ಕನ್ನಡಪ್ರಭ ವಾರ್ತೆ ಶಿಕಾರಿಪುರ
ಪಟ್ಟಣದ ಬಾಪೂಜಿ ಶಿಕ್ಷಣ ಸಂಸ್ಥೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಾಪೂಜಿ ಎಜುಕೇಷನಲ್ ಸೊಸೈಟಿ (ರಿ) ವತಿಯಿಂದ ಆಯೋಜಿಸಲಾಗಿದ್ದ ತಾಲೂಕು ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎಸ್ ಎಸ್ ಎಲ್ ಸಿ ತರಗತಿ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಪ್ರಮುಖ ಘಟ್ಟವಾಗಿದ್ದು, ಈ ಹಂತದಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಅಣಿಗೊಳಿಸುವಲ್ಲಿ ಕನ್ನಡ ಭಾಷಾ ಶಿಕ್ಷಕರ ಜವಾಬ್ದಾರಿ ಬಹಳಷ್ಟು ಪ್ರಮುಖವಾಗಿದೆ ಎಂದ ಅವರು, ಕನ್ನಡ ಭಾಷೆಯನ್ನು ಓದಲು, ಬರೆಯಲು ನಿಖರವಾಗಿ ವಿದ್ಯಾರ್ಥಿಯು ಕಲಿತರೆ ಇತರೆ ವಿಷಯ ಗಳಲ್ಲಿ ತೇರ್ಗಡೆ ಹೊಂದಲು ಅನುಕೂಲವಾಗುತ್ತದೆ. ಶಿಕ್ಷಕರು 8ನೇ ತರಗತಿಯಿಂದಲೇ ಎಲ್ಲಾ ವಿದ್ಯಾರ್ಥಿಗಳ ಬಗ್ಗೆ ವೈಯಕ್ತಿಕ ಗಮನ ವಹಿಸಿ ಮಾರ್ಗದರ್ಶನ ನೀಡಿದರೆ ಹತ್ತನೇ ತರಗತಿಯಲ್ಲಿ ಅತ್ಯುತ್ತಮ ಫಲಿತಾಂಶ ನಿಶ್ಚಿತವಾಗಿ ಪಡೆಯಲು ಸಾಧ್ಯ ಎಂದವರು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಪೂಜಿ ಎಜುಕೇಷನಲ್ ಸೊಸೈಟಿ ಸಂಸ್ಥಾಪಕ ಬಿ.ಪಾಪಯ್ಯ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆ ಉತ್ತಮ ಸಾಧನೆ ಮೂಲಕ ಗುರುತಿಸಿಕೊಂಡಿದ್ದು, ಪ್ರಸಕ್ತ ಸಾಲಿನಲ್ಲಿ ಅತ್ಯುತ್ತಮ ಮಾರ್ಗದರ್ಶನದಿಂದ ವಿದ್ಯಾರ್ಥಿಗಳ ಪರಿಶ್ರಮದಿಂದ ಇನ್ನೂ ಹೆಚ್ಚಿನ ಫಲಿತಾಂಶವನ್ನು ನಿರೀಕ್ಷಿಸುವುದಾಗಿ ತಿಳಿಸಿ ಈ ದಿಸೆಯಲ್ಲಿ ಇಲಾಖೆ ನಡೆಸುವ ಕಾರ್ಯಾಗಾರಕ್ಕೆ ಸಂಸ್ಥೆ ಸದಾ ಕಾಲ ಸಹಕಾರ ನೀಡಲಿದೆ ಎಂದರು.