ಕನ್ನಡಪ್ರಭ ವಾರ್ತೆ ಹುಮನಾಬಾದ್
ಅವರು ತಾಲೂಕಿನ ಘಾಟಬೋರಳ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ನೂತನ ಪುತ್ಥಳಿ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಾರತ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಕೊಡುಗೆ ಅನನ್ಯವಾಗಿದೆ ಎಂದು ಹೇಳಿದರು.
ಕಾನೂನುಗಳಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯವಿಲ್ಲ. ಜನರ ಮನೋಭಾವ ಬದಲಾಗಬೇಕು. ಮನುಷ್ಯನನ್ನು ಮನುಷ್ಯನಾಗಿ ಕಾಣುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ಇಂದಿನ ನಾಗರಿಕ ಜಗತ್ತಿನಲ್ಲಿ ಯಾವುದೇ ಸಮಾಜ ಅಭಿವೃದ್ಧಿ ಆಗಬೇಕಾದರೆ ಗುಣಮಟ್ಟದ ಶಿಕ್ಷಣ ಅವಶ್ಯಕವಾಗಿದೆ. ಹೀಗಾಗಿ ಎಲ್ಲರೂ ಜಾಗೃತರಾಗಿ ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಉತ್ತಮ ಸಂಸ್ಕಾರಗಳನ್ನು ಕೊಡಬೇಕು. ಮಕ್ಕಳು ಕೂಡಾ ನಿರಂತರ ಅಧ್ಯಯನ ಮಾಡುವ ಮೂಲಕ ಉತ್ತಮ ಸಾಧನೆ ಗೈದು ಗ್ರಾಮಕ್ಕೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಭಂತೆ ಸಂಗಾನಂದ, ಭಂತೆ ಸಂಘಜ್ಯೋತಿ, ಭಂತೆ ಧಮ್ಮರತ್ನ, ಭಂತೆ ಧಮ್ಮದೀಪ, ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಸ್, ಜಿಪಂ ಮಾಜಿ ಉಪಾಧ್ಯಕ್ಷ ಡಾ.ಪ್ರಕಾಶ ಪಾಟೀಲ್, ಸಂಭಾಜಿ ಪಾಟೀಲ್, ರಾಜಕುಮಾರ ಪಾಟೀಲ್, ತಾ.ಪಂ. ಮಾಜಿ ಅಧ್ಯಕ್ಷ ರಮೇಶ ಡಾಕುಳಗಿ, ಅಂಕುಶ ಗೋಖಲೆ ಹಾಗೂ ಲಕ್ಷ್ಮಿಪುತ್ರ ಮಾಳಗೆ ಸೇರಿ ಅನೇಕರಿದ್ದರು.