ಕೊಪ್ಪಳ:
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಮಹಿಳಾ ದಿನಾಚರಣೆ ಅಂಗವಾಗಿ ಕಾಲೇಜಿನ ಮಹಿಳಾ ಸಬಲೀಕರಣ ವಿಭಾಗ, ಮಹಿಳೆಯರ ಅನೈತಿಕ ಕಳ್ಳ ಸಾಗಾಣಿಕೆ, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ, ವಾಣಿಜ್ಯ ಲೈಂಗಿಕ ಶೋಷಣೆ ತಡೆಗೆ ಸಂಬಂಧಿಸಿದಂತೆ ನಡೆದ ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಯುವಕರಿಗೂ ಸೂಕ್ಷ್ಮತೆ ಅಗತ್ಯ. ಸಾಮಾಜಿಕ ಮಾಧ್ಯಮಗಳನ್ನು ಸಕಾರಾತ್ಮಕ ಕಾರ್ಯಗಳಿಗೆ ಬಳಸಬೇಕು. ಮಹಿಳೆಯರು ಶೋಷಣೆಗೆ ಸಂಬಂಧಿಸಿದಂತೆ ಯಾರಿಗೂ ಹೆದರಬೇಕಿಲ್ಲ. ಮುಖ್ಯವಾಗಿ ಪೊಲೀಸರೆದುರು ಯಾವುದೇ ಮಾಹಿತಿ ಮುಚ್ಚಿಡಬಾರದು ಎಂದ ಎಸ್ಪಿ, ಈಚೆಗೆ ಸಾಣಾಪುರದಲ್ಲಿ ನಡೆದ ಅತ್ಯಾಚಾರ ಪ್ರಕರಣದ ನಿದರ್ಶನ ವಿವರಿಸಿದರು.ಪ್ರಾಂಶುಪಾಲ ಡಾ. ಡಿ.ಎಚ್. ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಸಬಲೀಕರಣ ಘಟಕದ ಸಂಯೋಜಕಿ ಡಾ. ಭಾಗ್ಯಜ್ಯೋತಿ ಪ್ರಾಸ್ತಾವಿಕ ಮಾತನಾಡಿದರು.
ಮಹಿಳೆಯರ ಸಬಲೀಕರಣ ಮತ್ತು ಮಹಿಳೆಯರಿಗಾಗಿ ಇರುವ ಸರ್ಕಾರಿ ಯೋಜನೆಗಳ ಕುರಿತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೋಟಗಾರ, ಮಹಿಳೆಯರ ಲೈಂಗಿಕ ದೌರ್ಜನ್ಯ ತಡೆ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಶಿವಲೀಲಾ, ಅನೈತಿಕವಾಗಿ ಮಹಿಳೆಯರ ಕಳ್ಳ ಸಾಗಾಣಿಕೆ ತಡೆ ಹಾಗೂ ವಾಣಿಜ್ಯ ಲೈಂಗಿಕ ಶೋಷಣೆ ತಡೆ ಕುರಿತು ನ್ಯಾಯವಾದಿ ಹನುಮಂತರಾವ್ ಉಪನ್ಯಾಸ ನೀಡಿದರು.