ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

KannadaprabhaNewsNetwork |  
Published : Aug 29, 2026, 01:45 AM IST
ಭೂಮಿ ಪೂಜೆ ಸಂದರ್ಭ | Kannada Prabha

ಸಾರಾಂಶ

ಕುಶಾಲನಗರ ಸಮೀಪ ಹೆಬ್ಬಾಲೆ -ಹಳೆಕೋಟೆ, ಚಿಕ್ಕ ಕಮರಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.

ಕುಶಾಲನಗರ: ಕುಶಾಲನಗರ ಸಮೀಪ ಹೆಬ್ಬಾಲೆ -ಹಳೆಕೋಟೆ, ಚಿಕ್ಕ ಕಮರಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.

ಅಂದಾಜು ಮೊತ್ತ ಮೂರು ಕೋಟಿ ರು. ವೆಚ್ಚದಲ್ಲಿ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು 1.8 ಕಿಲೋಮೀಟರ್ ಉದ್ದದ ರಸ್ತೆ ಕಾರ್ಯ ನಡೆಯಲಿದೆ ಎಂದು ಶಾಸಕರು ತಿಳಿಸಿದರು. ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಅಡಿಯಲ್ಲಿ ನಡೆಯುವ ಕಾಮಗಾರಿ ಇದಾಗಿದ್ದು ಗುಣಮಟ್ಟದ ರಸ್ತೆ ನಿರ್ಮಾಣ ನಡೆಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಗ್ರಾಮಸ್ಥರು ಕಾಮಗಾರಿಯ ಗುಣಮಟ್ಟದ ಬಗ್ಗೆ ಗಮನಹರಿಸುವಂತಾಗಬೇಕು ಎಂದರು.ಇದೆ ವೇಳೆ ಶಾಸಕರು ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನವಾಗಿ ನಿರ್ಮಾಣಗೊಂಡಿರುವ ಸ್ಟೇಡಿಯಂ ಮತ್ತು ಶ್ರೀ ಬನಶಂಕರಿ ಬಯಲು ಮಂದಿರ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ ಪಿ ಶಶಿಧರ್, ಪ್ರಮುಖರಾದ ಕೆ ಪಿ ಚಂದ್ರಕಲಾ, ನಟೇಶ್ ಗೌಡ, ರಾಜಶೇಖರ್, ಹಳೆಕೋಟೆ ದಿನೇಶ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2028ರಲ್ಲಿ ಉಡುಪಿಯಲ್ಲಿ ವಿಶ್ವ ತುಳುವ ಮಹಾಸಭೆ
ಪತ್ರಕರ್ತರ ಮೇಲೆ ಹಲ್ಲೆ ಖಂಡನೀಯ: ಸುಧೀರ್‌ ಕುಮಾರ್‌