ಚಿಕ್ಕ ವಯಸ್ಸಿನಲ್ಲೇ ದುಡಿಯುವ ಕೆಲಸಕ್ಕೆ ಹೋಗುವುದನ್ನು ತಪ್ಪಿಸಬೇಕು: ತಹಸೀಲ್ದಾರ್
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ತಹಸೀಲ್ದಾರ್ ಜಿ. ಸಂತೋಷಕುಮಾರ್ ಹೇಳಿದರು.
ಇಲ್ಲಿನ ತಾಪಂ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಕಾರ್ಮಿಕ ಇಲಾಖೆ, ವಕೀಲರ ಸಂಘ, ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ ಸಹಯೋಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಆರ್ಥಿಕ ಸ್ಥಿತಿ ಬೇರೆ ಬೇರೆ ಕಾರಣಗಳಿಂದ ಮಕ್ಕಳು ಶಾಲೆಯಿಂದ ಹೊರಗುಳಿದು ಕೃಷಿ, ಗ್ಯಾರೇಜ್, ಹೋಟೆಲ್ ಮುಂತಾದ ಕಡೆ ಚಿಕ್ಕ ವಯಸ್ಸಿನಲ್ಲೇ ದುಡಿಯುವ ಕೆಲಸಕ್ಕೆ ಹೋಗುವುದನ್ನು ತಪ್ಪಿಸಬೇಕು ಎಂದು ಹೇಳಿದರು.
ವಕೀಲರಾದ ಎಂ.ಎನ್. ಮಂಜುನಾಥ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ವಿರೋಧಿ ಕುರಿತು ಉಪಯುಕ್ತ ಮಾಹಿತಿ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ. ಪೂಜಾರ, ಪುರಸಭೆ ಮುಖ್ಯಾಧಿಕಾರಿ ಇಮಾಮ್ ಸಾಬ್, ಕ್ಷೇತ್ರ ಸಮನ್ವಯಾಧಿಕಾರಿ ಎ. ಕೋಟೆಪ್ಪ, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎಂ.ಪಿ.ಎಂ. ಅಶೋಕ, ವಕೀಲರಾದ ಪರಮೇಶ್ವರ ನಾಯ್ಕ, ರಾಜಭಕ್ಷಿ ಇತರರಿದ್ದರು.