ಹುಬ್ಬಳ್ಳಿ:
ನಗರದ ಜೆಎಸ್ಎಸ್ ಸಕ್ರಿ ಕಾನೂನು ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ಒಂದು ದಿನದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಉದ್ಘಾಟಿಸಿ, ತಾಂತ್ರಿಕ ಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕಾನೂನು ಆಳವಾದ ಅಧ್ಯಯನ ಬಯಸುವ ವಿಷಯವಾಗಿದೆ. ವಿದ್ಯಾರ್ಥಿಗಳು ಪ್ರತಿನಿತ್ಯ ಕಾನೂನಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಳ್ಳುವ ಮೂಲಕ ಜ್ಞಾನ ವಿಸ್ತರಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನವನ್ನು ಸಮರ್ಪಕವಾಗಿ ಬಳಸಿಕೊಂಡು ಹೊಸ ವಿಷಯಗಳನ್ನು ಕಲಿಯುವ ಹವ್ಯಾಸ ಬೆಳೆಸಿಕೊಂಡಾಗ ಮಾತ್ರ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದರು.12ನೇ ಶತಮಾನದಲ್ಲಿಯೇ ಬಸವಣ್ಣನವರು ನ್ಯಾಯ, ನಿಷ್ಠುರತೆ ಹಾಗೂ ಲೋಕಕಲ್ಯಾಣದಲ್ಲಿ ನ್ಯಾಯದ ಪಾತ್ರವನ್ನು ತಮ್ಮ ವಚನಗಳ ಮೂಲಕ ಸಾರಿದ್ದಾರೆ. ಅವರ ವಿಚಾರಗಳು ಇಂದಿನ ಸಮಾಜಕ್ಕೂ ಪ್ರಸ್ತುತವಾಗಿವೆ. ವಿದ್ಯಾರ್ಥಿಗಳು ವಿಷಯಗಳ ಆಳಕ್ಕೆ ಇಳಿದು ಅಧ್ಯಯನ ಮಾಡುವುದರ ಜತೆಗೆ, ಹೊಸ ಜ್ಞಾನ ಸಂಪಾದನೆಗೆ ವಿವಿಧ ಮಾರ್ಗಗಳನ್ನು ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.
ಡಾ. ರೂಪಾ ಇಂಗಳಹಳ್ಳಿ ಪ್ರಾಸ್ತಾವಿಕ ಮಾತನಾಡಿ, ಕಾನೂನು ಅಧ್ಯಯನ ಆರಂಭಿಸಿರುವ ಪ್ರಥಮ ವರ್ಷದ ವಿದ್ಯಾರ್ಥಿಗಳು ಯಾವುದೇ ವಿಷಯವನ್ನು ಕಲಿಯುವ ಮುನ್ನ ಅದರ ಆಳಕ್ಕೆ ಇಳಿದು, ಅದರ ಮೂಲ ಸ್ವರೂಪ ಮತ್ತು ಅಸ್ತಿತ್ವವನ್ನು ಅರಿತುಕೊಳ್ಳಬೇಕು ಎಂದರು.