ಕನ್ನಡಪ್ರಭ ವಾರ್ತೆ ಶಹಾಪುರ
ಶಹಾಪುರ ನಗರಕ್ಕೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಕೆರೆಗೂಡು ಗ್ರಾಮದ ಪಂಚಾಯ್ತಿಯಲ್ಲಿ ಎಲ್ಲಾ ಸದಸ್ಯರು ಒಟ್ಟಿಗೆ ಚರ್ಚಿಸಿ, ತೀರ್ಮಾನ ಮಾಡಿ 108 ಅಡಿ ಧ್ವಜದ ಸ್ತಂಭ ನಿರ್ಮಿಸಿ, ಹನುಮಾನ್ ಧ್ವಜ ಹಾರಿಸಬೇಕೆಂದುಕೊಂಡಿದ್ದರು. ಏಕಾಏಕಿ ಪೊಲೀಸರು ಗ್ರಾಮಕ್ಕೆ ನುಗ್ಗಿ ಲಾಠಿ ಚಾರ್ಚ್ ಮಾಡಿ, ಏರಿಸಿದ ಧ್ವಜವನ್ನು ಇಳಿಸಿರುವುದು ಖಂಡನಿಯ ಎಂದರು.
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪೊಲೀಸರ ಮೂಲಕ ಗೂಂಡಾಗಿರಿ ಮಾಡುತ್ತಿದೆ. ಪೊಲೀಸರು ಗ್ರಾಮಸ್ಥರ ಮೇಲೆ ಲಾಠಿ ಚಾರ್ಚ್ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ ಅವರು ಭೇಟಿ ನೀಡಿದ್ದ ವೇಳೆ ಮತ್ತೊಮ್ಮೆ ಗ್ರಾಮಸ್ಥರ ಮೇಲೆ ಲಾಠಿ ಚಾಜ್ ಮಾಡಿ ಅವರನ್ನು ಬಂಧಿಸಿರುವುದು ಸರಿಯಲ್ಲ ಎಂದರು.ಈ ಘಟನೆ ವಿರುದ್ಧ ಬಿಜೆಪಿ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದ ಅವರು, ಮುಂದಿನ ಹೋರಾಟಗಳನ್ನು ಯಾವ ರೀತಿ ಕೈಗೊಳ್ಳಬೇಕೆಂಬುದು ಇಂದು ಸಂಜೆ ಚರ್ಚೆ ಮಾಡಲಾಗುತ್ತದೆ.
ಶ್ರೀರಾಮಮಂದಿರ ಸ್ಥಾಪನೆಯಿಂದ ಇಡೀ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎನ್ನುವ ಭಯದಲ್ಲಿ ಅವರಿದ್ದಾರೆ. ರಾಜ್ಯ ಸರಿಕಾರ ಹತಾಶವಾಗಿ ಮನಬಂದಂತೆ ನಡೆದುಕೊಳ್ಳುತ್ತಿದೆ ಎಂದರು.