ಜ್ಞಾನಪ್ರಕಾಶ್ ಸ್ವಾಮೀಜಿಯ ಹೇಳಿಕೆ ಖಂಡಿಸಿ ವಕೀಲರ ಪ್ರತಿಭಟನೆ

KannadaprabhaNewsNetwork |  
Published : Oct 30, 2025, 01:15 AM IST
29ಎಚ್ಎಸ್ಎನ್17 :  | Kannada Prabha

ಸಾರಾಂಶ

ವಕೀಲರ ಸಂಘದ ಅಧ್ಯಕ್ಷ ಮೊಗಣ್ಣಗೌಡ ಮತ್ತು ವಕೀಲ ಶ್ರೀಕಾಂತ್ ಇತರರು ಮಾಧ್ಯಮದೊಂದಿಗೆ ಮಾತನಾಡಿ, ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿಕೆಗೆ ನಮ್ಮ ವಿರೋಧವಿದೆ. ಅವರ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ನಾವು ನ್ಯಾಯಾಲಯದ ಕಲಾಪವನ್ನು ತಾತ್ಕಾಲಿಕವಾಗಿ ನಿಲ್ಲಿಸಿ ಜ್ಞಾನಪ್ರಕಾಶ್ ಸ್ವಾಮೀಜಿಯ ವಿಚಾರದಲ್ಲಿ ಜಿಲ್ಲೆಯ ಉಸ್ತುವಾರಿ ಅಧಿಕಾರಿಗೆ ಮನವಿ ನೀಡಲು ಬಂದಿದ್ದೇವೆ. ಆದರೆ ಜಿಲ್ಲಾಧಿಕಾರಿಗಳು ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದ್ದಾರೆ. ಇದು ವಕೀಲರ ಗೌರವಕ್ಕೆ ಧಕ್ಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಜ್ಞಾನಪ್ರಕಾಶ್ ಸ್ವಾಮೀಜಿಯ ನಡವಳಿಕೆ ಖಂಡಿಸಿ ಆರಂಭವಾದ ವಕೀಲರ ಪ್ರತಿಭಟನೆ ನಂತರದಲ್ಲಿ ಮನವಿ ಸ್ವೀಕರಿಸಲು ಬಾರದ ಜಿಲ್ಲಾಧಿಕಾರಿಗಳ ನಡೆ ಖಂಡಿಸಿ ರಸ್ತೆತಡೆ ನಡೆಸುವಂತಾದ ಘಟನೆ ಬುಧವಾರ ನಗರದಲ್ಲಿ ನಡೆಯಿತು.

