ಎಡಪಂಥೀಯರಿಂದ ಹಿಂದು ಧರ್ಮದ ವಿರುದ್ಧವೇ ಅಪನಂಬಿಕೆ ಸೃಷ್ಟಿ: ಡಾ.ಭರತ್‌ ಶೆಟ್ಟಿ ಆರೋಪ

KannadaprabhaNewsNetwork |  
Published : Aug 08, 2025, 02:00 AM IST
ಡಾ.ಭರತ್‌ ಶೆಟ್ಟಿ  | Kannada Prabha

ಸಾರಾಂಶ

ಎಡಪಂಥೀಯರು, ಹಿಂದೂಯೇತರ ವ್ಯಕ್ತಿಗಳು ಹಿಂದೂ ಧರ್ಮದ ಆಚಾರ ವಿಚಾರಗಳಲ್ಲಿ ಅಪನಂಬಿಕೆಯನ್ನು ಸೃಷ್ಟಿಸುವಂತೆ ಲಂಗು ಲಗಾಮು ಇಲ್ಲದೆಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿರುವುದಕ್ಕೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ, ಕೊಲೆ ಪ್ರಕರಣ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ನಡೆಸುತ್ತಿದ್ದು, ಈ ನಡುವೆ ಎಡಪಂಥೀಯರು, ಹಿಂದೂಯೇತರ ವ್ಯಕ್ತಿಗಳು ಹಿಂದೂ ಧರ್ಮದ ಆಚಾರ ವಿಚಾರಗಳಲ್ಲಿ ಅಪನಂಬಿಕೆಯನ್ನು ಸೃಷ್ಟಿಸುವಂತೆ ಲಂಗು ಲಗಾಮು ಇಲ್ಲದೆ

ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿರುವುದಕ್ಕೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲವೊಂದು ಎನ್‌ಜಿಒ ಸಂಘಟನೆಗಳು, ಹಿಂದೂಯೇತರ ವ್ಯಕ್ತಿಗಳು, ಎಡಪಂಥೀಯರು ತನಿಖೆಗೂ ಮುನ್ನವೇ, ಅಪರಾಧ ಪ್ರಕರಣಗಳನ್ನು ತಾವೇ ಕಂಡುಕೊಂಡಂತೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಾವೇ ತನಿಖೆ ಮಾಡಿ ವರದಿ ಒಪ್ಪಿಸಿದ ಹಾಗೆ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ಸಮಯ ಸಾಧಕತನ ತೋರಿಸಿ, ಧರ್ಮ, ಧರ್ಮಸ್ಥಳ ಶ್ರೀ ಮಂಜುನಾಥನ ಮೇಲೆ ಮೇಲೆ ಆರೋಪ ಹೊರಿಸಲು, ತಾಮುಂದು ತಾಮುಂದು ಎಂದು ಪೋಸ್ಟ್ ಹಾಕುತ್ತಿದ್ದಾರೆ.

ಅಪರಾಧ ಪ್ರಕರಣದಲ್ಲಿ ಹಿಂದೂ ಧರ್ಮವನ್ನು ಹಿಂದು ಆಚಾರ ವಿಚಾರಗಳನ್ನು, ಧರ್ಮಸ್ಥಳ ಮಂಜುನಾಥ ಕ್ಷೇತ್ರ ದೇವಾಲಯವನ್ನು ಎಳೆದು ತಂದು ಹಿಂದೂ ಸಮಾಜದ ಜನರ ಮನಸ್ಸಿಗೆ ಘಾಸಿಯನ್ನು ಉಂಟು ಮಾಡುವ ಮೂಲಕ ವಿಕೃತ ಆನಂದವನ್ನು ಕಾಣುತ್ತಿದ್ದಾರೆ.

ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರ ಪತ್ತೆಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ.ಈ ನಡುವೆ ಹಿಂದೂ ಧರ್ಮ ಆಚಾರ ವಿಚಾರಗಳನ್ನು ಅವಹೇಳನ ಮಾಡಿ ನಿಕೃಷ್ಟವಾಗಿ ಕಾಣುವುದನ್ನು ಖoಡಿಸುವುದಾಗಿ ಎಂದು ಡಾ. ಭರತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