ಹೆಣ್ಣು ಮಕ್ಕಳು ವಿದ್ಯಾವಂತರಾದಾಗ ಮಾತ್ರ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಧ್ಯ. ಹೆಣ್ಣು ಮಕ್ಕಳು ತಾವು ಹೆಣ್ಣೆಂಬ ಕೀಳರಿಮೆ ಬೆಳೆಸಿಕೊಳ್ಳದೆ ತಾವು ಮತ್ತೊಂದು ಜೀವದ ಸೃಷ್ಟಿಗೆ ಕಾರಣರಾಗುತ್ತೇವೆ.
ಧಾರವಾಡ:
ಕರ್ನಾಟಕ ವಿದ್ಯಾವರ್ಧಕ ಸಂಘದ ಮಹಿಳಾ ಮತ್ತು ಮಕ್ಕಳ ಮಂಟಪ ಹಾಗೂ ಮಿಶ್ರಿಕೋಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ ಕಲಘಟಗಿ ತಾಲೂಕಿನ ಮಿಶ್ರಿಕೋಟಿಯಲ್ಲಿ ಜರುಗಿತು.
ಬೇಟಿ ಬಟಾವೋ ಬೇಟಿ ಪಡಾವೋ ಯೋಜನೆ ಕುರಿತು ಮಾತನಾಡಿದ ವಿಶ್ರಾಂತ ಪ್ರಾಧ್ಯಾಪಕಿ ಡಾ. ವಿ. ಶಾರದಾ, ಹೆಣ್ಣು ಮಕ್ಕಳು ವಿದ್ಯಾವಂತರಾದಾಗ ಮಾತ್ರ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಧ್ಯವೆಂದು ಹೇಳಿದರು.
ವಿಶ್ರಾಂತ ಪ್ರಾಧ್ಯಾಪಕಿ ಡಾ. ಅರುಣಾ ಹಳ್ಳಿಕೇರಿ ಮಾತನಾಡಿ, ಹೆಣ್ಣು ಮಕ್ಕಳು ತಾವು ಹೆಣ್ಣೆಂಬ ಕೀಳರಿಮೆ ಬೆಳೆಸಿಕೊಳ್ಳದೆ ತಾವು ಮತ್ತೊಂದು ಜೀವದ ಸೃಷ್ಟಿಗೆ ಕಾರಣರಾಗುತ್ತೇವೆ ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ಪರಶುರಾಮ ಚಿಕ್ಕಾಡಿ ಕಾರ್ಯಕ್ರಮ ಉದ್ಘಾಟಿಸಿದರು. ವಿಷಯ ತಜ್ಞರಾದ ವಿಶ್ರಾಂತ ಪ್ರಾಧ್ಯಾಪಕಿ ಪ್ರೊ ಆಶಾ ಗುಳೇದಗುಡ್ಡ ಪರಿಸರ ಸಂರಕ್ಷಣೆಯಲ್ಲಿ ಮಕ್ಕಳ ಪಾತ್ರ ಕುರಿತು ಮಾತನಾಡಿದರು.
ಸಂಘದ ಮಹಿಳಾ ಮತ್ತು ಮಕ್ಕಳ ಮಂಟಪದ ಸಂಚಾಲಕಿ ಡಾ. ಶೈಲಜಾ ಅಮರಶೆಟ್ಟಿ, ಹೆಣ್ಣು ಮಕ್ಕಳಲ್ಲಿ ಧೈರ್ಯ ಮತ್ತು ಛಲ ಇದ್ದರೆ ಸಾಧಕರಾಗಲು ಸಾಧ್ಯವೆಂದು ಹೇಳಿದರು.
ಸಂಘದ ಸಹಕಾರ್ಯದರ್ಶಿ ಶಂಕರ ಕುಂಬಿ, ಮುಖ್ಯಶಿಕ್ಷಕ ಎಸ್.ಎಫ್. ಪಾಟೀಲ, ಶಿಕ್ಷಕರಾದ ಎಲ್.ಐ. ಲಕ್ಕಮ್ಮನವರ, ಕಸ್ತೂರಿ ಗಂಜಿಗಟ್ಟಿ ಇದ್ದರು.
ಶಾಲೆಯಲ್ಲಿ ಏರ್ಪಡಿಸಿದ್ದ ಹೆಣ್ಣು ಮಕ್ಕಳ ಕುರಿತು ಚಲನಚಿತ್ರಗೀತೆ ಮತ್ತು ಆಶುಭಾಷಣ ಸ್ಪರ್ಧೆಯಲ್ಲಿ ೪೦ಕ್ಕಿಂತ ಹೆಚ್ಚು ಮಕ್ಕಳು ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. ಪ್ರಶಸ್ತಿ ಪಡೆದ ಮಕ್ಕಳಿಗೆ ಸಂಘದ ಡಾ. ಮಹೇಶ ಹೊರಕೇರಿ ಬಹುಮಾನ ವಿತರಿಸಿದರು.
ಸೌಮ್ಯ ಕೆಂಗಾನವರ ಹಾಗೂ ಉಮಾ ಅಕ್ಕೂರ ನಿರ್ಣಾಯಕರಾಗಿದ್ದರು. ದೇವಿಕಾ ಹುಬ್ಬಳ್ಳಿ, ಸೋನಿ ಪ್ರಮೀಳಾ ಜಕ್ಕಣ್ಣವರ, ಜ್ಯೋತಿ ಭಾವಿಕಟ್ಟಿ, ರೇಖಾ ಅಂತಕ್ಕನವರ ಸೇರಿದಂತೆ ಶಿಕ್ಷಕರು ಹಾಗೂ ಗ್ರಾಮಸ್ಥರು ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.