ಪೌಷ್ಠಿಕ ತೋಟ ನಿರ್ಮಾಣ ಮೂಲಕ ಸ್ವೀಪ್ ಕಾರ್ಯಕ್ರಮಕ್ಕೆ ಚಾಲನೆ

KannadaprabhaNewsNetwork | Published : Dec 14, 2023 1:30 AM

ಸಾರಾಂಶ

ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಂ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷಿ ಸಖಿ ಮತ್ತು ವನ ಸಖಿಯರಿಂದ ‘ಒಂದು ಗಿಡ ಮಕ್ಕಳ ತೋಟಕ್ಕಾಗಿ-ಒಂದು ಮತ ದೇಶದ ಹಿತಕ್ಕಾಗಿ’ ಎಂಬ ಘೋಷ ವಾಕ್ಯದೊಂದಿಗೆ ನಗರದ ಜಿಲ್ಲಾ ಪಂಚಾಯತ್ ಶಿಶು ಪಾಲನಾ ಕೇಂದ್ರದಲ್ಲಿ ಪೌಷ್ಠಿಕ ತೋಟ ನಿರ್ಮಾಣಕ್ಕೆ ಸ್ವೀಪ್ ಕಾರ್ಯಕ್ರಮಕ್ಕೆ ನಗರದಲ್ಲಿ ಚಾಲನೆ ದೊರೆಯಿತು. ಜಿಲ್ಲಾ ಪಂಚಾಯತ್ ಕಚೇರಿಯ ಶಿಶುಪಾಲನಾ ಕೇಂದ್ರದ ಆವರಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಪಿ. ಲಕ್ಷ್ಮಿ ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.

ಜಿಪಂ ಉಪ ಕಾರ್ಯದರ್ಶಿ ಪಿ. ಲಕ್ಷ್ಮಿ ಅವರಿಂದ ಗಿಡ ನೆಡುವ ಮೂಲಕ ಚಾಲನೆ

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಂ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷಿ ಸಖಿ ಮತ್ತು ವನ ಸಖಿಯರಿಂದ ‘ಒಂದು ಗಿಡ ಮಕ್ಕಳ ತೋಟಕ್ಕಾಗಿ-ಒಂದು ಮತ ದೇಶದ ಹಿತಕ್ಕಾಗಿ’ ಎಂಬ ಘೋಷ ವಾಕ್ಯದೊಂದಿಗೆ ನಗರದ ಜಿಲ್ಲಾ ಪಂಚಾಯತ್ ಶಿಶು ಪಾಲನಾ ಕೇಂದ್ರದಲ್ಲಿ ಪೌಷ್ಠಿಕ ತೋಟ ನಿರ್ಮಾಣಕ್ಕೆ ಸ್ವೀಪ್ ಕಾರ್ಯಕ್ರಮಕ್ಕೆ ನಗರದಲ್ಲಿ ಚಾಲನೆ ದೊರೆಯಿತು.

ಜಿಲ್ಲಾ ಪಂಚಾಯತ್ ಕಚೇರಿಯ ಶಿಶುಪಾಲನಾ ಕೇಂದ್ರದ ಆವರಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಪಿ. ಲಕ್ಷ್ಮಿ ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಿ ಅವರು ಕೃಷಿ ಸಖಿ ಮತ್ತು ವನ ಸಖಿಯರು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳುವಂತೆ ಜಾಗೃತಿ ಮೂಡಿಸುವುದು ಹಾಗೂ ಮತಗಟ್ಟೆ ಅಧಿಕಾರಿಗಳಿಗೆ 18ವರ್ಷ ಮೇಲ್ಪಟ್ಟವರ ದಾಖಲಾತಿಗಳನ್ನು ನೀಡಿ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಲು ಮತ್ತು ಪ್ರತಿಯೊಬ್ಬ ಸಾರ್ವಜನಿಕರಿಗೂ ಮತದಾನದ ಬಗ್ಗೆ ಅರಿವನ್ನು ಮೂಡಿಸುವಂತೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಇತರರು ಈ ಸಂದರ್ಭದಲ್ಲಿ ಇದ್ದರು.

-----------------------

13ಸಿಎಚ್ಎನ್‌54

ಚಾಮರಾಜನಗರದ ಜಿಲ್ಲಾ ಪಂಚಾಯತ್ ಕಚೇರಿಯ ಶಿಶುಪಾಲನಾ ಕೇಂದ್ರದ ಆವರಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಹಮ್ಮಿಕೊಂಡಿದ್ದ ಪೌಷ್ಠಿಕ ತೋಟ ನಿರ್ಮಾಣಕ್ಕೆ ಸ್ವೀಪ್ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಪಿ. ಲಕ್ಷ್ಮಿ ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.

Share this article