ದೀಕ್ಷಾ ಭೂಮಿ ಯಾತ್ರೆಗೆ ಚಾಲನೆ

KannadaprabhaNewsNetwork |  
Published : Oct 19, 2026, 03:00 AM IST
18ಬಿಎಸ್ವಿ04- ಬಸವನಬಾಗೇವಾಡಿಯ ತಹಸೀಲ್ದಾರ ಕಚೇರಿ ಮುಂಭಾಗ ಭಾನುವಾರ ಸಂಜೆ ನಾಗಪುರ ದೀಕ್ಷಾ ಭೂಮಿಗೆ ತೆರಳುವ ಬಸುಗಳಿಗೆ ಹಸಿರು ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕಿ ಮಂಜುಳಾ ಹಿರೇಮನಿ, ದಲಿತ ಮುಖಂಡರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ತಹಸೀಲ್ದಾರ ಕಚೇರಿ ಮುಂಭಾಗ ಭಾನುವಾರ ಸಂಜೆ ನಾಗಪುರ ದೀಕ್ಷಾ ಭೂಮಿಗೆ ತೆರಳುವ ಬಸ್‌ಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕಿ ಮಂಜುಳಾ ಹಿರೇಮನಿ, ವಿವಿಧ ದಲಿತ ಮುಖಂಡರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಪಟ್ಟಣದ ತಹಸೀಲ್ದಾರ ಕಚೇರಿ ಮುಂಭಾಗ ಭಾನುವಾರ ಸಂಜೆ ನಾಗಪುರ ದೀಕ್ಷಾ ಭೂಮಿಗೆ ತೆರಳುವ ಬಸ್‌ಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕಿ ಮಂಜುಳಾ ಹಿರೇಮನಿ, ವಿವಿಧ ದಲಿತ ಮುಖಂಡರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕಿ ಮಂಜುಳಾ ಹಿರೇಮನಿ ಅವರು, ದೀಕ್ಷಾ ಭೂಮಿ ಮಹಾರಾಷ್ಟ್ರದ ನಾಗಪುರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮಾರಕ ಮತ್ತು ನವಯಾನ ಬೌದ್ಧ ಧರ್ಮದ ಪವಿತ್ರ ಯಾತ್ರಾ ಕೇಂದ್ರಕ್ಕೆ ಒಮ್ಮೆಯಾದರೂ ಭೇಟಿ ನೀಡಬೇಕು ಎಂಬುದು ಹಲವರ ಬೇಡಿಕೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ.ಬಿ.ಆರ್.ಅಂಬೇಡ್ಕರ ಅವರ ಅನುಯಾಯಿಗಳಿಗೆ ನಾಗಪುರ ದೀಕ್ಷಾ ಯಾತ್ರೆಯನ್ನು ಪ್ರತಿ ವರ್ಷ ಹಮ್ಮಿಕೊಳ್ಳುತ್ತದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಯಾತ್ರಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗುವದು. ಈ ವರ್ಷ ಬಸವನಬಾಗೇವಾಡಿ, ನಿಡಗುಂದಿ, ಕೊಲ್ಹಾರ ಮೂರು ತಾಲೂಕಿನಿಂದ 67 ಯಾತ್ರಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇಲಾಖೆಯಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬಸವನಬಾಗೇವಾಡಿ, ನಿಡಗುಂದಿ ತಾಲೂಕಿನ ಯಾತ್ರಾರ್ಥಿಗಳಿಗೆ ಬಸವನಬಾಗೇವಾಡಿ ತಹಸೀಲ್ದಾರ ಕಚೇರಿ ಆವರಣದಲ್ಲಿ, ಕೊಲ್ಹಾರ ತಾಲೂಕಿನ ಯಾತ್ರಾರ್ಥಿಗಳಿಗೆ ಕೊಲ್ಹಾರ ತಹಸೀಲ್ದಾರ್‌ ಕಚೇರಿ ಆವರಣದಲ್ಲಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಅ.18 ರಿಂದ 22 ರವರೆಗೆ ಈ ಯಾತ್ರೆ ನಡೆಯಲಿದೆ. ಯಾತ್ರಾರ್ಥಿಗಳ ಯಾತ್ರೆ ಸುಖಕರವಾಗಲೆಂದು ಶುಭಕೋರಿದರು.

ಡಿಎಸ್ಎಸ್ ಮುಖಂಡ ಅರವಿಂದ ಸಾಲವಾಡಗಿ ಮಾತನಾಡಿ, ಇದೊಂದು ಪವಿತ್ರ ಯಾತ್ರಾ ಸ್ಥಳವಾಗಿದ್ದು, ಈ ಸ್ಥಳಕ್ಕೆ ಭೇಟಿ ನೀಡುವುದು ಪವಿತ್ರ ಕಾರ್ಯವಾಗಿದೆ ಎಂದರು.

ಡಿಎಸ್ಎಸ್ ಮುಖಂಡರಾದ ಪರಶುರಾಮ ದಿಂಡವಾರ, ಮಹಾಂತೇಶ ಸಾಸಾಬಾಳ, ಗುರು ಗುಡಿಮನಿ ಮಾತನಾಡಿ, ಡಾ.ಅಂಬೇಡ್ಕರ ಅವರ ವಿಚಾರಧಾರೆಗಳು, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕ ನಾಗೇಶ ದುದ್ದಗಿ, ವಸತಿ ನಿಲಯದ ಮೇಲ್ವಿಚಾರಕರಾದ ಜಿ.ಐ.ಬೆಕಿನಾಳ, ಎಸ್.ಎಸ್.ಹೊಳಿ, ಮಹಾಂತೇಶ ಚಕ್ರವರ್ತಿ, ರಸೂಲ್ ನದಾಫ್, ಇಲಾಖೆಯ ಸಿಬ್ಬಂದಿ ವಿರೇಶ ಗೂಡ್ಲಮನಿ ಸೇರಿದಂತೆ ಇತರರು ಇದ್ದರು. ಬಸವನಬಾಗೇವಾಡಿ ತಾಲೂಕಿನಿಂದ 30, ನಿಡಗುಂದಿ ತಾಲೂಕಿನಿಂದ ಒಬ್ಬರು, ಕೊಲ್ಹಾರ ತಾಲೂಕಿನಿಂದ 23 ಯಾತ್ರಾರ್ಥಿಗಳು ಪ್ರಯಾಣ ಬೆಳೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೃದಯದ ಭಾಷೆಯೇ ನಿಜವಾದ ಸಾಹಿತ್ಯ: ಡಾ.ಶ್ರೀರಾಮ ಇಟ್ಟನ್ನವರ
ನಶಿಸಿಸುತ್ತಿರುವ ಭಾರತೀಯ ಸಂಸ್ಕೃತಿ, ಸಂಪ್ರದಾಯಗಳು: ಅನುಪಮಾ ಧಾರವಾಡ