ನವೆಂಬರ್ ಅಂತ್ಯದೊಳಗೆ ಕಡು ಬಡವರಿಗೆ ನಿವೇಶನ ಹಂಚಿಕೆಗೆ ಚಾಲನೆ

KannadaprabhaNewsNetwork |  
Published : Oct 14, 2026, 01:45 AM IST
13ಕೆಎಂಎನ್ ಡಿ20 | Kannada Prabha

ಸಾರಾಂಶ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಕನಿಷ್ಠ 2 ಸಾವಿರ ಹಕ್ಕುಪತ್ರಗಳನ್ನ ವಿತರಿಸುವಂತೆ ಸೂಚಿಸಿದ್ದಾರೆ. ಅದರಂತೆ ಈಗಾಗಲೇ ನಿವೇಶನ ಹಂಚಲು ಸರ್ಕಾರಿ ಜಾಗಗಳನ್ನು ಗುರುತಿಸಲಾಗಿದೆ. ಲಭ್ಯ ಜಾಗವನ್ನು ನಿವೇಶನಗಳನ್ನಾಗಿ ಪರಿವರ್ತಿಸುವ ಕೆಲಸ ಸಹ ಆರಂಭವಾಗಿದೆ. ಸರ್ವೇ ಮಾಡಿ ಅರ್ಹರಿಗೆ ಸ್ಥಳದಲ್ಲೇ ಹಕ್ಕುಪತ್ರಗಳನ್ನು ವಿತರಿಸಲಾಗುವುದು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಕಡು ಬಡವರಿಗೆ ನವೆಂಬರ್ ತಿಂಗಳ ಅಂತ್ಯದೊಳಗೆ ನಿವೇಶನ ಹಂಚುವ ಮೂಲಕ ಚಾಲನೆ ನೀಡಲಾಗುವುದು ಎಂದು ಶಾಸಕ ಎ.ಬಿ ರಮೇಶ್‌ ಬಂಡಿಸಿದ್ದೇಗೌಡ ತಿಳಿಸಿದರು.

ತಾಲೂಕಿನ ಹೊಂಗಹಳ್ಳಿಯಲ್ಲಿ ಅಂಬೇಡ್ಕರ್ ಭವನ ಹಾಗೂ ಬಸ್ತಿಪುರ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಕನಿಷ್ಠ 2 ಸಾವಿರ ಹಕ್ಕುಪತ್ರಗಳನ್ನ ವಿತರಿಸುವಂತೆ ಸೂಚಿಸಿದ್ದಾರೆ. ಅದರಂತೆ ಈಗಾಗಲೇ ನಿವೇಶನ ಹಂಚಲು ಸರ್ಕಾರಿ ಜಾಗಗಳನ್ನು ಗುರುತಿಸಲಾಗಿದೆ. ಲಭ್ಯ ಜಾಗವನ್ನು ನಿವೇಶನಗಳನ್ನಾಗಿ ಪರಿವರ್ತಿಸುವ ಕೆಲಸ ಸಹ ಆರಂಭವಾಗಿದೆ. ಸರ್ವೇ ಮಾಡಿ ಅರ್ಹರಿಗೆ ಸ್ಥಳದಲ್ಲೇ ಹಕ್ಕುಪತ್ರಗಳನ್ನು ವಿತರಿಸಲಾಗುವುದು ಎಂದರು.

ಅ.16ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೆಆರ್‌ಎಸ್‌ನ ಬೃಂದಾವನದ ಬಳಿ ಕಾವೇರಿ ಆರತಿಗೆ ಚಾಲನೆ ನೀಡಲು ಆಗಮಿಸುತ್ತಿದ್ದಾರೆ. ಬೃಂದಾವನವನ್ನು ಫೌಂಟೇನ್ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಿದೆ. ಪ್ರತಿ ಗ್ರಾಮಕ್ಕೆ ಬಸ್ ಹಾಗೂ ಊಟದ ವ್ಯವಸ್ಥೆ ಮಾಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಆಗಮಿಸುವಂತೆ ಮನವಿ ಮಾಡಿದರು.

ಇದೇ ವೇಳೆ 10 ಕ್ಕೂ ಹೆಚ್ಚು ಅರ್ಹ ಮಹಿಳೆಯರಿಗೆ ಹೊಲಿಗೆ ಯಂತ್ರ ಹಾಗೂ ವಿಶೇಷ ಚೇತನರಿಗೆ ಶಾಸಕರು ಸಹಾಯಧನದ ಚೆಕ್ ವಿತರಿಸಿದರು.

ಈ ವೇಳೆ ಹುಲಿಕೆರೆ ಗ್ರಾಪಂ ಆಡಳಿತಾಧಿಕಾರಿ ಪ್ರದೀಪ್‌ಕುಮಾರ್, ಪಿಡಿಒ ಶ್ರೀನಿವಾಸ್, ಟಿಪಿಸಿಎಂಎಸ್ ಉಪಾಧ್ಯಕ್ಷ ನಾಗರಾಜು, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸಂಜಯ್, ಗ್ರಾ.ಪಂ. ಮಾಜಿ ಅಧ್ಯಕ್ಷ ರಾಮಕೃಷ್ಣ, ಮುಖಂಡ ಶಿವಣ್ಣ, ಟಿಎಪಿಸಿಎಂಎಸ್ ನಿರ್ದೇಶಕ ಅರಕೆರೆ ಶಿವಯ್ಯ, ಮುಖಂಡರಾದ ಗೋವಿಂದಯ್ಯ, ಜಗದೀಶ್, ಶೇಖರ್, ಗವಿಸಿದ್ದಯ್ಯ, ಬಸವರಾಜು, ಶ್ರೀನಿವಾಸ್, ಮಂಜುನಾಥ್, ಎಂ.ಬಿ. ಕುಮಾರ್, ದೇವರಾಜು, ಗೌರಮ್ಮ, ಮಂಚಮ್ಮ, ಜಯಮ್ಮ, ಭಾರತಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಸಮಾಧಾನ ಬದಿಗಿಟ್ಟು ಲಿಂಬಿಕಾಯಿ ಪರ ಪ್ರಚಾರ: ಕುಬೇರಪ್ಪ
ಗೊಂಬೆಗಳ ಪ್ರದರ್ಶನ ಸಂಸ್ಕೃತಿ, ಸಂಸ್ಕಾರಗಳ ಭಾವನಾತ್ಮಕ ಬೆಸುಗೆ: ಶಕುಂತಲಾ ಆನಂದ್