ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ತಾಲೂಕು ಆಡಳಿತಸೌಧದ ನ್ಯಾಯಾಲಯದ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸಾರ್ವಜನಿಕರ ಅಹವಾಲು ದೂರು ಸ್ವೀಕಾರ ಮತ್ತು ಕುಂದುಕೊರತೆ ಸಭೆ ನಂತರ ಮಾತನಾಡಿದ ಅವರು, ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೂ ಸಹ ಕೆಲ ಅಧಿಕಾರಿಗಳಿಂದ ಸಣ್ಣ ಪುಟ್ಟ ತಪ್ಪುಗಳು ನಡೆಯುತ್ತದೆ. ಅವುಗಳನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಿದರು.
ತಾಲೂಕಿನ ಚಿಣ್ಯ ಗ್ರಾಮದ ಸ.ನಂ.49ರಲ್ಲಿ 34 ಗುಂಟೆ ಜಮೀನಿನ ಪೋಡಿ ದುರಸ್ತು ಮಾಡಲು ಎಡಿಎಲ್‌ಆರ್ ದೊಳ್ಳೇಗೌಡ ಸೇರಿದಂತೆ ಸರ್ವೇ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗೆ 15 ಸಾವಿರ ರು. ಲಂಚ ನೀಡಿದ್ದೇನೆ. ಆರು ತಿಂಗಳು ಕಳೆದರೂ ಪೋಡಿ ದುರಸ್ತು ಮಾಡಿಕೊಟ್ಟಿಲ್ಲ ಎಂದು ಗ್ರಾಮದ ಸಿ.ಎನ್.ನಾಗೇಂದ್ರ ಅವರು ಲೋಕಾಯುಕ್ತ ಎಸ್ಪಿ ಅವರಿಗೆ ದೂರು ಸಲ್ಲಿಸಿದರು.ಈ ವೇಳೆ ಗರಂ ಆದ ಲೋಕಾಯುಕ್ತ ಅಧಿಕಾರಿಗಳು ಅರ್ಜಿದಾರರ ಕೆಲಸ ಮಾಡಿಕೊಡಲು ಲಂಚ ಕೇಳುತ್ತೀರೆಂದರೆ ನಿಮಗೆ ನಾಚಿಕೆಯಾಗುವುದಿಲ್ಲವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
38 ಅರ್ಜಿಗಳ ಸ್ವೀಕಾರ:
ಈ ವೇಳೆ ಲೋಕಾಯುಕ್ತ ಡಿವೈಎಸ್ಪಿ ಎಚ್.ಟಿ.ಸುನೀಲ್‌ಕುಮಾರ್, ಇನ್ಸ್‌ಪೆಕ್ಟರ್‌ಗಳಾದ ಬಿ.ಟಿ.ಬ್ಯಾಟರಾಯಗೌಡ, ಎಂ.ರವಿಕುಮಾರ್, ತಹಸೀಲ್ದಾರ್ ಅಶೋಕ್, ಗ್ರೇಡ್-2 ತಹಸೀಲ್ದಾರ್ ಮಂಜುನಾಥ್, ತಾಪಂ ಇಒ ಸತೀಶ್, ಬಿಇಒ ಎಸ್.ಆರ್.ಲೋಕೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ನಾರಾಯಣ, ಅರಣ್ಯಾಧಿಕಾರಿ ಸಂಪತ್‌ಪಟೇಲ್, ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್, ಎಆರ್‌ಟಿಒ ಹೊನ್ನೇಗೌಡ, ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕ ಮಹೇಶ್, ಪುರಸಭೆ ಮುಖ್ಯಾಧಿಕಾರಿ ವೀಣಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕಿನ ಎಲ್ಲಾ ಗ್ರಾಪಂ ಗಳ ಪಿಡಿಒಗಳು ಇದ್ದರು.