ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ತಾಲೂಕಿನ ಗಡಿಭಾಗವಾದ ಐಕನಹಳ್ಳಿ ಗ್ರಾಮ ಪಂಚಾಯಿತಿಯ ವತಿಯಿಂದ ಎಸ್ಸಿ, ಎಸ್ಟಿ ಫಲಾನುಭವಿಗಳಿಗೆ ಲ್ಯಾಪ್‌ಟಾಪ್ ಹಾಗೂ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಲಾಯಿತು.ತಾಲೂಕಿನ ಗಡಿ ಗ್ರಾಮವಾದ ಐಕನಹಳ್ಳಿ ಗ್ರಾಮ ಪಂಚಾಯಿತಿಯ ಎಸಿಪಿ, ಟಿಎಸ್ಪಿ ಹಣದಲ್ಲಿ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಸ್ವಯಂ ಉದ್ಯೋಗ ಅಳವಡಿಸಿಕೊಂಡಿರುವ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಐಕನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಮಿತ್ರ ಶಂಭುಲಿಂಗಯ್ಯ ವಿತರಣೆ ಮಾಡಿದರು.
ದಲಿತ ಮುಖಂಡ ಶಂಭುಲಿಂಗಯ್ಯ ಮಾತನಾಡಿ, ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನವನ್ನು ಎಸ್‌ಸಿ ಸಮಾಜದ ಸುಮಿತ್ರರವರಿಗೆ ಐಕನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನವನ್ನು ನೀಡುವ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದ ಶಾಸಕರಾದ ಎಚ್ ಟಿ ಮಂಜು, ಕರ್ನಾಟಕ ಸಹಕಾರ ಮಾರಾಟ ಮಂಡಳಿಯ ನಿರ್ದೇಶಕರಾದ ಸಿಎನ್ ಪುಟ್ಟಸ್ವಾಮಿಗೌಡ, ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಕೃಷ್ಣೇಗೌಡ, ಮಾಜಿ ಎಪಿಎಂಸಿ ಅಧ್ಯಕ್ಷರಾದ ಮಲ್ಲೇಶ್ ಹಾಗೂ ಗ್ರಾಮ ಪಂಚಾಯತಿ ಎಲ್ಲಾ ಸದಸ್ಯರಿಗೂ ತುಂಬು ಹೃದಯದ ಧನ್ಯವಾದಗಳು ಸಲ್ಲಿಸುತ್ತೇನೆ ಎಂದರು.ಅದೇ ರೀತಿ ಎಲ್ಲಾ ಗ್ರಾಮಗಳ ಮುಖಂಡರ ಸಹಕಾರದಿಂದ ಕೇವಲ ಎರಡು ತಿಂಗಳಲ್ಲಿ ಹಲವಾರು ಉತ್ತಮ ಕಾರ್ಯಗಳನ್ನು ಮಾಡಲು ಅವಕಾಶ ಸಿಕ್ಕಿದ್ದು ತುಂಬಾ ಸಂತೋಷದ ವಿಚಾರ ಎಂದರು. ಎರಡು ತಿಂಗಳ ಅವಧಿಯಲ್ಲಿ ೩೦ ಜನ ಮಹಿಳೆಯರಿಗೆ ಹೊಲಿಗೆ ತರಬೇತಿ ನೀಡಲಾಗಿದೆ, ೩೬ ಜನ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಲಾಗಿದೆ, ಒಬ್ಬ ಎಂಜಿನಿಯರಿಂಗ್ ವಿದ್ಯಾರ್ಥಿಗೆ ಲ್ಯಾಪ್ಟಾಪ್ ವಿತರಣೆ ಮಾಡಲಾಗಿದೆ. ಕುದುರೆ ಮುಡಮ್ಮ ದೇವಸ್ಥಾನ ಆವರಣದಲ್ಲಿ ಹೊಸದಾಗಿ ಬೋರ್ವೆಲ್ ಕೊರೆದು ವಿದ್ಯುತ್ ಸಂಪರ್ಕವನ್ನು ನೀಡಲಾಗಿದೆ, ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಸಾಕಾರ ಮಾಡಲಾಗಿದೆ, ಎಲ್ಲ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮೊದಲ ಆದ್ಯತೆ ನೀಡಲಾಗಿದೆ ಎಂದರು.
ಕಡಿಮೆ ಅವಧಿಯಲ್ಲಿ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ಎಲ್ಲರಿಗೂ ತುಂಬು ಹೃದಯದ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಪಿಡಿಒ ವಿಜಯ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಅಂಬುಜಾ ಉದಯಶಂಕರ್, ಐ ಡಿ ಕುಮಾರ್, ದಲಿತ ಮುಖಂಡರಾದ ಯಲಾದಹಳ್ಳಿ ಶಂಭುಲಿಂಗಯ್ಯ, ಎಲ್‌ಐಸಿ ಅಶೋಕ್, ಕುಮಾರ್, ಶಿವಣ್ಣ, ಸುನಂದದೇವರಾಜು, ಕಾರ್ಯದರ್ಶಿ ಪ್ರಭು ನಂದನ್, ಬಿಲ್ ಕಲೆಕ್ಟರ್ ಮಂಜು, ಅಟೆಂಡರ್ ನಂಜುಂಡ ಸೇರಿದಂತೆ ಇತರರು ಹಾಜರಿದ್ದರು.