ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಲಿಕಾ ಹಬ್ಬ ಪೂರಕ: ಶ್ರೀನಿವಾಸ್‌

KannadaprabhaNewsNetwork |  
Published : Feb 21, 2025, 11:48 PM IST
ಬೋಕಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ ಜಿ. ದಿಬ್ಬ ಕ್ಲಸ್ಟರ್ ವ್ಯಾಪ್ತಿಯ ಶಾಲಾಮಕ್ಕಳ ಎಫ್ ಎಲ್ ಎನ್ ಕಲಿಕಾ ಹಬ್ಬ 2025 ರ ಕಾರ್ಯಕ್ಮವನ್ನು ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್  ಉದ್ಘಾಟಿಸಿದರು.  | Kannada Prabha

ಸಾರಾಂಶ

ಕಲಿಕಾ ಹಬ್ಬವು ಮಕ್ಕಳಲ್ಲಿ ಸಂತಸದ ಕಲಿಕೆಯೊಂದಿಗೆ, ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಶ್ರೀನಿವಾಸ್ ಹೇಳಿದರು.

- ಬೋಕಿಕೆರೆ ಸರ್ಕಾರಿ ಶಾಲೆಯಲ್ಲಿ ಎಫ್.ಎಲ್.ಎನ್. ಕಲಿಕಾ ಹಬ್ಬ- - - ಹೊಸದುರ್ಗ: ಕಲಿಕಾ ಹಬ್ಬವು ಮಕ್ಕಳಲ್ಲಿ ಸಂತಸದ ಕಲಿಕೆಯೊಂದಿಗೆ, ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಶ್ರೀನಿವಾಸ್ ಹೇಳಿದರು.

ತಾಲೂಕಿನ ಬೋಕಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ.ಜಿ. ದಿಬ್ಬ ಕ್ಲಸ್ಟರ್ ವ್ಯಾಪ್ತಿಯ ಶಾಲಾ ಮಕ್ಕಳ ಎಫ್.ಎಲ್.ಎನ್. ಕಲಿಕಾ ಹಬ್ಬ-2025 ಉದ್ಘಾಟನೆ ನೆರವೇರಿಸಿ, ಮಕ್ಕಳ ಸ್ಪರ್ಧಾ ಚಟುವಟಿಕೆಗಳನ್ನು ವೀಕ್ಷಿಸಿ, ಅವರು ಮಾತನಾಡಿದರು. ಇಂತಹ ಕಾರ್ಯಕ್ರಮಗಳು ಮಕ್ಕಳ ಕಲಿಕೆಗೆ ಪ್ರೇರೇಣೆ ನೀಡುತ್ತವೆ. ಮಕ್ಕಳು ಇಂತಹ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಾಗ ಕಲಿಕಾ ಸ್ಫೂರ್ತಿ ಹಾಗೂ ಸಂತಸದ ಕಲಿಕೆ ಉಂಟಾಗುತ್ತದೆ ಎಂದರು.

ಶಿಕ್ಷಣ ಸಂಯೋಜಕ ಎಂ.ಶಶಿಧರ್ ಮಾತನಾಡಿ, ಶಿಕ್ಷಣದ ಗುಣಮಟ್ಟವನ್ನು ವೃದ್ಧಿಸಲು ಇಂತಹ ಶೈಕ್ಷಣಿಕ ಚಟುವಟಿಕೆಗಳು ಮಕ್ಕಳ ಕಲಿಕೆಗೆ ಸಹಕಾರಿಯಾಗಿವೆ ಎಂದರು.

ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಜಯಪ್ಪ ಮಾತನಾಡಿ, ಇಂತಹ ಕಾರ್ಯಕ್ರಮಗಳು ಸರ್ಕಾರಿ ಶಾಲೆ ಶೈಕ್ಷಣಿಕ ಗುಣಮಟ್ಟ ವೃದ್ಧಿಸಲು ಸಹಕಾರಿಯಾಗಿವೆ ಎಂದರು.

ಎಂ.ಜಿ. ದಿಬ್ಬ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಪ್ರಮೀಳಾ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ದೈಹಿಕ ಶಿಕ್ಷಣ ಸಂಯೋಜಕ ಶ್ರೀನಿವಾಸ್, ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಮಾಜಿ ಉಪಾಧ್ಯಕ್ಷ ಮಂಜುನಾಥ್, ತಾಲೂಕು ಅಧ್ಯಕ್ಷ ಕೆ. ಆರ್. ಮಂಜುನಾಥ್, ಗ್ರಾ.ಪಂ. ಸದಸ್ಯ ಕರಿಯಪ್ಪ, ಮಂಜುನಾಥ್, ಬಿಆರ್‌ಪಿ ಪ್ರಭಾಕರ್, ರುದ್ರೇಶ್, ಸುರೇಂದ್ರ ನಾಯ್ಕ್, ಸಿ.ಆರ್.ಪಿ.ಗಳಾದ ಸುನೀತ, ರೂಪ, ಮುಖ್ಯಶಿಕ್ಷಕ ದೇವರಾಜ್, ಕ್ಲಸ್ಟರ್ ವ್ಯಾಪ್ತಿಯ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಜರಿದ್ದರು.

- - - -2ಸೆಚ್‌ಎಸ್‌ಡಿ2.ಜೆಪಿಜಿ:

ಬೋಕಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ.ಜಿ. ದಿಬ್ಬ ಕ್ಲಸ್ಟರ್ ವ್ಯಾಪ್ತಿಯ ಶಾಲಾಮಕ್ಕಳ ಎಫ್‌ಎಲ್‌ಎನ್ ಕಲಿಕಾ ಹಬ್ಬ-2025ರ ಕಾರ್ಯಕ್ರಮವನ್ನು ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್ ಉದ್ಘಾಟಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