ಮತದಾರರ ಪಟ್ಟಿ ಪರಿಷ್ಕರಣೆ ಲೋಪ: ಕೆಪಿಸಿಸಿ ಆಕ್ರೋಶ

KannadaprabhaNewsNetwork |  
Published : Oct 11, 2026, 03:45 AM IST
ಚಿತ್ರ : 9ಎಂಡಿಕೆ4 : ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖರು.  | Kannada Prabha

ಸಾರಾಂಶ

ರಾಜ್ಯದಲ್ಲಿ ಸುಮಾರು 60 ಸಾವಿರಕ್ಕೂ ಹೆಚ್ಚು ಅರ್ಹ ಮತದಾರರ ಹೆಸರು ಪಟ್ಟಿಗೆ ಸೇರ್ಪಡೆಯಾಗಿಲ್ಲ. ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಆರ್.ವಿ. ವೆಂಕಟೇಶ್ ಹೇಳಿದ್ದಾರೆ.

ಮಡಿಕೇರಿ : ರಾಜ್ಯದಲ್ಲಿ ಸುಮಾರು 60 ಸಾವಿರಕ್ಕೂ ಹೆಚ್ಚು ಅರ್ಹ ಮತದಾರರ ಹೆಸರು ಪಟ್ಟಿಗೆ ಸೇರ್ಪಡೆಯಾಗಿಲ್ಲ. ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಆರ್.ವಿ. ವೆಂಕಟೇಶ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ ಐ ಆರ್ ಪ್ರಕ್ರಿಯೆಯಿಂದ ಬದುಕಿದವರನ್ನು ಕೂಡ ಸತ್ತವರಂತೆ ಮಾಡಿದ್ದಾರೆ. ಯಾವೊಬ್ಬರನ್ನೂ ಕೂಡ ಮತದಾರರ ಪಟ್ಟಿಯಿಂದ ತೆಗೆಯಬಾರದು ಎಂದರು. 30ರ ಒಳಗೆ ಪದಾಧಿಕಾರಿಗಳ ನೇಮಕ: ಪಕ್ಷದ ಬಲವರ್ಧನೆಗಾಗಿ ಸಂಘಟನಾ ಸೃಜನ್ ಅಭಿಯಾನದ 2ನೇ ಹಂತದ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆ, ಬ್ಲಾಕ್ ಹಾಗೂ ವಲಯ ಮಟ್ಟದಲ್ಲಿ ತಳಮಟ್ಟದ ಅಭಿಪ್ರಾಯ ಕ್ರೋಢೀಕರಿಸಿ 30ರ ಒಳಗೆ ನೂತನ ಪದಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ರಾಜ್ಯದ 35 ಸಂಘಟನಾ ಜಿಲ್ಲೆಗಳ ಅಧ್ಯಕ್ಷರ ನೇಮಕಾತಿ ನಡೆದಿದೆ. ಕಾರ್ಯಕರ್ತರು ಮತ್ತು ನಾಯಕರ ಅಭಿಪ್ರಾಯ ಆಲಿಸಿ ಬ್ಲಾಕ್ ಹಾಗೂ ವಲಯ ಮಟ್ಟದ ಪದಾಧಿಕಾರಿಗಳ ನೇಮಕ ಮಾಡಲಾಗುತ್ತದೆ.ಕೆಪಿಸಿಸಿ ಕೊಡಗು ಉಸ್ತುವಾರಿ ಮಮತಾ ಗಟ್ಟಿ ಮಾತನಾಡಿ, ಬಿಜೆಪಿ ಪಕ್ಷದಿಂದ ಹಲವು ವೋಟ್ ಚೋರಿ ಆಗಿದೆ. ಮತದಾನವನ್ನು ದುರ್ಬಳಕೆ ಮಾಡಿದ್ದಾರೆ. ಅವಕಾಶವನ್ನು ಕಸಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು.

