: ನ್ಯಾ.ಜಿ.ಎಚ್ ಹನುಮಂತ ಅಭಿಮತ । ಸುರಕ್ಷತಾ ಬಾಲ್ಯ ಅಭಿಯಾನದಡಿ ಕಾನೂನು ಅರಿವು ಕಾರ್ಯಕ್ರಮ ಕನ್ನಡಪ್ರಭ ವಾರ್ತೆ ಭದ್ರಾವತಿ
ಅವರು ರಾಜ್ಯ ಸರ್ಕಾರಿ ನೌಕರರ ಸಂಘ, ತಾಲೂಕು ಶಾಖೆ ಆಶ್ರಿತದ ನಗರದ ಹೊಸಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಬುಧವಾರ ಶಿವಮೊಗ್ಗ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್, ಶಾಲಾ ಶಿಕ್ಷಣ ಇಲಾಖೆ, ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾನೂನು ಸಾಕ್ಷರತಾ ಕ್ಲಬ್ ಗಳ ಮೂಲಕ ಸುರಕ್ಷತಾ ಬಾಲ್ಯ ಅಭಿಯಾನ ಅಡಿಯಲ್ಲಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರಸ್ತುತ ಸಾಮಾಜಿಕ, ಆರ್ಥಿಕ ವ್ಯವಸ್ಥೆಗಳ ಹಾಗೂ ಶಿಕ್ಷಣದ ಅಗತ್ಯತೆ ಕುರಿತು ವಿವರಿಸಿದರು.ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಮಾತನಾಡಿ, ದೇಶದ ಸುರಕ್ಷಿತ ಭವಿಷ್ಯ ಕಟ್ಟುವಲ್ಲಿ ಸುರಕ್ಷಿತ ಬಾಲ್ಯದ ಅವಶ್ಯಕತೆ, ಸಾಮಾಜಿಕ ಜಾಲತಾಣಗಳ ಸುರಕ್ಷಿತ ಬಳಕೆಗಳ ಬಗ್ಗೆ ಹಾಗೂ ಸೈಬರ್ ಸುರಕ್ಷತೆ, ಆನ್ಲೈನ್ ಗ್ಯಾಂಬಲಿಂಗ್, ಸೈಬರ್ ವಂಚನೆ, ಮಾರ್ಫಿಂಗ್ ಹಾಗೂ ಇನ್ನಿತರ ವಿಷಯಗಳ ಕುರಿತು ಅರಿವು ಮೂಡಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಹಾಗೂ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆ ಅಧ್ಯಕ್ಷ ಬಿ. ಸಿದ್ದಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಭವ್ಯ ಭಾರತದ ಸತ್ಪ್ರಜೆಗಳಾಗಲು ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ದೈಹಿಕ ಶಿಕ್ಷಣ ಶಿಕ್ಷಕಿ ಪಿ. ರೇವತಿ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕರಾದ ಎಂ. ಕವಿತಾ ಪ್ರಾರ್ಥಿಸಿ, ಬಿ. ಅಂಬಿಕಾ ಸ್ವಾಗತಿಸಿದರು.
ಭದ್ರಾವತಿ ಹೊಸಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯಲ್ಲಿ ಸುರಕ್ಷಿತ ಬಾಲ್ಯ ಅಭಿಯಾನ ಅಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.