ಪೋಶ್ ಕಾಯ್ದೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ
ಜನರ ರಕ್ಷಣೆಗಾಗಿ, ಸಮಾಜದಲ್ಲಿನ ಅಪರಾಧಗಳನ್ನು ತಡೆಗಟ್ಟಲು ಕಾನೂನು ಕಾಯ್ದೆಗಳನ್ನು ರೂಪಿಸಲಾಗಿದೆ. ಕಾನೂನು ಕಾಯ್ದೆಗಳು ದುರ್ಬಳಕೆಯಾಗದೇ ಸಮರ್ಪಕವಾಗಿ ಸದ್ಬಳಕೆಯಾಗಬೇಕು ಎಂದು ಶೃಂಗೇರಿ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶ ಆರ್.ಎಸ್.ಜೀತು ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಆಯೋಜಿಸಿದ್ದ ಪೋಶ್ ಕಾಯ್ದೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾನೂನಿನ ಅರಿವು ಕಡಿಮೆಯಾಗಬಾರದು. ಹೆಚ್ಚಾಗುತ್ತ ಹೋಗಬೇಕು.ಪೋಶ್ ಕಾಯ್ದೆ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಯುವ ಉದ್ದೇಶದಿಂದ ರೂಪಿಸಲಾಗಿದೆ.ಮಹಿಳೆಯರಲ್ಲಿ ಕಾನೂನಿನ ಅರಿವು ಮೂಡಿಸಬೇಕು ಎಂದರು.ವಕೀಲ ವಿ.ಆರ್,ನಟಶೇಖರ್ ಪೋಶ್ ಕಾಯ್ದೆಯ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡಿ ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಈ ಕಾಯ್ದೆ ಮಹಿಳೆಯರಿಗೆ ಕಾನೂನಿನ ರಕ್ಷಣೆ,ಸಹಾಯ ನೀಡುತ್ತದೆ.ದೈಹಿಕ ಹಿಂಸೆ,ಲೈಂಗಿಕ ದೌರ್ಜನ್ಯ,ನಿಂದನೆ,ಅವಾಚ್ಯ ಶಬ್ದಗಳಿಂದ ನಿಂದಿಸುವುದು,ಅಶ್ಲೀಲ ಸಂಬಾಷಣೆ,ಅಸ್ಲೀಲ ಸಂವಾಹನ ಇತ್ಯಾದಿ ರೀತಿಯಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವುದನ್ನು ಈ ಕಾಯ್ದೆಯಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಹಾಗೂ ಮಹಿಳೆಯರಿಗೆ ರಕ್ಷಣೆ ನೀಡಲಾಗುತ್ತದೆ.ಈ ಕಾಯ್ದೆ ಬಗ್ಗೆ ಮಹಿಳೆಯರಲ್ಲಿ ಅರಿವು, ಜಾಗೃತಿ ಮೂಡಿಸುವ ಕೆಲಸ ನಡೆಯಬೇಕು ಎಂದರು.
ತಹಸೀಲ್ದಾರ್ ಅನೂಪ್ ಸಂಜೋಗ್, ಸಹಾಯಕ ಸರ್ಕಾರಿ ಅಭಿಯೋಜಕಿ ಹರಿಣಾಕ್ಷಿ, ವಕೀಲರ ಸಂಘದ ಅಧ್ಯಕ್ಷ ಮಹೇಶ್, ಕಂದಾಯ ಇಲಾಖೆ ಅಧಿಕಾರಿಗಳು, ವಕೀಲರು ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.12 ಶ್ರೀ ಚಿತ್ರ 1-
ಶೃಂಗೇರಿ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೋಶ್ ಕಾಯ್ದೆ ಕುರಿತ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ನ್ಯಾ.ಆರ್.ಎಸ್.ಜೀತು ಉದ್ಘಾಟಿಸಿದರು.