ವಕೀಲರ ಸಂಘದ ಅಧ್ಯಕ್ಷ ಮೊಗಣ್ಣಗೌಡ ಮತ್ತು ವಕೀಲ ಶ್ರೀಕಾಂತ್ ಇತರರು ಮಾಧ್ಯಮದೊಂದಿಗೆ ಮಾತನಾಡಿ, ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿಕೆಗೆ ನಮ್ಮ ವಿರೋಧವಿದೆ. ಅವರ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ನಾವು ನ್ಯಾಯಾಲಯದ ಕಲಾಪವನ್ನು ತಾತ್ಕಾಲಿಕವಾಗಿ ನಿಲ್ಲಿಸಿ ಜ್ಞಾನಪ್ರಕಾಶ್ ಸ್ವಾಮೀಜಿಯ ವಿಚಾರದಲ್ಲಿ ಜಿಲ್ಲೆಯ ಉಸ್ತುವಾರಿ ಅಧಿಕಾರಿಗೆ ಮನವಿ ನೀಡಲು ಬಂದಿದ್ದೇವೆ. ಆದರೆ ಜಿಲ್ಲಾಧಿಕಾರಿಗಳು ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದ್ದಾರೆ. ಇದು ವಕೀಲರ ಗೌರವಕ್ಕೆ ಧಕ್ಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಕೀಲರು ಜಿಲ್ಲಾಧಿಕಾರಿ ಕಚೇರಿ ಎದುರು ಬಿ.ಎಂ. ರಸ್ತೆಗೆ ಬಂದು ನಮ್ಮ ಮನವಿ ಸ್ವೀಕರಿಸಬೇಕು ಎಂದು ಪಟ್ಟು ಹಿಡಿದು, ಡಿಸಿ ಕಚೇರಿ ಎದುರಿನ ಬಿ.ಎಂ. ರಸ್ತೆಯನ್ನು ಒಂದು ಗಂಟೆಗೂ ಹೆಚ್ಚು ಕಾಲ ತಡೆಹಿಡಿದರು. ಪ್ರತಿಭಟನೆಯಲ್ಲಿ ದುರಹಂಕಾರಿ ವರ್ತನೆ ಪ್ರದರ್ಶಿಸಿರುವ ಜಿಲ್ಲಾಧಿಕಾರಿ ಕೆಳಗಿಳಿಯಲಿ” ಎಂಬ ಘೋಷಣೆಗಳು ಮೊಳಗಿದವು. ಜಿಲ್ಲಾಧಿಕಾರಿ ತಕ್ಷಣವೇ ಪ್ರತಿಭಟನಾ ಸ್ಥಳಕ್ಕೇ ಬಂದು ಮನವಿ ಸ್ವೀಕರಿಸಬೇಕೆಂದು ವಕೀಲರು ಆಗ್ರಹಿಸಿದರು. ಮನವಿ ಸ್ವೀಕರಿಸದ ಹಿನ್ನೆಲೆಯಲ್ಲಿ ವಕೀಲರು ಜಿಲ್ಲಾಧಿಕಾರಿಯ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡುವುದಾಗಿ ಎಚ್ಚರಿಸಿದರು.ವಕೀಲರ ಸಂಘದ ಮುಖಂಡರು ಗುರುವಾರವೂ ಪ್ರತಿಭಟನೆಯನ್ನು ಮುಂದುವರಿಸಿ, ನಗರದ ಎನ್.ಆರ್‌. ವೃತ್ತದಲ್ಲಿಯೂ ರಸ್ತೆತಡೆ ನಡೆಸುವ ನಿರ್ಧಾರ ಪ್ರಕಟಿಸಿದರು. ಈ ವೇಳೆ ಜಿಲ್ಲಾಧಿಕಾರಿಗಳು ಇಲ್ಲಿಗೆ ಬಂದು ನಮ್ಮ ಮನವಿ ಸ್ವೀಕರಿಸಲೇಬೇಕು ಎಂದು ಒತ್ತಾಯಿಸಿದರು. ವಕೀಲರು ಜಿಲ್ಲಾಧಿಕಾರಿಯ ವರ್ತನೆಯನ್ನು “ದುರಹಂಕಾರಿ, ಅಸಹಕಾರದ” ಎಂದು ಬಣ್ಣಿಸಿ, ಅವರನ್ನು ಕೂಡಲೇ ವರ್ಗಾವಣೆಗೊಳಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.ಬಿ.ಎಂ. ರಸ್ತೆ ಮಧ್ಯೆ ಪ್ರತಿಭಟನೆ ಮಾಡಿದ್ದರಿಂದ ಒಂದು ಗಂಟೆಗೂ ಹೆಚ್ಚು ಕಾಲ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸಬೇಕಾಯಿತು. ತುರ್ತಾಗಿ ತಲುಪಬೇಕಾದವರು ಪರದಾಡಿದರು.

PREV

Recommended Stories

ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ಹಣೆಯಲ್ಲಿ ಬರೆದಿದ್ದರೆ ಡಿಕೆಶಿ ಸಿಎಂ ಆಗ್ತಾರೆ ಇಲ್ದಿದ್ರೆ ಇಲ್ಲ : ಡಿಕೆಸು