ಮಡಿಕೇರಿ : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಲೋಪದೋಷಗಳ ಕುರಿತು ಚರ್ಚಿಸಲು ಇಂಡಿಯಾ ಒಕ್ಕೂಟದ ವತಿಯಿಂದ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಯಿತು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಲೋಪದೋಷ ಹಾಗೂ ಅವುಗಳ ವಿರುದ್ಧ ಕೈಗೊಳ್ಳಬೇಕಾದ ಹೋರಾಟದ ಕುರಿತು ಚರ್ಚಿಸಲಾಯಿತು. ನಂತರ ಇಂಡಿಯಾ ಒಕ್ಕೂಟದ ನಿಯೋಗ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು. ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕೆಂದು ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಆಗ್ರಹಿಸಿದವು.
ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್, ಗೌರವ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಚಂದ್ರಶೇಖರ್ ಆರ್.ಪಿ., ಮಿನಾಜ್ ಪ್ರವೀಣ್, ಸಿಪಿಐ(ಎಂ) ಅಧ್ಯಕ್ಷ ಹೆಚ್.ಬಿ.ರಮೇಶ್, ಸಿಪಿಐ ಅಧ್ಯಕ್ಷ ರಮೇಶ್ ಮಾಯಮುಡಿ, ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ, ಯುವ ಘಟಕದ ಅಧ್ಯಕ್ಷ ಆಶಿಕ್, ನಗರಸಭಾ ನಾಮನಿರ್ದೇಶಿತ ಸದಸ್ಯರಾದ ಸದಾ ಮುದ್ದಪ್ಪ, ಜಿ.ಸಿ.ಜಗದೀಶ್, ಯಾಕೂಬ್ ಎಂ.ಎ., ಅಲ್ಪಸಂಖ್ಯಾತರ ಘಟಕದ ಮುಖಂಡ ಕಲೀಲ್ ಬಾಷಾ, ಮಡಿಕೇರಿ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್, ಮಡಿಕೇರಿ ಘಟಕದ ಅಧ್ಯಕ್ಷ ಕೌಸರ್, ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕವನ್ ಕೊತ್ತೋಳಿ, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ್ ಟಿ.ಆರ್., ನಗರಸಭಾ ಮಾಜಿ ಅಧ್ಯಕ್ಷೆ ಜುಲೇಕಾಬಿ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿ, ಸೇವಾದಳದ ಹಬೀಬ್ ಅಹಮ್ಮದ್, ಮಾಜಿ ಸೈನಿಕ ಘಟಕದ ಅಧ್ಯಕ್ಷ ಗಣೇಶ್ ಬೊಳ್ಳಿಯಂಡ, ವಿಮಲಾ, ಪ್ರೇಮ ನಿಂಗಪ್ಪ, ಪೊನ್ನು, ರಾಜು, ಲೆಸ್ಲಿ, ವಸಂತ ಭಟ್, ಮೈಕಲ್ ಮಾರ್ಷಲ್, ಹಫೀಸ್ ಸೇರಿದಂತೆ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟದ ಕಾರ್ಯಕರ್ತರು ಇದ್ದರು.