ರಾಜೀವ್ ಗಾಂಧಿ, ದೇವರಾಜ ಅರಸು ಜಯಂತಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ

KannadaprabhaNewsNetwork |  
Published : Aug 21, 2024, 12:30 AM IST
20ಕೆಎಂಎನ್ ಡಿ15 | Kannada Prabha

ಸಾರಾಂಶ

ಆಧುನಿಕ ಭಾರತದ ಕನಸುಗಾರರಾಗಿದ್ದ ರಾಜೀವ್ ಗಾಂಧಿ ದೇಶದ ಸಮಗ್ರತೆಗಾಗಿ ತ್ಯಾಗ, ಬಲಿದಾನ ಮಾಡಿದರು. ದೇಶದ ಅಭಿವೃದ್ಧಿಗೆ 21ನೇ ಶತಮಾನದ ಏಳಿಗೆಗೆ ಅತ್ಯಂತ ಪ್ರಾಮಾಣಿಕತೆಯಿಂದ ಶ್ರಮಿಸಿದ ಮಹಾನ್ ನಾಯಕರು. ಅವರ ಆಡಳಿತ ಇಡೀ ವಿಶ್ವಕ್ಕೆ ಮಾದರಿಯಾಗಿತ್ತು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಡಿಜಿಟಲ್‌ ಕ್ರಾಂತಿಯ ಹರಿಕಾರರಾಗಿ ರಾಜೀವ್ ಗಾಂಧಿ, ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಕೊಡುಗೆ ಅಪಾರವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ ಬಣ್ಣಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಮತ್ತು ಮಾಜಿ ಸಿಎಂ ದಿ.ದೇವರಾಜ ಅರಸು ಜಯಂತಿಯಲ್ಲಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಆಧುನಿಕ ಭಾರತದ ಕನಸುಗಾರರಾಗಿದ್ದ ರಾಜೀವ್ ಗಾಂಧಿ ದೇಶದ ಸಮಗ್ರತೆಗಾಗಿ ತ್ಯಾಗ, ಬಲಿದಾನ ಮಾಡಿದರು. ದೇಶದ ಅಭಿವೃದ್ಧಿಗೆ 21ನೇ ಶತಮಾನದ ಏಳಿಗೆಗೆ ಅತ್ಯಂತ ಪ್ರಾಮಾಣಿಕತೆಯಿಂದ ಶ್ರಮಿಸಿದ ಮಹಾನ್ ನಾಯಕರು. ಅವರ ಆಡಳಿತದಲ್ಲಿ ದೇಶದ ಯುವಕರು ಅತ್ಯಂತ ಉನ್ನತ ಮಟ್ಟದ ಸ್ಥಾನಗಳಿಗೆ ಅರ್ಹತೆಯನ್ನು ಗಳಿಸಿ ಮಾಹಿತಿ ತಂತ್ರಜ್ಞಾನದಲ್ಲಿ ಇಡೀ ವಿಶ್ವಕ್ಕೆ ಮಾದರಿಯಾಗಿದ್ದರು ಎಂದರು.

ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಿದ್ದ ದೇವರಾಜ ಅರಸು ಅವರ ಕೊಡುಗೆ ಜನಸಾಮಾನ್ಯರಲ್ಲಿ ಅಚ್ಚಳಿಯದ ಉಳಿದಿದೆ. ಅವರ ಬದುಕಿನ ಮೌಲ್ಯ ಮತ್ತು ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಈ ವೇಳೆ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ತಾಪಂ ಮಾಜಿ ಉಪಾಧ್ಯಕ್ಷ ಸಿ.ಮಾಧು, ಪುರಸಭೆ ಸದಸ್ಯರಾದ ಎಂ.ಎನ್.ಶಿವಸ್ವಾಮಿ, ಎಂ.ಆರ್.ರಾಜಶೇಖರ್, ಪ್ರಮೀಳಾ, ಮಾಜಿ ಅಧ್ಯಕ್ಷ ಗಂಗರಾಜೇ ಅರಸು, ಮುಖಂಡರಾದ ಆಜಂ, ಶ್ರೀನಿವಾಸ್, ದಶರಥ, ಆನಂದ್ ಸೇರಿದಂತೆ ಇತರರು ಇದ್ದರು.ತಳ ಸಮುದಾಯದ ಏಳಿಗೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟ ಡಿ.ದೇವರಾಜ ಅರಸು

ಮದ್ದೂರು:ಶ್ರೀಮಂತ ಅರಸು ಮನೆತನದಲ್ಲಿ ಹುಟ್ಟಿದರೂ ಸಾಮಾನ್ಯ ರೈತನಾಗಿ ಬದುಕಿ ತಳ ಸಮುದಾಯದ ಏಳಿಗೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟ ವ್ಯಕ್ತಿ ಎಂದರೇ ಡಿ.ದೇವರಾಜ ಅರಸು ಎಂದು ತಾಪಂ ಇಒ ರಾಮಲಿಂಗಯ್ಯ ಸ್ಮರಿಸಿದರು.ಪಟ್ಟಣದ ಸಿಡಿಎಸ್ ಭವನದಲ್ಲಿ ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 109ನೇ ಜನ್ಮ ದಿನಾಚರಣೆಯನ್ನು ತಾಪಂ ಇಒ ರಾಮಲಿಂಗಯ್ಯ ಹಾಗೂ ಉಪ ತಹಸೀಲ್ದಾರ್ ಸೋಮಶೇಖರ್ ಉದ್ಘಾಟಿಸಿದ ಬಳಿಕ ಅರಸು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಧ್ಯಾಪಕಿ ಲತಾ ಪ್ರಧಾನ ಭಾಷಣ ಮಾಡಿದರು. ಇದೇ ವೇಳೆ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವೇದಿಕೆಯಲ್ಲಿ ಉಪ ತಹಸೀಲ್ದಾರ್ ಸೋಮಶೇಖರ್, ಸಿಡಿಪಿಒ ನಾರಾಯಣ್, ಪುರಸಭಾ ಮುಖ್ಯಾಧಿಕಾರಿ ಮೀನಾಕ್ಷಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ್, ಕಸಾಪ ಅಧ್ಯಕ್ಷ, ಸುನೀಲ್ ಕುಮಾರ್, ಲಿಂಗಯ್ಯ, ಚನ್ನಸಂದ್ರ ಲಕ್ಷ್ಮಣ್, ವೆಂಕಟಾಚಲಯ್ಯ, ಮತ್ತಿತರರು ಇದ್ದರು.

PREV