ಹಿರಿಯರಿಗೆ ಗೌರವಕೊಟ್ಟು ಮಾತನಾಡುವುದು ಕಲಿಯಲಿ

KannadaprabhaNewsNetwork |  
Published : Apr 23, 2024, 12:47 AM IST

ಸಾರಾಂಶ

ಇನ್ನೂ ಚಿಕ್ಕವನು, ಹಿರಿಯರಿಗೆ ಗೌರವಕೊಟ್ಟು ಮೊದಲು ಮಾತಾನಾಡುವುದನ್ನು ಕಲಿಯಲಿ. ರಾಜಕಾರಣ ಮಾಡಲು ಇನ್ನೂ ಬಳಹ ಸಮವಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ವಿರುದ್ಧ ಬಿಜೆಪಿ ಸಂಸದೆ ಮಂಗಲ ಅಂಗಡಿ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಇನ್ನೂ ಚಿಕ್ಕವನು, ಹಿರಿಯರಿಗೆ ಗೌರವಕೊಟ್ಟು ಮೊದಲು ಮಾತಾನಾಡುವುದನ್ನು ಕಲಿಯಲಿ. ರಾಜಕಾರಣ ಮಾಡಲು ಇನ್ನೂ ಬಳಹ ಸಮವಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ವಿರುದ್ಧ ಬಿಜೆಪಿ ಸಂಸದೆ ಮಂಗಲ ಅಂಗಡಿ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ತಾಯಿ ಮಾತನಾಡಲಿ. ಆದರೆ, ಮೃಣಾಲ್ ನೀನು ಬಹಳ ಚಿಕ್ಕವನು. ರಾಜಕಾರಣ ಮಾಡುವುದಕ್ಕೆ ಸಾಕಷ್ಟು ಸಮಯ ಇದೆ. ಹಿರಿಯ ರಾಜಕಾರಣಿಗಳ ಬಗ್ಗೆ ಮಾತನಾಡುವಾಗ ನಾಲಿಗೆಯ ಮೇಲೆ ಹಿಡಿತವಿಟ್ಟುಕೊಂಡು ಮಾತನಾಡು ಎಂದು ಎಚ್ಚರಿಕೆ ನೀಡಿದರು.ಕಳೆದ 20 ವರ್ಷದಿಂದ ಬೆಳಗಾವಿ ಅಭಿವೃದ್ಧಿಯಾಗಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿರುವುದು ಸರಿಯಲ್ಲ. ಬೆಳಗಾವಿ ಗ್ರಾಮೀಣ ಶಾಸಕರು ಮತ್ತು ಅವರ ಪುತ್ರ ಕಳೆದ 20 ವರ್ಷಗಳಿಂದ ಸುರೇಶ್​ ಅಂಗಡಿ ಏನು ಮಾಡಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಂಗಡಿ ಕುಟುಂಬದವರ ವಿರುದ್ಧ ಸುಳ್ಳು ಆರೋಪ ಮಾಡಿರುವ ಮೃಣಾಲ್​ ವಿರುದ್ಧ ಸೈಬರ್ ಕ್ರೈಮ್​ನಲ್ಲಿ ದೂರು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ದಿ.ಸುರೇಶ ಅಂಗಡಿಯವರು ಮತ್ತು ನಾನು ಬೆಳಗಾವಿ ಲೋಕಸಭಾ ವ್ಯಾಪ್ತಿಯಲ್ಲಿ ₹16,495 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಅನುಷ್ಠಾನ ಮಾಡಿದ್ದೇವೆ. ಆದರೂ ನಮ್ಮ ವಿರುದ್ಧ ಕಾಂಗ್ರೆಸ್​ನವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿದರು.

