ಸುಬ್ರಹ್ಮಣ್ಯ: ಮಂಗಳೂರು - ಬೆಂಗಳೂರು ರೈಲು ಮಾರ್ಗದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಹಾಗೂ ಸಕಲೇಶಪುರ ನಿಲ್ದಾಣದ ನಡುವಿನ ಘಾಟ್ ಪ್ರದೇಶದ ರೈಲು ಮಾರ್ಗದ ಮೂರು ಕಡೆಗಳಲ್ಲಿ ಶನಿವಾರ ಭೂ ಕುಸಿತ ಸಂಭವಿಸಿ, ರೈಲು ಸಂಚಾರದಲ್ಲಿ ವ್ಯತ್ಯ ಉಂಟಾಗಿದೆ.
ಬಾರೀ ಮಳೆಯಿಂದಾಗಿ ಶನಿವಾರ ಸಂಜೆ ಗಂಟೆ 4:40ರ ವೇಳೆ ಘಟನೆ ಸಂಭವಿಸಿದೆ ಸಿರಿಬಾಗಿಲು-ಯಡಕುಮೇರಿ, ಯಡಕುಮೇರಿ-ಕಡಗರವಳ್ಳಿ ಮತ್ತು ಕಡಗರವಳ್ಳಿ-ಡೋಣಿಗಲ್ ವಿಭಾಗಗಳ ನಡುವಿನ ಕೆಲವೆಢ ಭೂಕುಸಿತ ಉಂಟಾಗಿ ಮಣ್ಣು, ಬಂಡೆಗಳು ರೈಲು ಮಾರ್ಗಕ್ಕೆ ಬಿದ್ದಿದೆ. ಪರಿಣಾಮ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.ಮಂಗಳೂರು ಸೆಂಟ್ರಲ್ - ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ಮೊದಲಿಗೆ ಸಂಜೆ ಬಂಟ್ವಾಳದಲ್ಲಿ ನಿಲ್ಲಿಸಲಾಗಿತ್ತು.
ಬಳಿಕ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಕಲೇಶಪುರದಿಂದ ಘಟನೆ ಮಾಹಿತಿ ಬಂದ ತಕ್ಷಣ ಕಾರ್ಯಾಚರಣೆ ತಂಡ ಘಟನಾ ಸ್ಥಳಕ್ಕೆ ತೆರಳಿ ದುರಸ್ತಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಭೂಕುಸಿತ ಹಿನ್ನಲೆಯಲ್ಲಿ ಹಲವು ರೈಲು ಸಂಚಾರದ ಮಾರ್ಗ ಬದಲಾವಣೆ ಮಾಡಲಾಗಿದೆ.ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್ - ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಶನಿವಾರ ಪ್ರಯಾಣವನ್ನು ತೋಕೂರು, ಕಾರವಾರ, ಮಡಗಾಂವ್, ಲೋಂಡಾ ಮತ್ತು ಎಸ್‌ಎಸ್‌ಎಸ್ ಹುಬ್ಬಳ್ಳಿ ಮೂಲಕ ಸಂಚರಿಸಲಿದೆ.
ಬಂಟವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ, ಸಕಲೇಶಪುರ ರಸ್ತೆ, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಬ್ಯಾಡಗಿ, ಹಾವೇರಿ ಮತ್ತು ಯೆಲ್ವಿಗಿ ಮಾರ್ಗದಲ್ಲಿ ರೈಲು ಸಂಚಾರ ಇರುವುದಿಲ್ಲ. ರೈಲು ಸಂಖ್ಯೆ 16586 ಮುರ್ಡೇಶ್ವರ-ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್, ಶನಿವಾರ ಪ್ರಾರಂಭವಾಗುವ ಪ್ರಯಾಣವನ್ನು ಕಾಸರಗೋಡು, ಶೋರನೂರು, ಪಾಲಕ್ಕಾಡ್, ಸೇಲಂ ಮತ್ತು ಜೋಲಾರ್‌ಪೇಟೆ ಮೂಲಕ ಸಂಚರಿಸಲಿದೆ.
ಬಂಟವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ, ಸುಬ್ರಹ್ಮಣ್ಯ ರಸ್ತೆ, ಹಸಕಪುರಂ, ಸುಬ್ರಹ್ಮಣ್ಯ, ಕೃಷ್ಣರಾಜನಗರ, ಮೈಸೂರು, ಮಂಡ್ಯ, ಚನ್ನಪಟ್ಟಣ, ರಾಮನಗರ, ಕೆಂಗೇರಿ, ಕೆಎಸ್ಆರ್ ಬೆಂಗಳೂರು ಮತ್ತು ಬೆಂಗಳೂರು ಕ್ಯಾಂಟ್ ಸಂಚಾರ ಇರುವುದಿಲ್ಲ. ರೈಲು ಸಂಖ್ಯೆ. 16512 ಕಣ್ಣೂರು-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್, ಶನಿವಾರದ ಪ್ರಯಾಣವನ್ನು ಕಾಸರಗೋಡು, ಶೋರನೂರು, ಪಾಲಕ್ಕಾಡ್, ಸೇಲಂ ಮತ್ತು ಜೋಲಾರ್‌ಪೇಟ್ಟೈ ಮೂಲಕ ಸಂಚರಿಲಿದೆ.
ಬಂಟವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ, ಸಕಲೇಶಪುರ, ಶ್ರವಣಬೆಳಗೊಳ, ಬಿ.ಜಿ.ನಗರ, ಕುಣಿಗಲ್, ಯಶವಂತಪುರ ಮತ್ತು ಕೆಎಸ್‌ಆರ್ ಬೆಂಗಳೂರು ಮಾರ್ಗದಲ್ಲಿ ಸಂಚಾರ ಇರುವುದಿಲ್ಲ. ರೈಲು ಸಂಖ್ಯೆ 16596 ಕಾರವಾರ-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್, ಶನಿವಾರ ಪ್ರಾರಂಭವಾಗುವ ಪ್ರಯಾಣವನ್ನು ಮಂಗಳೂರು ಜಂ., ಕಾಸರಗೋಡು, ಶೋರನೂರು, ಪಾಲಕ್ಕಾಡ್, ಸೇಲಂ ಮತ್ತು ಜೋಲಾರ್‌ಪೇಟೆ ಮೂಲಕ ಸಂಚರಿಲಿದೆ. ಬಂಟವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ಮಾರ್ಗದಲ್ಲಿ ಸಂಚಾರ ಇರುವುದಿಲ್ಲ ಎಂದು ರೈಲ್ವೇ ಇಲಾಖೆ ತಿಳಿಸಿದೆ.