ಕನ್ನಡಪ್ರಭ ವಾರ್ತೆ ತುಮಕೂರು
ಈ ವೇಳೆ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಜಿಲ್ಲಾಧ್ಯಕ್ಷ ಕೆಂಪರಾಜಯ್ಯ, ವಕೀಲರ ಮೇಲೆ ಹಲ್ಲೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಕೀಲರ ಸಂರಕ್ಷಣ ಕಾಯ್ದೆ ಇನ್ನಷ್ಟು ಕಠಿಣಗೊಳಿಸಬೇಕು. ಈಗ ಕೇವಲ 3 ವರ್ಷ ಶಿಕ್ಷೆ ಇದ್ದು ಇದನ್ನು ಏಳು ವರ್ಷಕ್ಕೆ ವಿಸ್ತರಿಸಬೇಕು ಮತ್ತು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಇತ್ತೀಚಿನ ದಿನಗಳಲ್ಲಿ ವಕೀಲರ ಮೇಲೆ ಹಲ್ಲೆಗಳು ಹೆಚ್ಚಳವಾಗುತ್ತಿದ್ದು ಅದನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಹಿರಿಯ ವಕೀಲ ಸಣ್ಣಕ್ಕಿ ವೆಂಕಟೇಶ್ ಅವರ ಮೇಲಿನ ಹಲ್ಲೆ ಇಡೀ ವಕೀಲರ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಹೇಳಿದರು.ವಕೀಲರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ.ಎನ್.ನವೀನ್ ನಾಯಕ್ ಮಾತನಾಡಿ, ವಕೀಲರ ಮೇಲಿನ ಹಲ್ಲೆ ಅತ್ಯಂತ ಅಮಾನವೀಯವಾಗಿದ್ದು ಇದನ್ನು ಖಂಡಿಸುತ್ತೇವೆ. ಯಾವುದೇ ಸಮಸ್ಯೆ ಇದ್ದರೂ ಸಹ ಸೌಹಾರ್ದತೆಯಿಂದ ಕಕ್ಷಿದಾರರು ಮಾತುಕತೆ ಮೂಲಕ ಇತ್ಯರ್ಥಪಡಿಸಿಕೊಳ್ಳಬೇಕು. ಅದು ಬಿಟ್ಟು ಏಕಾಏಕಿ ಹಲ್ಲೆ, ಕೊಲೆ ಪ್ರಯತ್ನ ಮಾಡುವುದು ತಪ್ಪು. ವಕೀಲರು ತಪ್ಪು ಮಾಡಿದರೆ ಅದಕ್ಕೆ ಸಂಬಂಧಿಸಿದ ಕಾನೂನು ಹೋರಾಟ ಇದ್ದೇ ಇರುತ್ತದೆ. ಆದರೆ ಕಕ್ಷಿದಾರರು ತಾಳ್ಮೆ, ಸಹನೆಯಿಂದ ವರ್ತಿಸಿದರೆ ಖಂಡಿತವಾಗಿಯೂ ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ತಿಳಿಸಿದರು.