ಕನ್ನಡಪ್ರಭ ವಾರ್ತೆ : ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಮೂಲಕ ಜಾರಿಗೊಳ್ಳುತ್ತಿರುವ ಗ್ರಾಮಾನುಭವ ಕಾರ್ಯಕ್ರಮದ ಜಿಲ್ಲಾ ಹಂತದ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಅವರು ನಗರದ ಅಜ್ಜರಕಾಡು ಕ್ರೀಡಾಂಗಣದಲ್ಲಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಉದ್ಘಾಟಿಸಿದರು.
ಈ ಯೋಜನೆಯ ಮಾಹಿತಿಯನ್ನು ಪಡೆದ ಸಚಿವರು, ಈ ಯೋಜನೆಯಲ್ಲಿ ಭಾಗವಹಿಸುತ್ತಿರುವ ಮಕ್ಕಳಿಗೆ ಶುಭ ಹಾರೈಸಿದರು.ಈ ಸಂದರ್ಭ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಪಂ ಸಿಓಇ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ ಎ,ಎಂ. ಗಪೂರ್, ನಾರಾಯಣಗುರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಂಜುನಾಥ ಪೂಜಾರಿ, ಜಿಪಂ ಉಪ ಕಾರ್ಯದರ್ಶಿ ಕದ್ರುವಳ್ಳಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾಃ ಅಶೋಕ ಕಾಮತ್, ಶಿಕ್ಷಣಾಧಿಕಾರಿಗಳಾದ ಗಂಗಾಧರಸ್ವಾಮಿ, ಡಿವೈಪಿಸಿಗಳಾದ ರಮೇಶ್ ಎಂ. ಎನ್., ಮತ್ತು ತಿಪ್ಪೇಶ್ ನಾಯಕ್, ಉಡುಪಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ, ಡಯಟ್ ಉಪನ್ಯಾಸಕ ಯೋಗಾನರಸಿಂಹಸ್ವಾಮಿ, ಬಾಲಕಿಯರ ಪಪೂ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಇಂದಿರಾ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ವಸಂತ್ ಜೋಗಿ ಹಾಗೂ ಗ್ರಾಮಾನುಭವದ ಕೇಂದ್ರಬಿಂದುಗಳಾದ ಶಾಲಾ ಮಕ್ಕಳು ಹಾಜರಿದ್ದರು.