ಕೇರಳದಲ್ಲಿ ಭೂ ಕುಸಿತ: ಇಬ್ಬರು ಸಾವು, ಮತ್ತಿಬ್ಬರು ನಾಪತ್ತೆ, ಒಬ್ಬನಿಗೆ ಗಾಯ

KannadaprabhaNewsNetwork |  
Published : Jul 31, 2024, 01:04 AM IST
ಕೇರಳದದ ವೈನಾಡು ಜಿಲ್ಲೆಯ ಮೆಪ್ಪಾಡಿ ಪ್ರದೇಶದಲ್ಲಿ ಸಂಭವಿಸಿದ ಭೂ ಕುಸಿತ ಸ್ಧಳದಲ್ಲಿ ಗಾಯಗೊಂಡವರ ನೆರವಿಗೆತೆರಳಿರುವ ಗುಂಡ್ಲುಪೇಟೆ ತಹಸೀಲ್ದಾರ್‌ ರಮೇಶ್‌ ಕುಮಾರ್‌. ನೆರವಿ | Kannada Prabha

ಸಾರಾಂಶ

ಕೇರಳದ ವೈನಾಡು ಜಿಲ್ಲೆಯ ಮೆಪ್ಪಾಡಿ ಪ್ರದೇಶದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೂ ಕುಸಿತದಲ್ಲಿ ಜಿಲ್ಲೆಯ ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ನಾಪತ್ತೆ, ಓರ್ವ ಗಾಯಗೊಂಡ ಘಟನೆ ನಡೆದಿದೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕೇರಳದ ವೈನಾಡು ಜಿಲ್ಲೆಯ ಮೆಪ್ಪಾಡಿ ಪ್ರದೇಶದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೂ ಕುಸಿತದಲ್ಲಿ ಜಿಲ್ಲೆಯ ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ನಾಪತ್ತೆ, ಓರ್ವ ಗಾಯಗೊಂಡ ಘಟನೆ ನಡೆದಿದೆ.

ಜಿಲ್ಲೆಯ ಪುಟ್ಟಸಿದ್ದಶೆಟ್ಟಿ (62), ರಾಣಿ ಮದರ್‌ (50 ) ಅವರ ಮೃತದೇಹ ಪತ್ತೆಯಾಗಿದ್ದು, ಚಾಮರಾಜನಗರ ತಾಲೂಕಿನ ಇರಸವಾಡಿ ರಾಜೇಂದ್ರ (50), ರತ್ನಮ್ಮ (45) ಅವರು ಕೇರಳದ ಮೆಪ್ಪಾಡಿಯಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿದ್ದರು. ಅವರ ಮನೆ ಪ್ರವಾಹದಲ್ಲಿ ಕೊಚ್ಚಿಹೋಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ. ಗುಂಡ್ಲುಪೇಟೆ ತಾಲೂಕಿನ ತ್ರಿಯಂಬಕಪುರದ ಸ್ವಾಮಿ ಶೆಟ್ಟಿ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸ್ಧಳಕ್ಕೆ ತೆರಳಿರುವ ಗುಂಡ್ಲುಪೇಟೆ ತಹಸೀಲ್ದಾರ್‌ ಟಿ. ರಮೇಶ್‌ ಕುಮಾರ್‌ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು