ಕನ್ನಡಪ್ರಭ ವಾರ್ತೆ ಮೈಸೂರುಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ಸೂಚಿಸುವ ಸಲುವಾಗಿ ಐದು ಜಿಲ್ಲೆಗಳ ಮುಖಂಡರು, ಪ್ರಗತಿಪರ ಸಂಘಟನೆಗಳ ನಾಯಕರು, ರಾಜಕೀಯ ನಾಯಕರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳ ಸಭೆಯನ್ನು ದಿವಾನ್ಸ್ ರಸ್ತೆಯ ಯಾದವ ಸಮುದಾಯ ಭವನದಲ್ಲಿ ಅ. 27ರಂದು ಬೆಳಗ್ಗೆ 11ಕ್ಕೆ ಆಯೋಜಿಸಲಾಗಿದೆ.ರಾಜ್ಯದಲ್ಲಿ ಡಿ. ದೇವರಾಜ ಅರಸು ಅವರ ಬಳಿಕ ಐದು ವರ್ಷಗಳ ಕಾಲ ಪೂರ್ಣಾವಧಿ ಪೂರೈಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ 2ನೇ ಬಾರಿಗೆ ಸಿಎಂ ಆಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಿದ್ದರಾಮಯ್ಯ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿವೆ. ಇಷ್ಟು ವರ್ಷಗಳ ರಾಜಕೀಯ ಜೀವನಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿವೆ. ಇದೆಲ್ಲದರ ಹೊರತಾಗಿಯೂ ಸಿಎಂ ಅವರೊಂದಿಗೆ ನಾವಿದ್ದೇವೆ ಎಂಬುದನ್ನು ಎಲ್ಲಾ ವರ್ಗಗಳು ಸಾಬೀತು ಮಾಡಿವೆ. ಮುಖ್ಯಮಂತ್ರಿಗಳಿಗೆ ನೈತಿಕ ಬೆಂಬಲ ಸೂಚಿಸುವ ಸಲುವಾಗಿ ಈ ಸಭೆ ಆಯೋಜಿಸಲಾಗಿದೆ ಎಂದು ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ತಿಳಿಸಿದ್ದಾರೆ.