆ: ಸುಮಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಭೂಮಿಯನ್ನು ರೈತರಿಗೆ ಮಂಜೂರು ಮಾಡುವಂತೆ ಆಗ್ರಹಿಸಿ ಕರ್ನಾಟಕ ಭೂ ಹಕ್ಕುದಾರರ ವೇದಿಕೆ ಸಾರಥ್ಯದಲ್ಲಿ ಬಗರ್ ಹುಕುಂ ಸಾಗುವಳಿದಾರರು ಪಟ್ಟಣದ ಅಂಬೇಡ್ಕರ್ ವೃತ್ತದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿ ತಹಸೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಕರ್ನಾಟಕ ಭೂ ಹಕ್ಕುದಾರರ ವೇದಿಕೆಯ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ರೈತರು ಕಳೆದ 30-40 ವರ್ಷಗಳಿಂದ ಜೀವನೋಪಾಯಕ್ಕಾಗಿ ಸರ್ಕಾರಿ ಭೂಮಿ ನಂಬಿಕೊಂಡು ಸಾಗುವಳಿ ಮಾಡುತ್ತಿದ್ದಾರೆ. ಭೂಮಿಯ ಹಕ್ಕು ಕೋರಿ ನಮೂನೆ 50, 53 ಮತ್ತು 57 ರ ಅಡಿ ಅರ್ಜಿ ಸಲ್ಲಿಸಿದ್ದರೂ, ಸರ್ಕಾರ ವರ್ಷಗಳಿಂದ ಅವುಗಳನ್ನು ಇತ್ಯರ್ಥಪಡಿಸದೆ ನೆನಗುದಿಗೆ ಇಟ್ಟಿದೆ. ನಮೂನೆ 57 ರ ಅಡಿ ಅರ್ಜಿಗಳನ್ನು ಪಡೆದ ನಂತರ ಸಂಬಂಧಪಟ್ಟ ಇಲಾಖೆಯು ಯಾವುದೇ ಸಭೆಗಳನ್ನು ನಡೆಸುತ್ತಿಲ್ಲ. ಅಧಿಕಾರಿಗಳು ರೈತರ ಪರವಾಗಿ ನಿಲ್ಲುತ್ತಿಲ್ಲ ಎಂದು ಆರೋಪಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ರೈತರಿಂದ ಮನವಿ ಸ್ವೀಕರಿಸಿದ ತಹಸೀಲ್ದಾರ್ ಮಾತನಾಡಿ, ನಮೂನೆ 53 ರ ಅಡಿ ನಿಯಮಾನುಸಾರ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಈಗಾಗಲೇ 37 ಅರ್ಜಿಗಳು ಸಿದ್ಧವಾಗಿವೆ. ಕೇವಲ ಎರಡು ತಿಂಗಳ ಒಳಗಾಗಿ ಇವುಗಳನ್ನು ಸಂಪೂರ್ಣವಾಗಿ ಇತ್ಯರ್ಥಪಡಿಸಲಾಗುವುದು. ಬಳಿಕ ನಮೂನೆ 57 ರ ಅಡಿಯಲ್ಲಿ ಬಂದಿರುವ ಅರ್ಜಿಗಳನ್ನು ಹಂತ ಹಂತವಾಗಿ ಪರಿಶೀಲಿಸಿ ಪ್ರಕ್ರಿಯೆ ಮುಗಿಸಲಾಗುವುದು ಎಂದು ಭರವಸೆ ನೀಡಿದರು.

21ಜಿಯುಡಿ2: ಸುಮಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಭೂಮಿಯನ್ನು ರೈತರಿಗೆ ಮಂಜೂರು ಮಾಡುವಂತೆ ಆಗ್ರಹಿಸಿ ಕರ್ನಾಟಕ ಭೂ ಹಕ್ಕುದಾರರ ವೇದಿಕೆ ವತಿಯಿಂದ ತಹಸೀಲ್ದಾರ್ ರವರಿಗೆ ಮನವಿ ಪತ್ರ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಚ್‌ಸಿಜಿ ಸಂಸ್ಥೆಯಿಂದ ಉತ್ತರ ಬೆಂಗಳೂರಿನಲ್ಲಿ ಕ್ಯಾನ್ಸರ್ ಆಸ್ಪತ್ರೆ ಶುಭಾರಂಭ,
ಕಾಡಂಚಿನ ಗ್ರಾಮಗಳಿಗೆ ಕುಡಿವ ನೀರು ಸಂಪರ್ಕಕ್ಕೆ ಕೇಂದ್ರ ಸರ್ಕಾರ ಅನುಮತಿ