ಪಂಜಿನ ಕವಾಯತು, ಡಿಸಿ ಸ್ಥಳ ಪರಿಶೀಲನೆ

KannadaprabhaNewsNetwork |  
Published : Sep 29, 2025, 01:04 AM IST
000ದ00 | Kannada Prabha

ಸಾರಾಂಶ

ದಸರಾ ಉತ್ಸವದ ಅಂಗವಾಗಿ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 28 ರಂದು ಸಂಜೆ 7 ಗಂಟೆಗೆ ಪಂಜಿನ ಕವಾಯತು ಪ್ರದರ್ಶನ ನಡೆಯಲಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುದಸರಾ ಉತ್ಸವದ ಅಂಗವಾಗಿ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 28 ರಂದು ಸಂಜೆ 7 ಗಂಟೆಗೆ ಪಂಜಿನ ಕವಾಯತು ಪ್ರದರ್ಶನ ನಡೆಯಲಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲಿಸಿದರು. ನಂತರ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಕ್ರೀಡಾಂಗಣದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು ಹಾಗೂ ಧೂಮೀಕರಣ ಕಾರ್ಯವನ್ನು ಕೈಗೊಳ್ಳಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಅವರಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರು. ಪಂಜಿನ ಕವಾಯತು ಪ್ರದರ್ಶನಕ್ಕೂ ಮುನ್ನ ಕ್ರೀಡಾಂಗಣದಲ್ಲಿ ಸರಿಗಮಪ ಖ್ಯಾತಿಯ ಜಿಲ್ಲೆಯ ಪ್ರತಿಭೆ ಕಂಬದ ರಂಗಯ್ಯ ಅವರಿಂದ ಸಂಜೆ 4 ಗಂಟೆಗೆ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಯಲಿದ್ದು, ವೇದಿಕೆ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದ ಅವರು ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ವಿವಿಧ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ ವಾಹನ, ಆಂಬುಲೆನ್ಸ್ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದರು.ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ದಸರಾ ಉತ್ಸವ ಸಂಬಂಧ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಗಳು ದಸರಾ ಉತ್ಸವದ ಅಂಗವಾಗಿ ನಗರದ ದೀಪಾಲಂಕಾರವನ್ನು ವೀಕ್ಷಿಸಲು ಅವಕಾಶ ಕಲ್ಪಿಸಿರುವ ಅಂಬಾರಿ ಡಬಲ್ ಡೆಕ್ಕರ್ ಬಸ್ ಉಚಿತ ಪ್ರಯಾಣ ಮಾಡುವ ಸಮಯವನ್ನು ರಾತ್ರಿ 12 ಗಂಟೆಯವರೆಗೂ ವಿಸ್ತರಿಸಬೇಕೆಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ದಸರಾ ಉತ್ಸವದ ಕಡೆಯ ದಿನವಾದ ವಿಜಯ ದಶಮಿಯಂದು ಜರುಗಲಿರುವ ವೈಭವದ ಜಂಬೂ ಸವಾರಿ ಮೆರವಣಿಗೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 2ರವರೆಗೆ ನಡೆಯಲಿರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವುದರಿಂದ ಬದಲಿ ವಾಹನ ಸಂಚಾರ ಮಾರ್ಗ, ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಮಹಾನಗರ ಪಾಲಿಕೆ ಆಯುಕ್ತ ಅಶ್ವಿಜ ಬಿ.ವಿ., ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ಸಿಲೋಗನಾ ಹೆಸರಿನಲ್ಲಿ ವಿಜಯ ದಶಮಿ ಆಚರಿಸುವ ದನಗರ ಗೌಳಿಗರು
ಭಟ್ಕಳದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