ಧಾರವಾಡ:
ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ ವಿಜ್ಞಾನ ಸಂಭ್ರಮ ಕಾರ್ಯಾಗಾರ ಉದ್ಘಾಟಿಸಿದ ಅವರು, ಪ್ರಸ್ತುತ ಸಂದರ್ಭದಲ್ಲಿ ವಿಜ್ಞಾನಿಗಳಿಗೆ ಹಾಗೂ ಸಂಶೋಧಕರಿಗೆ ಸಾಕಷ್ಟು ಆಧುನಿಕ ರೀತಿಯಲ್ಲಿ ಅವಕಾಶಗಳಿದ್ದು, ಸಮಾಜದ ಅನುಕೂಲಕ್ಕಾಗಿ ಹೊಸ ಹೊಸ ಪ್ರಯೋಗಗಳು ನಡೆಯಬೇಕಿದೆ ಎಂದರು.
ಶಿಕ್ಷಣ ತಜ್ಞ, ವಿಜ್ಞಾನಿ ಡಾ. ಎಸ್.ಎಂ. ಶಿವಪ್ರಸಾದ ಮಾತನಾಡಿ, ನಾವು ಬೇರೆಯವರ ಮಾತುಗಳನ್ನು ಆಲಿಸಿ ಪ್ರತಿಕ್ರಿಯಿಸುವ ಬದಲು ಸ್ವ-ಆಲೋಚನೆಯಿಂದ ಚಿಂತಿಸಿ ಮುಂದುವರಿದರೆ ಜೀವನದಲ್ಲಿ ಉನ್ನತ ಸಾಧನೆ ಮಾಡುವ ಜತೆಗೆ ಹೊಸ ತಂತ್ರಜ್ಞಾನಗಳನ್ನು ರೂಪಿಸಬಹುದು ಎಂದು ಹೇಳಿದರು.ವಿಶ್ರಾಂತ ಕುಲಪತಿ ಡಾ. ಬಿ.ಜಿ. ಮೂಲಿಮನಿ ಮಾತನಾಡಿ, ರಾಷ್ಟ್ರೀಯ ವಿಜ್ಞಾನ ಆಚರಣೆ ಮಹತ್ವವು ಮಹಿಳಾ ವಿಜ್ಞಾನಿಗಳನ್ನು ಪ್ರೋತ್ಸಾಹಿಸುವುದಾಗಿದೆ. ಈಗಾಗಲೇ ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಸಾಕಷ್ಟು ಕೊಡುಗೆ ನೀಡಿದ್ದು, ಇಂತಹ ಅವಕಾಶ ಬಳಸಿಕೊಂಡು ಹೆಚ್ಚಿನ ಸಂಶೋಧನೆ ಮಾಡಬೇಕೆಂದು ಕರೆ ನೀಡಿದರು.
ನಿವೃತ್ತ ಪ್ರಾಧ್ಯಾಪಕ ಡಾ. ಜಗದೀಶ ಟೋನಣ್ಣವರ, ಡಾ. ವಿಜಯಲಕ್ಷ್ಮಿ ಬಾಳೆಕುಂದ್ರಿ, ಡಾ. ಆರ್. ಶಂಕರ ಹಾಗೂ ಅಧ್ಯಕ್ಷತೆ ವಹಿಸಿದ್ದ ಕೇಂದ್ರದ ನಿರ್ದೇಶಕ ಡಾ. ವೀರಣ್ಣ ಬೋಳಿಶೆಟ್ಟಿ ಮಾತನಾಡಿದರು. ವಿಶಾಲಾಕ್ಷಿ ಎಸ್.ಜೆ. ನಿರೂಪಿಸಿದರು. ಸಿ.ಎಫ್. ಚಂಡೂರ ವಂದಿಸಿದರು. ಡಾ. ಜೆ.ಎಸ್. ಕಾಡದೇವರಮಠ, ಡಾ. ಕೊಟ್ರೇಶ, ಡಾ. ಯು.ಎಸ್. ರಾಯ್ಕರ, ಡಾ. ಅರುಂಧತಿ ಸವದತ್ತಿ ಇದ್ದರು.