ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಸರ್ಕಾರಕ್ಕೆ ಸಲ್ಲಿಸಿರುವ ಬೇಡಿಕೆಗಳನ್ನು ಒಂದು ತಿಂಗಳೊಳಗಾಗಿ ಈಡೇರಿಸದೆ ಇದ್ದಲ್ಲಿ ವಕೀಲರುಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿ ನಮ್ಮ ನಡೆಯನ್ನು ವಿಧಾನಸೌಧ, ವಕೀಲರ ಪರಿಷತ್ ಕಡೆಗೆ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾನಿರತ ವಕೀಲರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.ವಕೀಲರಿಗೆ ರಕ್ಷಣೆ ನೀಡಲು ಆಗ್ರಹ
ಒಕ್ಕೂಟದ ರಾಜ್ಯ ಸಮಿತಿ ಸದಸ್ಯ ಎನ್.ಎಚ್.ರಮೇಶ್ ಮಾತನಾಡಿ, ಸರ್ಕಾರ ವಕೀಲರಿಗೆ ರಕ್ಷಣೆ ನೀಡಬೇಕು ಮತ್ತು ವಕೀಲರ ಸಂರಕ್ಷಣೆ ಕಾಯ್ದೆ-2024ಕ್ಕೆ ಸೂಕ್ತ ತಿದ್ದುಪಡಿಯಾಗಬೇಕು. ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯದ ಮಾರ್ಗಸೂಚಿಯನ್ನು ಪಾಲಿಸಬೇಕು. ಅಲ್ಲದೇ ಆವೈಜ್ಞಾನಿಕ ಅಖಿಲ ಭಾರತ ಬಾರ್ ಪರೀಕ್ಷೆ ರದ್ದು ಪಡಿಸಬೇಕು. ಕಿರಿಯ ವಕೀಲರಿಗೆ 2 ವರ್ಷಗಳ ಕಾಲ ಮಾಸಿಕ 10,000 ರೂ, (ಸಹಾಯಧನ) ನೀಡಬೇಕು. ರಾಜ್ಯದ ಎಲ್ಲಾ ತಾಲ್ಲೂಕು ವಕೀಲರ ಸಂಘಗಳಿಗೆ ವರ್ಷಕ್ಕೆ 5 ಲಕ್ಷ ರೂ, ಅನುದಾನ ಮಂಜೂರು ಮಾಡಬೇಕು ಮತ್ತು ಜಿಲ್ಲಾ ವಕೀಲರ ಸಂಘಗಳಿಗೆ ರೂ. 10 ಲಕ್ಷ ರೂಪಾಯಿಗಳ ಅನುದಾನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು..ರಾಜ್ಯ ಸರ್ಕಾರವು ವಕೀಲರಿಗೆ ಕಡ್ಡಾಯವಾಗಿ ವೈದ್ಯಕೀಯ ಮತ್ತು ಜೀವ ವಿ.ಮಾ ಸೌಲಭ್ಯವನ್ನು ಒದಗಿಸಬೇಕು ಎಂದು ಆಗ್ರಹಿಸಿದ ಅವರು, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣಗಳಲ್ಲಿ ವಕೀಲರ ಅಕಾಡೆಮಿಗಳನ್ನು ಸ್ಥಾಪಿಸಬೇಕು. ರಾಜ್ಯದಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಸ್ಥಾಪಿಸಲು ಮುಂದಾಗಬೇಕು. ಹಾಗೆಯೇ ಈಗಿರುವ ನ್ಯಾಯಾಲಯಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೇಳಿದರು.ವಕೀಲರಿಗೆ ಟೋಲ್ ಶುಲ್ಕ ಮುಕ್ತ