₹927 ಕೋಟಿ ವೆಚ್ಚದಲ್ಲಿ ಧಾರವಾಡ-ಕಿತ್ತೂರು ನಡುವೆ ನೂತನ ರೈಲ್ವೆ ಮಾರ್ಗ ಯೋಜನೆ ತರಲಾಗಿದೆ. ₹100 ಕೋಟಿ ವೆಚ್ಚದಲ್ಲಿ ಬೆಳಗಾವಿ ನಗರದಲ್ಲಿ 4 ರೈಲ್ವೆ ಕ್ರಾಸಿಂಗ್ ರಸ್ತೆ, ಮೇಲ್ಸೇತುವೆ ನಿರ್ಮಾಣ ಮಾಡಲಾಗಿದೆ. ₹3,600 ಕೋಟಿ ವೆಚ್ಚದಲ್ಲಿ ರೈಲು ಮಾರ್ಗದ ಡಬ್ಲಿಂಗ್, ₹210 ಕೋಟಿ ವೆಚ್ಚದಲ್ಲಿ ಬೆಳಗಾವಿ ರೈಲು ನಿಲ್ದಾಣ ನವೀಕರಣ, ವಿದ್ಯುದೀಕರಣ ಕಾರ್ಯ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ ₹145 ಕೋಟಿ ಟರ್ಮಿನಲ್ 1 ನಿರ್ಮಾಣ ಹಾಗೂ ಬೆಳಗಾವಿಗೆ ಉಡಾನ್ ಯೋಜನೆ ತರಲಾಗಿದೆ. ಇದಲ್ಲದೇ ₹1100 ಕೋಟಿ ವೆಚ್ಚದ ಸ್ಮಾರ್ಟ್ ಸಿಟಿ ಯೋಜನೆ, ಮಕ್ಕಳ ಶಿಕ್ಷಣದ ಅನಕೂಲಕಕ್ಕಾಗಿ ಎರಡು ಕೇಂದ್ರೀಯ ವಿದ್ಯಾಲಯಗಳು, ₹3 ಸಾವಿರ ಕೋಟಿ ವೆಚ್ಚದಲ್ಲಿ ರಿಂಗ್ ರಸ್ತೆ ನಿರ್ಮಾಣ ಕಾಮಗಾರಿ, ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ವೇಗ, ₹36 ಕೋಟಿ ವೆಚ್ಚದಲ್ಲಿ ಗೋಕಾಕ್​ ರಸ್ತೆ ನಿರ್ಮಾಣ ಮಾಡಲಾಗಿದೆ. ಹೀಗೆ ಬೆಳಗಾವಿ ಲೋಕಸಭಾ ವ್ಯಾಪ್ತಿಯಲ್ಲಿ ಒಟ್ಟು ₹16495 ಕೋಟಿ ವೆಚ್ಚದಲ್ಲಿ ಕಾಮಗಾರಿ ಅನುಷ್ಠಾನ ಮಾಡಿ ಅಭಿವೃದ್ಧಿ ಪಡಿಸಿದ್ದೇವೆ. ಮೃಣಾಲ್ ಸೋಲಿ‌ನ ಹತಾಶೆಯಲ್ಲಿ ಏನು ಬೇಕಾದ್ದನ್ನು ಮಾತನಾಡುವುದಲ್ಲ ಎಂದು ಕಿಡಿಕಾರಿದರು.

ಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಪಾಲಿಕೆ ಸದಸ್ಯ ಹನುಮಂತ ಕೊಂಗಾಲಿ ಉಪಸ್ಥಿತರಿದ್ದರು.ನನ್ನ ಅವಧಿಯಲ್ಲಿ ಬೆಳಗಾವಿ ನಗರದ ರಿಂಗ್ ರಸ್ತೆ ಕಾಮಗಾರಿಗೆ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಮತಕ್ಷೇತ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಎಷ್ಟು ಅನುದಾನ‌ ತಂದು ಅಭಿವೃದ್ಧಿ ಪಡಿಸಿದ್ದಾರೆ ಎಂದು ಬಹಿರಂಗ ಪಡಿಸಲಿ.

-ಮಂಗಲ ಅಂಗಡಿ,

ಸಂಸದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''