ಪೌರ ಕಾರ್ಮಿಕರಿಗೆ ವಸತಿ ಗೃಹ ನಿರ್ಮಾಣಕ್ಕೆ ಜಾಗದ ಹಕ್ಕುಪತ್ರ ಆದೇಶ

KannadaprabhaNewsNetwork |  
Published : Apr 13, 2026, 02:30 AM IST
ಶಾಸಕರು ಆದೇಶ ಪ್ರತಿ ಹಸ್ತಾಂತರ ಸಂದರ್ಭ | Kannada Prabha

ಸಾರಾಂಶ

ಕುಶಾಲನಗರ ಪುರಸಭೆಯ ಪೌರ ಕಾರ್ಮಿಕರಿಗೆ ವಸತಿ ಗೃಹಗಳ ನಿರ್ಮಾಣಕ್ಕೆ ಅಗತ್ಯವಿರುವ ಒಂದು ಎಕರೆ ಜಾಗದ ಹಕ್ಕುಪತ್ರ ಆದೇಶ ಪ್ರತಿಯನ್ನು ಮಡಿಕೇರಿ ಕ್ಷೇತ್ರ ಶಾಸಕರು ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರ ಕುಶಾಲನಗರ ಪುರಸಭೆಯ ಪೌರ ಕಾರ್ಮಿಕರಿಗೆ ವಸತಿ ಗೃಹಗಳ ನಿರ್ಮಾಣಕ್ಕೆ ಅಗತ್ಯವಿರುವ ಒಂದು ಎಕರೆ ಜಾಗದ ಹಕ್ಕುಪತ್ರ ಆದೇಶ ಪ್ರತಿಯನ್ನು ಮಡಿಕೇರಿ ಕ್ಷೇತ್ರ ಶಾಸಕರು ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು. ಕುಶಾಲನಗರದಲ್ಲಿ ನಡೆದ ಕೆಡಿಪಿ ಸಭೆ ಸಂದರ್ಭ ಶಾಸಕರು ಆದೇಶ ಪತ್ರಗಳನ್ನು ಹಸ್ತಾಂತರಿಸಿ ಮಾತನಾಡಿ, ನಿತ್ಯ ಪಟ್ಟಣದ ಸ್ವಚ್ಛತೆಗಾಗಿ ಕಾರ್‍ಯ ನಿರ್ವಹಿಸುತ್ತಿರುವ ಕಾರ್ಮಿಕರ ಏಳಿಗೆ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು. ಈ ಸಂಬಂಧ ಅವರಿಗೆ ವಸತಿಗೃಹ ನಿರ್ಮಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದು ತಿಳಿಸಿದರು. ಮುಳ್ಳುಸೋಗೆ ಗ್ರಾಮ ವ್ಯಾಪ್ತಿಯ ಹಾರಂಗಿ ರಸ್ತೆ ಬದಿಯಲ್ಲಿರುವ ಸುಮಾರು ಒಂದು ಎಕರೆ ವಿಸ್ತೀರ್ಣ ಜಾಗವನ್ನು ವಸತಿಗೃಹ ನಿರ್ಮಾಣಕ್ಕೆ ಮೀಸಲಾಗಿರಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭ ಪುರಸಭೆ ಮುಖ್ಯ ಅಧಿಕಾರಿ ಗಿರೀಶ್ ತಾಲೂಕು ಕಿರಣ್ ಜಿ. ಗೌರಯ್ಯ, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಪುರಸಭ ಆಡಳಿತ ಅಧಿಕಾರಿ ಅಬ್ದುಲ್ ನಬಿ, ಆರೋಗ್ಯ ಅಧಿಕಾರಿ ಉದಯ್ ಕುಮಾರ್, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಧನಂಜಯ್, ಕೆ. ರಶ್ಮಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೈ ಅಭ್ಯರ್ಥಿಗಳ ಸೋಲಿಗೆ ಆ ಪಕ್ಷದ ನಾಯಕರೇ ಮುಂದು
ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರಿಡಿ