ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

KannadaprabhaNewsNetwork |  
Published : Aug 26, 2026, 01:30 AM IST
ತಿಪಟೂರು ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ. | Kannada Prabha

ಸಾರಾಂಶ

ಗ್ರಾಮಾಂತರ ಪ್ರದೇಶದಲ್ಲಿನ ೮೩೩ ಲಕ್ಷದ ಸೇತುವೆ ನಿರ್ಮಾಣದ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಷಡಕ್ಷರಿ ಭೂಮಿಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ತಿಪಟೂರು

ಗ್ರಾಮಾಂತರ ಪ್ರದೇಶದಲ್ಲಿನ ೮೩೩ ಲಕ್ಷದ ಸೇತುವೆ ನಿರ್ಮಾಣದ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಷಡಕ್ಷರಿ ಭೂಮಿಪೂಜೆ ನೆರವೇರಿಸಿದರು.

ತಾಲೂಕಿನ ಗುಡಿಗೊಂಡನಹಳ್ಳಿ ಗ್ರಾಮದ ತಿರುವಿನ ಹೊನ್ನವಳ್ಳಿ ರಸ್ತೆಯ ಸೇತುವೆ ನಿರ್ಮಾಣ ಕಾಮಗಾರಿ, ಹಾಲುಗೌಡನಕಟ್ಟೆ ಗೇಟ್ ಹಾಗೂ ಶನಿಮಹಾತ್ಮ ದೇವಸ್ಥಾನದ ತಿರುವಿನ ಸೇತುವೆ ನಿರ್ಮಾಣ ಕಾಮಗಾರಿ, ಹೊನ್ನವಳ್ಳಿ ಗ್ರಾಮದ ದೇವಸ್ಥಾನದ ಸಮೀಪ ಆರು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಾಣ, ಹುಚ್ಚಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡಿಸ್ಕೆರೆಯ ಸೇತುವೆ ನಿರ್ಮಾಣದ ಒಟ್ಟು ೬೦೦ ಲಕ್ಷದ ಕಾಮಗಾರಿಗೆ ಚಾಲನೆ ನೀಡಲಾಯಿತು.ಇದೇ ಸಂದರ್ಭದಲ್ಲಿ ೭೨ ಲಕ್ಷದ ಹೊನ್ನವಳ್ಳಿ ಗ್ರಾಮದ ಬೆಸ್ಕಾಂ ಕಚೇರಿಯ ನೂತನ ಕಟ್ಟಡ ನಿರ್ಮಾಣ, ೧೬೨ ಲಕ್ಷದ ನಗರದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಹೆಚ್ಚುವರಿ ಕಟ್ಟಡ ನಿರ್ಮಾಣ ಕಾಮಗಾರಿಗೂ ಚಾಲನೆ ನೀಡಲಾಯಿತು.ಈ ಸೇತುವೆಗಳ ನಿರ್ಮಾಣದಿಂದ ಗ್ರಾಮೀಣ ಭಾಗದ ಜನರ ಸಂಚಾರಕ್ಕೆ ಅನುಕೂಲವಾಗುವುದರ ಜೊತೆಗೆ ಅಪಘಾತಗಳನ್ನು ತಪ್ಪಿಸಬಹುದು, ಕೃಷಿ ಚಟುವಟಿಕೆಗಳು, ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಂಚಾರ ಮತ್ತಷ್ಟು ಸುಗಮವಾಗಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಹೊನವಳ್ಳಿ ಪಿಡಿಒ ಶಿವನಂಜೇಗೌಡ, ಭರತ್, ಲೋಕೋಪಯೋಗಿ ಇಲಾಖೆಯ ಎಇ ನಟರಾಜು, ವಿರುಪಾಕ್ಷ, ಬೆಸ್ಕಾಂ ಇಲಾಖೆಯ ಮನೋಹರ್, ಎಇ ಸೋಮಶೇಖರ ಗೌಡ, ಹೊನ್ನವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ನಗರಸಭಾ ಮಾಜಿ ಸದಸ್ಯ ಲೋಕನಾಥ್ ಸಿಂಗ್, ಪುರುಷೋತ್ತಮ್, ನರಸಿಂಹಮೂರ್ತಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಕ್ಷ ಸಂಘಟನೆಗೆ ಭಾರತ್ ಜೋಡೋ ಸಂಘ ಸಹಕಾರಿ: ಪಿ.ರವಿಕುಮಾರ್
ಬೆಂಗಳೂರು ಜಲ ಮಂಡಳಿ ಅಧಿಕಾರಿಗಳ ಕಳ್ಳಾಟ...!