ನಾಯಕತ್ವವೆಂದರೆ ಎಲ್ಲರೊಂದಿಗೆ ಬೆರೆತು ಒಗ್ಗಟ್ಟಿನಿಂದ ಕೆಲಸ ಮಾಡುವುದು: ಗುಡ್ಡಿ ಸುಧಾಕರ್ ಹೆಗ್ಡೆ

KannadaprabhaNewsNetwork |  
Published : Nov 04, 2026, 01:30 AM IST
03ಹೆಬ್ರಿ | Kannada Prabha

ಸಾರಾಂಶ

ನಾಯಕತ್ವವೆಂದರೆ ದರ್ಪ ಪ್ರದರ್ಶಿಸುವುದಲ್ಲ, ಎಲ್ಲರೊಂದಿಗೆ ಬೆರೆತು ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿದೆ. ನಾಯಕನಾದವನು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಿದಾಗ ಮಾತ್ರ ಯಶಸ್ಸು ಸಾಧ್ಯ ಎಂದು ಪ್ರಕೃತಿಪ್ರಿಯ ಗುಡ್ಡಿ ಸುಧಾಕರ್ ಹೆಗ್ಡೆ ಹೇಳಿದರು.

ಹೆಬ್ರಿ: ನಾಯಕತ್ವವೆಂದರೆ ದರ್ಪ ಪ್ರದರ್ಶಿಸುವುದಲ್ಲ, ಎಲ್ಲರೊಂದಿಗೆ ಬೆರೆತು ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿದೆ. ನಾಯಕನಾದವನು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಿದಾಗ ಮಾತ್ರ ಯಶಸ್ಸು ಸಾಧ್ಯ ಎಂದು ಪ್ರಕೃತಿಪ್ರಿಯ ಗುಡ್ಡಿ ಸುಧಾಕರ್ ಹೆಗ್ಡೆ ಹೇಳಿದರು.

ಅವರು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯನ್ನು ಉದ್ಘಾಟಿಸಿ ಮಾತನಾಡಿದರು. ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡ ಅವರು, ಕಾಲಕ್ಕೆ ತಕ್ಕಂತೆ ನಾಯಕತ್ವದ ಅರ್ಥವೂ ಬದಲಾಗುತ್ತಿದ್ದು, ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಅರುಣ್ ಶೆಟ್ಟಿ ಅವರು ಶೈಕ್ಷಣಿಕ ಸಾಧನೆ ಮಾಡಿದ ಕಾಲೇಜಿನ ವಿದ್ಯಾರ್ಥಿಗಳಿಗೆ ದೊಡ್ಡ ಮೊತ್ತದ ಪ್ರೋತ್ಸಾಹಧನ ನೀಡಿ ಪ್ರೋತ್ಸಾಹಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆ ಎಸ್. ಅವರು ಕಾಲೇಜಿನ ಸಾಧನೆಗಳು ಹಾಗೂ ಪ್ರಸ್ತುತ ಸ್ಥಿತಿಗತಿಗಳ ಕುರಿತು ವಿವರಿಸಿದರು. ಕಾಲೇಜು ಇನ್ನಷ್ಟು ಅಭಿವೃದ್ಧಿ ಹೊಂದಲು ಊರಿನ ಗಣ್ಯರು, ಪೋಷಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸಹಕಾರ ಅಗತ್ಯವಿದೆ ಎಂದರು.ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ರಾಮಕೃಷ್ಣ ಭಟ್, ಶಾಮಲಾ ವಿಠಲ ಶೆಟ್ಟಿ, ಜನಾರ್ದನ್ ಎಚ್., ಶಶಿಧರ ಶೆಣೈ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಂಕರ ಸೇರಿಗಾರ್ ಹಾಗೂ ಪೋಷಕರ ವೇದಿಕೆ ಅಧ್ಯಕ್ಷೆ ಪ್ರಿಯದರ್ಶಿನಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕಿ ಸುಷ್ಮಾ ರಾವ್ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಹಪ್ರಾಧ್ಯಾಪಕಿ ಡಾ. ಮೇವಿ ಮಿರಾಂಡ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಐಕ್ಯೂಎಸಿ ಸಂಚಾಲಕ ಡಾ. ಗಣೇಶ್ ಎಸ್., ಸಾಂಸ್ಕೃತಿಕ ವೇದಿಕೆಯ ಸಂಚಾಲಕಿ ಜ್ಯೋತಿ, ವಿದ್ಯಾರ್ಥಿ ವೇದಿಕೆಯ ಅಧ್ಯಕ್ಷ ಪವನ್, ಜೊತೆ ಕಾರ್ಯದರ್ಶಿ ಪ್ರಸನ್ನ ಹಾಗೂ ಸಾಂಸ್ಕೃತಿಕ ವೇದಿಕೆಯ ಕಾರ್ಯದರ್ಶಿ ದೀಕ್ಷಿತ್ ವೇದಿಕೆಯಲ್ಲಿದ್ದರು.ಉಪಾಧ್ಯಕ್ಷೆ ಸಂಗೀತ ಡಿ.ಎಂ. ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ವೇದಿಕೆಯ ಕಾರ್ಯದರ್ಶಿ ಆಕರ್ಶ್ ವಂದಿಸಿದರು. ಅಕ್ಷತಾ ಹಾಗೂ ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫೋಟೋಗಳನ್ನು ಆಧರಿಸಿ ಮಹಿಳೆಯ ಆದಾಯ ನಿರ್ಧರಿಸಲಾಗದು: ಕೋರ್ಟ್‌
13ರಂದು ಮೆಟ್ರೋ ಗುಲಾಬಿ ಮಾರ್ಗ ಉದ್ಘಾಟನೆ