ಕಾನೂನು ತಿದ್ದುಪಡಿ ಸಂವಿಧಾನದ ಮೂಲತತ್ವಕ್ಕೆ ವಿರುದ್ಧವಾಗಿರಬಾರದು: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‌

KannadaprabhaNewsNetwork |  
Published : Oct 05, 2024, 01:30 AM IST
ಚಿತ್ರ : 4ಎಂಡಿಕೆ1 : ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್ ಮಾತನಾಡಿದರು.  | Kannada Prabha

ಸಾರಾಂಶ

ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪ್ರಶ್ನೆಗಳಿಗೆ ಉತ್ತರಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಮಾನವ ಬಂಧುತ್ವ ವೇದಿಕೆ, ಕೊಡಗು ಜಿಲ್ಲಾ ಸಂಚಾಲನಾ ಸಮಿತಿ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದೊಂದಿಗೆ ‘ಮಾನವೀಯತೆಯೇ ಧರ್ಮ- ಸಂವಿಧಾನವೇ ಧರ್ಮಗ್ರಂಥ’ ಎಂಬ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ನಗರದ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ದೇಶದ ಕಾನೂನಿನಲ್ಲಿ ಬದಲಾವಣೆಗಳಾಗಿವೆ. ಕಳೆದ 75ವರ್ಷಗಳಲ್ಲಿ ಸಂವಿಧಾನಕ್ಕೆ 105 ಬಾರಿ ತಿದ್ದುಪಡಿ ತರಲಾಗಿದೆ. ಕಾಲಕಾಲಕ್ಕೆ ಬದಲಾಗುತ್ತಿರುವ ಸಮಾಜದೊಂದಿಗೆ ಸಂವಿಧಾನವೂ ಬದಲಾಗಿ ಇಂದಿನ ಸಮಾಜಕ್ಕೆ ಪ್ರಸ್ತುತವಾದ ಸಂವಿಧಾನ ಇರಿಸಿಕೊಳ್ಳುವಂತಾಗಿದೆ. ಸಂವಿಧಾನದ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಈ ಎಲ್ಲ ಒಟ್ಟು ಪ್ರಕ್ರಿಯೆಯನ್ನು ಕಾನೂನು ಪರಿಷ್ಕರಣೆ ಎನ್ನಲಾಗುತ್ತದೆ. ಯಾವುದೇ ಕಾನೂನು ತಿದ್ದುಪಡಿಯಾದರು ಅದು ಸಂವಿಧಾನದ ಮೂಲತತ್ವಗಳಿಗೆ ವಿರುದ್ಧವಾಗಿರಬಾರದು ಎಂದರು.

ವಕೀಲ ಹಾಗೂ ವೇದಿಕೆಯ ಸಂಚಾಲಕ ಕೆ.ಆರ್. ವಿದ್ಯಾಧರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಜನಶಕ್ತಿ ವಾರಪತ್ರಿಕೆಯ ಸಂಪಾದಕ ಡಾ.ಎಸ್.ವೈ.ಗುರುಶಾಂತ್, ಪತ್ರಕರ್ತ ಕೆ.ಎಸ್. ಸತೀಶ್ ಕುಮಾರ್, ವೇದಿಕೆಯ ಗೌರವ ಸಂಚಾಲಕ ಬಿ.ಎಸ್. ರಮಾನಾಥ್, ಜಿಲ್ಲಾ ಸಂಚಾಲಕ ಜೆ.ಎಲ್. ಜನಾರ್ದನ, ತಾಲೂಕು ಅಧ್ಯಕ್ಷ ಎಂ.ಎಸ್. ವೀರೇಂದ್ರ, ಚಿಂತಕ ಜೆ.ಆರ್. ಪಾಲಾಕ್ಷ, ವೇದಿಕೆಯ ಜಿಲ್ಲಾ ಸಂಚಾಲಕಿ ಡಾ.ಎಚ್.ಎಂ. ಕಾವೇರಿ ಮತ್ತಿತರರು ಉಪಸ್ಥಿತರಿದ್ದರು.ವಿಚಾರ ಮಂಡನೆ, ಸಂವಾದ: ಕೊಡಗು ಮಾನವ ಬಂಧುತ್ವ ವೇದಿಕೆ, ಕೊಡಗು ಜಿಲ್ಲಾ ಸಂಚಾಲನಾ ಸಮಿತಿ ಮತ್ತು ಪ್ರಗತಿಪರ ಸಂಘಟನೆಗಳ ವತಿಯಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ಅರಿವು ಎಂಬ ವಿಷಯದ ಕುರಿತು ವಿಚಾರ ಮಂಡನೆ ಕಾರ್ಯಕ್ರಮ ಕಾಲೇಜಿನ ಪ್ರಾಂಶುಪಾಲ ಪಿ.ಕೆ.ವೆಂಕಟೇಶ್ ಪ್ರಸನ್ನ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪ್ರಶ್ನೆಗಳಿಗೆ ಉತ್ತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!