ಕೊಪ್ಪಳ: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಆಡಳಿತ ವೈಫಲ್ಯವನ್ನು ಜನರ ಮನೆಬಾಗಿಲಿಗೆ ತಲುಪಿಸಿ, ಸರ್ಕಾರದ ವಿರುದ್ಧ ಕೊಪ್ಪಳ ಜಿಲ್ಲೆಯಿಂದಲೇ ಜನಾಂದೋಲನ ರೂಪಿಸುವಂತೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಜಿಲ್ಲಾ ಘಟಕಕ್ಕೆ ನಿರ್ದೇಶನ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಿರುವ ಪ್ರಕರಣ, ಸ್ಟಿಂಗ್ ಆಪರೇಷನ್ ಮೂಲಕ ಅವರ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ, ಬಸ್ ಪ್ರಯಾಣ ದರ ಹಾಗೂ ಹಾಲು, ಮೊಸರು, ತುಪ್ಪದ ಬೆಲೆ ಏರಿಕೆ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲಿಸಲು ಸಂಘಟಿತ ಪ್ರಯತ್ನ ನಡೆಸಬೇಕು ಎಂದು ಕುಮಾರಸ್ವಾಮಿ ಸೂಚಿಸಿದ್ದಾರೆ ಎನ್ನಲಾಗಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗಳನ್ನು ಗುರುತಿಸಿ ಚರ್ಚೆ ನಡೆಸಬೇಕು. ಬಿಜೆಪಿ ಜತೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಸ್ಥಳೀಯ ನಾಯಕತ್ವಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗುವುದು. ಕಾಂಗ್ರೆಸ್ ಸರ್ಕಾರದ ಪತನ ಕೊಪ್ಪಳದಿಂದಲೇ ಆರಂಭವಾಗಬೇಕು ಎಂಬುದು ಸಚಿವರ ಆಶಯವಾಗಿದೆ ಎಂದು ಪ್ರಕಟಣೆ ತಿಳಿಸಿದೆ.ಸಾರ್ವಜನಿಕರ ಒತ್ತಾಯದ ಮೇರೆಗೆ ಕೊಪ್ಪಳಕ್ಕೆ ಭೇಟಿ ನೀಡುವ ಉದ್ದೇಶವಿದ್ದು, ಸಂಸತ್ತಿನ ಚಳಿಗಾಲದ ಅಧಿವೇಶನದ ನಂತರ ಸಮಯ ನಿಗದಿಪಡಿಸಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗುವುದು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಎನ್‌ಡಿಎ ಒಕ್ಕೂಟದ ಸಾಧನೆಗಾಗಿ ರೂಪಿಸಬೇಕಾದ ರಾಜಕೀಯ ಕಾರ್ಯತಂತ್ರವನ್ನು ಕೊಪ್ಪಳದಲ್ಲಿಯೇ ಸಿದ್ಧಪಡಿಸಲಾಗುವುದು ಎಂದು