ಖಾಸಗಿ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಲ್ಲೇ ಓದಿ: ಮಧು

KannadaprabhaNewsNetwork |  
Published : Mar 12, 2024, 02:06 AM IST
ರೈತರಿಗೆ ವಿವಿಧ ಬಗೆಯ ಸಸಿ ವಿತರಿಸಲಾಯಿತು. | Kannada Prabha

ಸಾರಾಂಶ

ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಾಸಗಿ ಶಾಲೆಯಲ್ಲಿ ಶಿಕ್ಷಣ ಪಡೆದಿಲ್ಲ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ, ರಾಜ್ಯದ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಅದೇ ರೀತಿ ವಿದ್ಯಾರ್ಥಿಗಳು ಖಾಸಗಿ ಶಾಲೆ ವ್ಯಾಮೋಹ ಬಿಟ್ಟು, ಸರ್ಕಾರಿ ಶಾಲೆಗಳಲ್ಲಿ ಶ್ರದ್ಧೆಯಿಂದ ವ್ಯಾಸಂಗ ಮಾಡಿದರೆ ಉತ್ತಮ ಹುದ್ದೆಗಳ ಪಡೆಯಬಹುದು ಎಂದು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿಕಾರಿಪುರದಲ್ಲಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಶಿಕಾರಿಪುರ

ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಾಸಗಿ ಶಾಲೆಯಲ್ಲಿ ಶಿಕ್ಷಣ ಪಡೆದಿಲ್ಲ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ, ರಾಜ್ಯದ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಅದೇ ರೀತಿ ವಿದ್ಯಾರ್ಥಿಗಳು ಖಾಸಗಿ ಶಾಲೆ ವ್ಯಾಮೋಹ ಬಿಟ್ಟು, ಸರ್ಕಾರಿ ಶಾಲೆಗಳಲ್ಲಿ ಶ್ರದ್ಧೆಯಿಂದ ವ್ಯಾಸಂಗ ಮಾಡಿದರೆ ಉತ್ತಮ ಹುದ್ದೆಗಳ ಪಡೆಯಬಹುದು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಸೋಮವಾರ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಸಚಿವರ ಹುಟ್ಟುಹಬ್ಬ ಅಂಗವಾಗಿ ಬಂಗಾರಪ್ಪ ಅಭಿಮಾನಿ ಬಳಗ ವತಿಯಿಂದ ರೈತರಿಗೆ ವಿವಿಧ ಬಗೆಯ ಸಸಿಗಳ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಒತ್ತಡ ಕಡಿಮೆಗೊಳಿಸಲು 3 ಹಂತದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಯಾವ ಪರಿಕ್ಷೆಯಲ್ಲಿ ಅತಿ ಹೆಚ್ಚಿನ ಅಂಕ ಪಡೆಯುತ್ತಾರೋ ಅದನ್ನು ಪರಿಗಣಿಸಿ ಉತ್ತೀರ್ಣಗೊಳಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಅವರಿಗೆ ಬಳಗದಿಂದ ಸನ್ಮಾನಿಸಲಾಯಿತು. ರೈತರಿಗೆ ಶ್ರೀಗಂಧ, ಸಾಗುವಾನಿ, ತೆಂಗಿನ ಸಸಿಗಳ ವಿತರಿಸಲಾಯಿತು. ಸಚಿವರಿಂದ ಕೇಕ್ ಕತ್ತರಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಮುಖಂಡ ರವಿಕುಮಾರ್, ಅನಿತಾ ಕುಮಾರಿ, ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ, ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಮಾಜಿ ಹಾಗೂ ಜಿಲ್ಲಾ ಕಿಸಾನ್ ಸೆಲ್ ಅಧ್ಯಕ್ಷ ನಗರದ ಮಹಾದೇವಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಬಿ. ನಾಗರಾಜ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್ ಹುಲ್ಮಾರ್, ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೌಲಿ ಗಂಗಾಧರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಶಿವಕುಮಾರ್, ಪುರಸಭಾ ಸದಸ್ಯರಾದ ಉಳ್ಳಿ ದರ್ಶನ್, ಗೋಣಿ ಪ್ರಕಾಶ್, ರೋಷನ್, ಮುಖಂಡರಾದ ರಂಗನಾಥ್, ರಾಘವೇಂದ್ರ ನಾಯ್ಕ್, ವೀರೇಶ್, ಬಡಗಿ ಪಾಲಾಕ್ಷಪ್ಪ, ಗಾಯಿತ್ರಮ್ಮ, ಸೌಭಾಗ್ಯಮ್ಮ, ಮುಖಂಡರು, ಕಾರ್ಯಕರ್ತರು ಅಭಿಮಾನಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

- - -

-11ಕೆ.ಎಸ್‌.ಕೆ.ಪಿ1:

ಶಿಕಾರಿಪುರ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಸೋಮವಾರ ಸಚಿವ ಮಧು ಹುಟ್ಟುಹಬ್ಬದ ಅಂಗವಾಗಿ ದಿ. ಬಂಗಾರಪ್ಪ ಅಭಿಮಾನಿ ಬಳಗದ ವತಿಯಿಂದ ರೈತರಿಗೆ ವಿವಿಧ ಬಗೆಯ ಸಸಿ ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಿವ್‌-ಇನ್‌ ಸಂಬಂಧಕ್ಕೆ ಜನಿಸಿದ ಮಗುವಿಗೆ ತಾಯಿ ಸರ್‌ನೇಮ್‌!
ಪಿಎಂ ಹೇಳ್ತಿರೋ ಆರೆಂಜ್‌ ಆರ್ಥಿಕತೆ ರಾಜ್ಯದಲ್ಲಿ 2016ಲ್ಲೇ ನೀತಿ ಜಾರಿ: ಡಿಕೆ