ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಕರ್ನಾಟಕ ವಿದ್ಯಾರ್ಥಿ ಒಕ್ಕೂಟ, ಜಂಬೂದ್ವೀಪ ಕರ್ನಾಟಕ ಜಿಲ್ಲಾ ಘಟಕ ಮಹಾತ್ಮ ಜ್ಯೋತಿ ಭಾಪುಲೆ ಅಧ್ಯಯನ ಕೇಂದ್ರದಲ್ಲಿ ನವಯಾನ ಬುದ್ಧಧಮ್ಮ, ಎಸ್‌ಸಿ,ಎಸ್‌ಟಿ, ನೌಕರರ ಸಂಘ, ಅಂಬೇಡ್ಕರ್ ವಿಚಾರ ವೇದಿಕೆ, ಜಂಬೂದ್ವಿಪ ಕರ್ನಾಟಕ ಜಿಲ್ಲಾ ಘಟಕ, ಬೌದ್ಧ ಧಮ್ಮ ಸಾಹಿತ್ಯ ಸಂಘ, ಸಾಮಾಜಿಕ ಸಂಘರ್ಷ ಸಮಿತಿ ಸಹಯೋಗದೊಂದಿಗೆ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ಇಂಗ್ಲಿಷ್ ವ್ಯಾಕರಣ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾನೂನು ಅರ್ಥಮಾಡಿಕೊಳ್ಳಬೇಕಾದರೆ ಇಂಗ್ಲಿಷ್ ಜ್ಞಾನ ಬೇಕು. 60 ದಿನಗಳ ತರಬೇತಿ ಕೊಡುವ ಚಿಂತನೆಯಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರೆ ಹೆಚ್ಚಾಗಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಶಿಕ್ಷಣ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ಹೆಚ್ಚಿನ ಪ್ರಾಬಲ್ಯ ಹೊಂದಬೇಕಾದರೆ ಆಂಗ್ಲ ಭಾಷೆಯ ಜ್ಞಾನ ಅತಿ ಮುಖ್ಯ ಎಂದು ಹೇಳಿದರು.ಒಬ್ಬ ಶಿಕ್ಷಣವಂತನಾದರೆ ಒಂದು ಕುಟುಂಬವೇ ಅಭಿವೃದ್ಧಿಯಾದಂತೆ. ಆಗ ನೊಂದವರಿಗೆ ನ್ಯಾಯ ಒದಗಿಸಲು ಸಾಧ್ಯ ಎಂದರು.
ನಿವೃತ್ತ ಎಂಜಿನಿಯರ್ ಪಾತಪ್ಪ ಮಾತನಾಡಿ, ಪ್ರತಿಯೊಬ್ಬರೂ ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು.
ಸಂಪನ್ಮೂಲ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾಗಬೇಕು. ಅಂಬೇಡ್ಕರ್ ಅವರ ವಿಚಾರಗಳು ಭಾಷಣಕ್ಕಷ್ಟೆ ಸೀಮಿತವಾಗಿದೆ.
ಕಾನೂನು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.