ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು

KannadaprabhaNewsNetwork | Published : May 28, 2024 1:05 AM

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿರುವುದು ಸ್ಪಷ್ಟವಾಗಿ ಘೋಚರಿಸುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ‌ ಹಚ್ಚಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದು ಖಂಡನೀಯ ಎಂದು ಬಿಜೆಪಿ ಮುಖಂಡ ಎಂ.ಬಿ.ಜೀರಲಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿರುವುದು ಸ್ಪಷ್ಟವಾಗಿ ಘೋಚರಿಸುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ‌ ಹಚ್ಚಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದು ಖಂಡನೀಯ ಎಂದು ಬಿಜೆಪಿ ಮುಖಂಡ ಎಂ.ಬಿ.ಜೀರಲಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಚನೆಯಾಗಿ ಒಂದು ವರ್ಷ ಕಳೆದಿದೆ. ಆದರೆ, ರಾಜ್ಯದಲ್ಲಿ ಕೋಮು, ಗಲಭೆ ಹೆಚ್ಚಾಗಿದೆ. ಪೊಲೀಸರು ಇಲ್ಲಿಯವರೆಗೂ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಬಂದವರು. ಆದರೆ, ಕಾಂಗ್ರೆಸ್ ಸರ್ಕಾರದ ಪೊಲೀಸರ ರಕ್ಷಣೆಗೆ ನಿಲ್ಲದೇ ಗಲಭೆ ಮಾಡುವವರಿಗೆ ಬೆಂಬಲ ಕೊಡುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ದೂರಿದರು.

ನಗರ ನಗರದಲ್ಲಿ ಕೊಲೆಗಳಾಗುತ್ತಿವೆ. ಕಾನೂನು‌ ಸುವ್ಯವಸ್ಥೆ ಹದಗೆಡಿಸುವವರ ಪರ ಕಾಂಗ್ರೆಸ್ ಸರ್ಕಾರ ನಿಲ್ಲುತ್ತಿದೆ. ಇವರು ರಾಜ್ಯದಲ್ಲಿ ಪಂಚ ಗ್ಯಾರಂಟಿ ಕೊಟ್ಟಿರುವುದು ದೊಡ್ಡ ಸಾಧನೆಯಾಗಿದೆ ಎಂದು ಹೇಳುತ್ತಿರುವ ಕಾಂಗ್ರೆಸ್ ಸರ್ಕಾರ. ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ನಯಾ ಪೈಸೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಆರೋಪಿಸುತ್ತಿದ್ದಾರೆ ಎಂದರು‌.

ಈ ಹಿಂದೆ ಕುಕ್ಕರ ಬಾಂಬ್ ಬ್ಲಾಸ್ಟ್ ಮಾಡಿದವರಿಗೆ ಇಂದಿನ ಡಿಸಿಎಂ ಶಿವಕುಮಾರ ಅವರು ಅವರು ನಮ್ಮ‌ ಸಹೋದರರು ಎಂದು ಹೇಳುತ್ತಾರೆ. ಅಲ್ಲದೆ, ವಿಧಾನಸೌಧದಲ್ಲಿ ನೂತನವಾಗಿ ರಾಜಸಭೆಗೆ ಆಯ್ಕೆಯಾದಾಗ ಪಾಕಿಸ್ತಾನ ಪರ ಘೋಷಣೆ ‌ಕೂಗಿದರೂ ಅವರ ಮೇಲೆ ಕ್ರಮ ಕೈಗೊಂಡಿಲ್ಲ. ಕಳೆದೊಂದು ವರ್ಷದಲ್ಲಿ ರಾಜ್ಯದಲ್ಲಿ ಆರ್ಥಿಕ ಅಪರಾಧದಲ್ಲಿ ಕರ್ನಾಟಕ ಟಾಪ್ 10ನಲ್ಲಿ ಬಂದಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ‌ನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಪಾಲಿಕೆ ಸದಸ್ಯ ಹನುಮಂತ ‌ಕೊಂಗಾಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.ಕೋಟ್‌...ನಮ್ಮ ಸರ್ಕಾರದ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಕೊಲೆಯಾದಾಗ ತತಕ್ಷಣ ಕ್ರಮಕೈಗೊಂಡಿದೆ. ಆದರೆ, ಕಾಂಗ್ರೆಸ್ ಸರ್ಕಾರ ಮಹ್ಮದ ತುಘಲಕ್ ಸರ್ಕಾರ ನಡೆಸುವುದನ್ನು ಬಿಡಬೇಕು. ರಾಜ್ಯದಲ್ಲಿ ಅತ್ಯಂತ ದುರ್ಬಲ ಗೃಹ ಸಚಿವರಿದ್ದಾರೆ. ಕಟ್ಟುನಿಟ್ಟಿನ ಕಾನೂನು ಸುವ್ಯವಸ್ಥೆ ಕಾಪಾಡಲು ಸಂಪೂರ್ಣ ವಿಫಲರಾಗಿದ್ದಾರೆ. ಕೂಡಲೇ ಅವರು ರಾಜೀನಾಮೆ ನೀಡಬೇಕು.ಎಂ.ಬಿ.ಜೀರಲಿ, ಬಿಜೆಪಿ ಮುಖಂಡ.

Share this article