ಚುನಾವಣಾ ಆಯೋಗ ಬಿಜೆಪಿ ವಕ್ತಾರರಂತೆ: ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಎಸ್ ಐ ಆರ್ ವಿಚಾರ ದೆಹಲಿಯಲ್ಲಿ ದೊಡ್ಡ ಹೋರಾಟ ನಡೆಯುತ್ತಿದೆ. ಪರಿಷ್ಕರಣೆ ಆಗಬಾರದು ಎಂದು ಹೇಳಲು ಸಾಧ್ಯವಿಲ್ಲ. ಸತ್ತವರು, ಎರಡು ಕಡೆರ ಮತದಾನ ಚೀಟಿ ಇರುವವರನ್ನು ಪರಿಷ್ಕರಣೆ ಮಾಡುವುದು ತಪ್ಪಿಲ್ಲ. ರಾಜ್ಯದಲ್ಲಿ ಸುಮಾರು 40 ಲಕ್ಷ ಮಂದಿಯನ್ನು ಕೈಬಿಡುವಂತಾಗಿದೆ. ಚುನಾವಣಾ ಆಯೋಗದ ಮೇಲೆ ಕೇಳಿದ ಪ್ರಶ್ನೆಗೆ ಬಿಜೆಪಿ ವಕ್ತಾರರಂತೆ ಪ್ರತಿಕ್ರಿಯಿಸುತ್ತಿದೆ ಎಂದು ಆರೋಪಿಸಿದರು.

ಫಾರಂ ನಂ.7 ಅನ್ನು ದುರುಪಯೋಗ ಮಾಡಲಾಗುತ್ತಿದೆ. ಚುನಾವಣಾ ಆಯೋಗವನ್ನು ಬಳಸಿ ರಾಜಕೀಯ ಮಾಡಲಾಗುತ್ತಿದೆ ಎಂದು ಪೊನ್ನಣ್ಣ ಆರೋಪಿಸದರು.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮಾತನಾಡಿ ಎಸ್ ಐ ಆರ್ ನಲ್ಲಿ ಆಗಿರುವ ಲೋಪಗಳ ಬಗ್ಗೆ ನಾವು ಚುನಾವಣಾ ಆಯುಕ್ತರ ಪ್ರಶ್ನೆ ಮಾಡಿದರೆ ಚುನಾವಣಾ ಆಯೋಗ ಇದಕ್ಕೆ ಉತ್ತರ ಕೊಡಬೇಕಾಗಿದೆ. ಆದರೆ ಬಿಜೆಪಿ ನೀಡುವ ಅಗತ್ಯ ಇಲ್ಲ. ಕೆಲವು ಕಡೆಗಳಲ್ಲಿ ಉದ್ದೇಶ ಪೂರ್ವಕವಾಗಿ ಹೆಸರು ಡಿಲೀಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಫಾರಂ ನಂ.7 ದುರುಪಯೋಗಪಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಇಂತಹ ದುಷ್ಕೃತ್ಯಗಳ ವಿರುದ್ಧ ಕಾನೂನು ಹೋರಾಟ ರೂಪಿಸಲಾಗುವುದು. ಈ ವಿಷಯದಲ್ಲಿ ಬಿಜೆಪಿಯವರು ಉತ್ತರ ಕೊಡುವುದು ಬೇಡ, ಚುನಾವಣಾ ಆಯೋಗವೇ ನೇರವಾಗಿ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ಮಡಿಕೇರಿ ದಸರಾ ಜನೋತ್ಸವದಲ್ಲಿ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅಥ್ಲೀಟ್ ಎಂ.ಆರ್. ಪೂವಮ್ಮ ಅವರಿಗೆ ವಿಶೇಷ ಸನ್ಮಾನಿಸಲಾಗುವುದು ಎಂದು ಶಾಸಕ ಡಾ. ಮಂತರ್ ಗೌಡ ತಿಳಿಸಿದರು.

ಗೋಷ್ಠಿಯಲ್ಲಿ ಕೆಪಿಸಿಸಿ ವೀಕ್ಷಕ ಪದ್ಮನಾಭ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನ ದಕ್ಷ ಬಳಕೆ ಎಲ್ಲರಿಗೂ ಅನಿವಾರ್ಯ: ಅನಂತ ಪದ್ಮನಾಭ
ಪ್ರಜಾಪ್ರಭುತ್ವ ಆಶಯ ಅರಿಯಲು ಯುವಸಂಸತ್ತು ಸಹಕಾರಿ: ಪ್ರೊ.ಆಲೂರ