ಕ್ರಿಯೇಟಿವ್ ಕಾಲೇಜಿನಲ್ಲಿ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ

KannadaprabhaNewsNetwork |  
Published : Jul 26, 2024, 01:41 AM IST
 'ಕಾನೂನು ಅರಿವು' ಮಾಹಿತಿ ಕಾರ್ಯಕ್ರಮ | Kannada Prabha

ಸಾರಾಂಶ

ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ ನಡೆಯಿತು. ಶಿಕ್ಷಣದ ಜೊತೆಗೆ ಕಾನೂನು ಅರಿವು ವಿದ್ಯಾರ್ಥಿಗಳಿಗೆ ಮುಖ್ಯ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಕಾರ್ಕಳ

ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ‘ಸಪ್ತಸ್ವರ’ ವೇದಿಕೆಯಲ್ಲಿ ಜು. 24ರಂದು ‘ಕಾನೂನು ಅರಿವು’ ಮಾಹಿತಿ ಕಾರ್ಯಕ್ರಮ ಜರುಗಿತು.

ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ಸುಬ್ರಹ್ಮಣ್ಯ ಎಚ್, ಮಾತನಾಡಿ ಶಿಕ್ಷಣದ ಜೊತೆ ಕಾನೂನು ಅರಿವುಗಳು ವಿದ್ಯಾರ್ಥಿಗಳಿಗೆ ಮುಖ್ಯವಾಗಿದೆ. ಸ್ವಸ್ಥ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಹಿರಿದಾಗಿದೆ. ಸಮಾಜದಲ್ಲಿ ಶಾಂತಿ ಹಾಗೂ ಸಹಬಾಳ್ವೆಯಿಂದ ಬದುಕಲು ಸಾಧ್ಯ ಎಂದರು.

ಪೊಲೀಸ್ ಇಲಾಖೆಯ ಸಂತೋಷ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ತಮ್ಮ ಹಕ್ಕುಗಳು ಮತ್ತು ಕಾನೂನು ಅರಿವು ಹೊಂದುವುದು ಅತ್ಯಗತ್ಯವಾಗಿದೆ ಎಂದರು.

ಸಭಾಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಮಾತನಾಡಿ, ಜೀವಿಸಲು ಗಾಳಿ, ನೀರು, ಆಹಾರ ಎಷ್ಟು ಅಗತ್ಯವೋ ಸಮಾಜದಲ್ಲಿ ಬದುಕಬೇಕಾದರೆ ಕಾನೂನಿನ ಅರಿವು ಅಷ್ಟೇ ಅವಶ್ಯಕವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪೊಲೀಸ್ ಇಲಾಖೆಯ ರವೀಂದ್ರ ಹಾಗೂ ಘನಶ್ಯಾಮ್ ಅವರು ಉಪಸ್ಥಿತರಿದ್ದರು.

ಕಾನೂನು ಅರಿವು ಮಾಹಿತಿ ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗದವರು, ವಸತಿ ನಿಲಯ ಪಾಲಕರು ಹಾಗೂ ಮೇಲ್ವಿಚಾರಕರು, ಬೋಧಕೇತರ ಸಿಬ್ಬಂದಿ ವರ್ಗ, ವಾಣಿಜ್ಯ ವಿಭಾಗದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಕನ್ನಡ ಭಾಷಾ ಉಪನ್ಯಾಸಕರಾದ ಶಿವಕುಮಾರ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಉಮೇಶ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಯಕತ್ವ ಗೊಂದಲ ಮಧ್ಯೆ 13 ಕೈ ಶಾಸಕರು ವಿದೇಶಕ್ಕೆ :
ವಿದ್ಯಾರ್ಥಿಗಳ ಗೋಳು, ಕೇಳೋರು ಯಾರು?