ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ವಕೀಲರು ಸಭೆ ನಡೆಸಿ ನ್ಯಾಯಾಲಯದ ಕಲಾಪದಿಂದ ದೂರ ಉಳಿಯುವಂತೆ ತಿರ್ಮಾನಿಸಿದರು. ನಂತರ ತಾಲೂಕು ಕಚೇರಿವರೆಗೆ ಕಾಲ್ನಡಿಗೆಯಲ್ಲಿ ಜಾಥಾ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದರು.
ನ.20ರಂದು ಹೊಸೂರು ನ್ಯಾಯಾಲಯದ ಮುಂಭಾಗದ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಆಯುಧಗಳಿಂದ ವಕೀಲನನ್ನು ಜನರ ನಡುವೆಯೇ ಹತ್ಯೆ ಮಾಡಿದ್ದಾನೆ. ಈ ಹಿಂದೆಯೂ ವಕೀಲರ ಮೇಲೆ ಹಲ್ಲೆಗಳು, ಹಿಂಸೆಗಳು ನಡೆಯುತ್ತಲೇ ಬರುತ್ತಿವೆ. ವಕೀಲರ ಸಂರಕ್ಷಣಾ ಕಾಯಿದೆ ಜಾರಿ ಇದ್ದರೂ ಸಹ ವಕೀಲರಿಗೆ ಯಾವುದೇ ರಕ್ಷಣೆ, ಭದ್ರತೆ ದೊರೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕೂಡಲೇ ವಕೀಲರ ಸಂರಕ್ಷಣ ಕಾಯಿದೆಯನ್ನು ಪರಿಣಾಮಕಾರಿಯಾಗಿ ತಿದ್ದುಪಡಿಮಾಡಿ ವಕೀಲರುಗಳಿಗೆ ಹಲ್ಲೆ, ಹಿಂಸೆ ನಡೆಸಿದವರ ವಿರುದ್ಧ ಕಠಿಣ ಶಿಕ್ಷೆ ಜಾರಿಗೊಳಿಸುವಂತೆ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.