ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ಸಂಜೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ದಾವಣಗೆರೆ ಜಿಲ್ಲೆ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರಪಂಚದ ಮೂರನೇ ಪ್ರಾಚೀನ ಭಾಷೆ ಎಂಬ ಹೆಗ್ಗಳಿಕೆ ಕನ್ನಡ ಬಾಷೆಗಿದ್ದು ನಾವೆಲ್ಲರೂ ನಮ್ಮ ನಾಡು, ನುಡಿ, ಸಂಸ್ಕೃತಿ ಮತ್ತು ಸಾಹಿತ್ಯದ ಉಳಿವಿಗಾಗಿ ಕಟಿಬದ್ಧರಾಗಬೇಕಿದೆ ಎಂದರು.
ರಾಜ್ಯ ಸರ್ಕಾರಿ ನೌಕರರರಿಗಾಗಿ ಆರೋಗ್ಯ ಸಂಜೀವಿನಿ ಯೋಜನೆಯು ಜಾರಿಯಾಗಿದ್ದು, ಹೊಸ ಪಿಂಚಣಿ ಯೋಜನೆ ರದ್ದು ಮಾಡಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸಂಘವು ಯಾವುದೇ ರೀತಿಯ ಹೋರಾಟಕ್ಕೂ ಬದ್ಧವಾಗಿದೆ ಎಂದು ತಿಳಿಸಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಮಾತನಾಡಿ, ಆದಿಕವಿ ಪಂಪನಾದಿಯಾಗಿ ಪ್ರಸ್ತುತ ದಿನಮಾನದವರೆಗೂ ಭಾಷೆ ಸ್ವಾಭಿಮಾನದ ಸಂಕೇತವಾಗಿದ್ದು, ಯುವ ಜನತೆ ಭಾಷೆಯ ರಾಯಭಾರಿಯಾಗುವಲ್ಲಿ ಕಾರ್ಯತತ್ಪರರಾಗಬೇಕು ಎಂದರು.
ಕನ್ನಡ ನಾಡು -ನುಡಿಯ ಉಳಿವಿಗಾಗಿ ಸಂಘವು ಎಲ್ಲಾ ಸಹಕಾರ ನೀಡುಬೇಕು. ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಎಚ್.ಮಂಜುನಾಥ ಮಾತನಾಡಿ, ಪರಂಪರೆ ನಶಿಸದಂತೆ ತಡೆಯಲು ನಮ್ಮ ಮಾತೃಭಾಷಾ ಬಳಕೆ ವೃದ್ಧಿಯಾಗಬೇಕೆಂದರು.
ಸಂಘದ ತಾಲೂಕು ಅಧ್ಯಕ್ಷರು, ರಾಜ್ಯ ಮತ್ತು ಜಿಲ್ಲಾ ಹಂತದ ಪದಾಧಿಕಾರಿಗಳು, ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ದಿಳ್ಯಪ್ಪ ಸೇರಿದಂತೆ ಹಲವರು ಹಾಜರಿದ್ದರು.