ಹಕ್ಕು ಹಾಗೂ ಕರ್ತವ್ಯಗಳಿಗೆ ಸಂವಿಧಾನದಲ್ಲಿ ವಿಶೇಷ ಮಹತ್ವ ನೀಡಲಾಗಿದ್ದು, ಕಾನೂನು ಪಾಲನೆಯಿಂದ ಮಾತ್ರ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ.
ಕನ್ನಡಪ್ರಭ ವಾರ್ತೆ ಹೊನ್ನಾವರ
ಹಕ್ಕು ಹಾಗೂ ಕರ್ತವ್ಯಗಳಿಗೆ ಸಂವಿಧಾನದಲ್ಲಿ ವಿಶೇಷ ಮಹತ್ವ ನೀಡಲಾಗಿದ್ದು, ಕಾನೂನು ಪಾಲನೆಯಿಂದ ಮಾತ್ರ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಎಸ್‌ಡಿಎಂ ಪದವಿ ಕಾಲೇಜಿನ ಪ್ರಾಚಾರ್ಯ ಡಾ. ಜಿ.ಎನ್. ಭಟ್ಟ ಹೇಳಿದರು.
ತಾಲೂಕಾ ಆಡಳಿತ, ತಾಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಮತ್ತು ಎಸ್‌ಡಿಎಂ ಕಾಲೇಜು ಹೊನ್ನಾವಉ್ ಸಹಕಾರದಲ್ಲಿ ಎಸ್‌ಡಿಎಂ ಕಾಲೇಜಿನ ಆರ್.ಎಸ್. ಹೆಗಡೆ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ನಿಷೇಧ ಕಾಯ್ದೆ, ನಾಗರಿಕ ಹಕ್ಕು ಅಧಿನಿಯಮ, ಪೋಕ್ಸೋ / ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಇತರೆ ಕಾನೂನುಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸಹಾಯಕ ಸರ್ಕಾರಿ ಅಭಿಯೋಜಕಿ ಸಂಪದಾ ಗುನಗಾ ಉಪನ್ಯಾಸ ನೀಡಿ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಕಾಯ್ದೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ತಮ್ಮ ಹಕ್ಕು ಸಂರಕ್ಷಣೆ ಮಾಡಿಕೊಳ್ಳಲು ಅವಕಾಶವಿದೆ. ಕಾಯ್ದೆಯನ್ನು ದುರುಪಯೋಗಪಡಿಸಿಕೊಂಡರೆ ಶಿಕ್ಷೆ ಕೂಡ ಇದೆ ಎಂದು ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಹೇಶ, ಫೋಕ್ಸೋ, ಬಾಲ್ಯವಿವಾಹ ನಿಷೇಧ ಹಾಗೂ ಮಕ್ಕಳ ದತ್ತು ಕಾಯ್ದೆಗಳ ಕುರಿತು ಉಪನ್ಯಾಸ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಸತೀಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷ ಡಾ. ಎಂ.ಜಿ. ಹೆಗಡೆ ಮತ್ತು ಎಸ್.ಸಿ.ಎಸ್.ಟಿ. ಸೆಲ್‌ನ ಸಂಚಾಲಕ ಡಾ. ಗಣೇಶ ಅಳವಂಡಿ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸುಮಂಗಲಾ ಆರ್. ಭಟ್ಟ ಸ್ವಾಗತಿಸಿದರು. ಉಪನ್ಯಾಸಕಿ ಬಿಂದು ಅವಧಾನಿ ನಿರೂಪಿಸಿದರು. ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಕಾರ್ಯಾಗಾರದ ಸದುಪಯೋಗ ಪಡಿಸಿಕೊಂಡರು. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿಯ ಹಾಗೂ ಇತರೇ ಸಂಘ ಸಂಸ್ಥೆಗಳ ಮುಖಂಡರು ವಿದ್ಯಾರ್ಥಿಗಳು, ಸಾರ್ವಜನಿಕರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.