ಕೂಡ್ಲಿಗಿ: ಎಲ್ಲರೂ ಜಾತಿ, ಧರ್ಮಗಳ ಸಂಕೋಲೆಯಿಂದ ಬಂಧಮಕ್ತವಾಗಿ ಬಾರತೀಯತೆ ಮೈಗೂಡಿಸಿಕೊಂಡು ಸಂಘಟಿತರಾದರೆ ಮಾತ್ರ ದೇಶದ ಉದ್ಧಾರ ಸಾಧ್ಯ ಎಂದು ಶಾಸಕ ಡಾ. ಎನ್.ಟಿ. ಶ್ರೀನಿವಾಸ ತಿಳಿಸಿದರು.
ತಹಸೀಲ್ದಾರ್ ವಿ.ಕೆ. ನೇತ್ರಾವತಿ ಧ್ವಜಾರೋಹಣ ನೆರವೇರಿಸಿದ ನಂತರ ವೇದಿಕೆಯಲ್ಲಿ ಗಣರಾಜ್ಯೋತ್ಸವದ ಸಂದೇಶ ನೀಡಿದರು. ತಾಪಂ ಇಒ ಕೆ.ನರಸಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ವೆಂಕಟೇಶ್, ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ, ಬಿಇಒ ಮೈಲೇಶ ಬೇವೂರು, ಲೋಕೋಪಯೋಗಿ ಇಲಾಖೆಯ ಎಇಇ ನಾಗನಗೌಡ, ಬಿಸಿಎಂ ಅಧಿಕಾರಿ ಶ್ಯಾಮಪ್ಪ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಜಿಲಾನ್, ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ.ಟಿ ಕೊತ್ಲಮ್ಮ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಉದಯ ಎಸ್ ಜನ್ನು, ಸಾವಜ್ಜಿ ರಾಜೇಂದ್ರ ಪ್ರಸಾದ್, ಜಯರಾಮ್ ನಾಯಕ ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮೊದಲು ಶಾಸಕರು, ತಹಶೀಲ್ದಾರ್ ಮಹಾತ್ಮ ಗಾಂಧೀಜಿ ಹುತಾತ್ಮರ ಸ್ಮಾರಕಕ್ಕೆ ತೆರಳಿ ಪುಷ್ಪನಮನ ಅರ್ಪಿಸಿ ನಂತರ ಧ್ವಜಾರೋಹಣ ನೆರವೇರಿಸಿದರು.ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ತಾಲೂಕಿನ ಸಾಧಕರಿಗೆ ಸನ್ಮಾನ ಮಾಡಲಾಯಿತು. ವಿವಿಧ ಸ್ಪರ್ಧೆಯಲ್ಲಿ ವಿಜಯಿಗಳಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಇತರೆ ಮಕ್ಕಳಿಗೆ ಲ್ಯಾಪ್ ಟ್ಯಾಪ್ ವಿತರಣೆ ಮಾಡಿದರು. ಶಾಲಾ ಮಕ್ಕಳಿಂದ ದೇಶ ಭಕ್ತಿಗೀತೆಗಳಿಗೆ ನೃತ್ಯರೂಪಕ ನಡೆಸುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ನಾಲ್ಕು ವರ್ಷದ ಬಾಲಕಿ ಸಂವಿಧಾನ ಪೀಠಿಕೆ ಓದಿದ್ದು ಅಲ್ಲಿ ನೆರೆದ ಜನತೆಯಿಂದ ಚಪ್ಪಾಳೆ ಗಿಟ್ಟಿಸಿತು.