ಕನ್ನಡಪ್ರಭ ವಾರ್ತೆ ವಿಜಯಪುರ
ಸ್ಕೀಜೋಫ್ರೇನಿಯಾ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವವರ ಚಿಕಿತ್ಸೆ ಬಗ್ಗೆ ಕುಟುಂಬದ ಸದಸ್ಯರು ಕಾಯಿಲೆಯ ಅರಿವಿನ ಕೊರತೆಯಿಂದ ಗಮನಹರಿಸುವುದಿಲ್ಲ. ಅದಕ್ಕಾಗಿ ಇಂಥ ಕಾಯಿಲೆಯಿಂದ ಬಳಲುತ್ತಿರುವವರನ್ನು ಗುರುತಿಸಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಲು ಪ್ರಯತ್ನಿಸಬೇಕು. ಇದರಿಂದ ಎಷ್ಟೋ ಕುಟುಂಬಗಳ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ ಎಂದು ೪ನೇ ಹೆಚ್ಚುವರಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಲೋಕೇಶ ಧನಪಾಲ್ ಹವಲೆ ತಿಳಿಸಿದರು.ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ವತಿಯಿಂದ ವಿಶ್ವ ಸ್ಕೀಜೋಫ್ರೇನಿಯಾ ದಿನಾಚರಣೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳ್ಳಿ ಮಾತನಾಡಿ, ಮಾನಸಿಕ ಖಿನ್ನತೆಯಿಂದ ಹೊರ ಬರುಲು ದೈನಂದಿನ ಕೆಲಸದೊಂದಿಗೆ ಯೋಗಾಭ್ಯಾಸ ಸೇರಿದಂತೆ ಇತರೆ ಚಟುವಟಿಕೆಗಳನ್ನು ನಡೆಸಬೇಕು ಎಂದು ವಿವರಿಸಿದರು.ಮನೋವೈದ್ಯ ಡಾ.ಮಂಜುನಾಥ ಮಸಳಿ ಮಾತನಾಡಿ, ರಾಷ್ಟ್ರೀಯ ಮಾನಸಿಕ ಆರೋಗ್ಯ ಸಮೀಕ್ಷೆ ಪ್ರಕಾರ ಶೇ. ೧ರಿಂದ ೫ ರಷ್ಟು ಜನರು ಸ್ಕೀಜೋಫ್ರೇನಿಯಾದಿಂದ ಬಳಲುತ್ತಿದ್ದಾರೆ. ಯಾವುದೇ ರೀತಿಯ ಮಾನಸಿಕ ರೋಗ ಅಂದರೆ ಒಬ್ಬಂಟಿಯಾಗಿರುವುದು, ನಿದ್ರಾಹೀನತೆ, ಸರಿಯಾಗಿ ಕೆಲಸ ಮಾಡಿದಿರುವುದು, ಜಿಗುಪ್ಸೆ, ಹತಾಷೆ ಇತ್ಯಾದಿ ಲಕ್ಷಣಗಳು ಕಂಡುಬಂದಲ್ಲಿ ತಮ್ಮ ಸಮೀಪದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಉಚಿತ ಚಿಕಿತ್ಸೆಯನ್ನು ಪಡೆಯಬೇಕು. ಅಲ್ಲದೇ, ಉಚಿತ ಟೆಲಿ-ಮನಸ್ ದೂರವಾಣಿ ಸಂಖ್ಯೆ ೧೪೪೧೬ ಗೆ ಕರೆಮಾಡಿ ಪರಿಹಾರ ಕಂಡುಕೊಳ್ಳಬಹುದು ಎಂಬ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಸಂಪತ್. ಎಂ.ಗುಣಾರಿ, ಡಾ.ರಾಜೇಶ್ವರಿ ಗೋಲಗೆರಿ, ಡಾ.ಕೆ.ಡಿ.ಗುಂಡಬಾವಡಿ, ಡಾ.ಜೈಬುನ್ನಿಸಾ ಬೀಳಗಿ, ಡಾ.ಕವಿತಾ ದೊಡ್ಡಮನಿ, ಡಾ.ಅಪ್ಪಾಸಾಹೇಬ ಇನಾಮದಾರ. ಡಾ.ನಾಗರಾಜ.ಎಚ್, ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ.ಪರಶುರಾಮ ಹಿಟ್ಟನಳ್ಳಿ, ಡಾ.ಸತೀಶ ತಿವಾರಿ, ಡಾ.ಅರ್ಚನಾ ಕುಲಕರ್ಣಿ, ಡಾ.ಮಾಗಿ, ಜಿ.ಎಂ.ಕೊಲ್ಲೂರ ಮುಂತಾದವರು ಭಾಗವಹಿಸಿದ್ದರು. ಉಪ ಆರೋಗ್ಯಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಹೊಸಮನಿ ನಿರೂಪಿಸಿದರು.=-----------
ಕೋಟ್‌ರಾಷ್ಟ್ರೀಯ ಮಾನಸಿಕ ಆರೋಗ್ಯ ಸಮೀಕ್ಷೆ ಪ್ರಕಾರ ಶೇ. ೧ರಿಂದ ೫ ರಷ್ಟು ಜನರು ಸ್ಕೀಜೋಫ್ರೇನಿಯಾದಿಂದ ಬಳಲುತ್ತಿದ್ದಾರೆ. ಯಾವುದೇ ರೀತಿಯ ಮಾನಸಿಕ ರೋಗ ಅಂದರೆ ಒಬ್ಬಂಟಿಯಾಗಿರುವುದು, ನಿದ್ರಾಹೀನತೆ, ಸರಿಯಾಗಿ ಕೆಲಸ ಮಾಡಿದಿರುವುದು, ಜಿಗುಪ್ಸೆ, ಹತಾಷೆ ಇತ್ಯಾದಿ ಲಕ್ಷಣಗಳು ಕಂಡುಬಂದಲ್ಲಿ ತಮ್ಮ ಸಮೀಪದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಉಚಿತ ಚಿಕಿತ್ಸೆಯನ್ನು ಪಡೆಯಬೇಕು.ಡಾ.ಮಂಜುನಾಥ ಮಸಳಿ, ಮನೋವೈದ್ಯ