ಸಂವಿಧಾನ ಮೌಲ್ಯಗಳ ರಕ್ಷಣೆಗೆ ಕಾನೂನು ಶಿಕ್ಷಣ ದಿಕ್ಸೂಚಿ: ನ್ಯಾ. ಸುಭಾಷ್ ಬಿ. ಆದಿ

KannadaprabhaNewsNetwork |  
Published : Nov 03, 2026, 02:45 AM IST
ಕಾರ್ಯಕ್ರಮವನ್ನು ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ಆದಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಪ್ರಜಾಪ್ರಭುತ್ವದ ಬಲವರ್ಧನೆ, ಸಾಂವಿಧಾನಿಕ ಮೌಲ್ಯಗಳ ರಕ್ಷಣೆ ಹಾಗೂ ಕಾನೂನಿನ ಆಳ್ವಿಕೆಯನ್ನು ಸಮಾಜದಲ್ಲಿ ಗಟ್ಟಿಗೊಳಿಸುವಲ್ಲಿ ಕಾನೂನು ಶಿಕ್ಷಣ ಮಹತ್ವದ ದಿಕ್ಸೂಚಿಯಾಗಿದೆ.

ಗದಗ ಎಸ್.ಎ. ಮಾನ್ವಿ ಕಾಲೇಜಿನಲ್ಲಿ ಬಿಕಾಂ ಎಲ್‌ಎಲ್‌ಬಿ ಕೋರ್ಸ್ ಹಾಗೂ ವಿದ್ಯಾರ್ಥಿ ಒಕ್ಕೂಟಕ್ಕೆ ಚಾಲನೆ

ಕನ್ನಡಪ್ರಭ ವಾರ್ತೆ ಗದಗ

ಪ್ರಜಾಪ್ರಭುತ್ವದ ಬಲವರ್ಧನೆ, ಸಾಂವಿಧಾನಿಕ ಮೌಲ್ಯಗಳ ರಕ್ಷಣೆ ಹಾಗೂ ಕಾನೂನಿನ ಆಳ್ವಿಕೆಯನ್ನು ಸಮಾಜದಲ್ಲಿ ಗಟ್ಟಿಗೊಳಿಸುವಲ್ಲಿ ಕಾನೂನು ಶಿಕ್ಷಣ ಮಹತ್ವದ ದಿಕ್ಸೂಚಿಯಾಗಿದೆ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಉಪಲೋಕಾಯುಕ್ತ ನ್ಯಾ. ಸುಭಾಷ್ ಬಿ. ಆದಿ ಹೇಳಿದರು.

ಗದಗ ಕೆಎಲ್‌ಇ ಸಂಸ್ಥೆಯ ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯದಲ್ಲಿ 2026–27ನೇ ಶೈಕ್ಷಣಿಕ ಸಾಲಿನ ನೂತನ ವಿದ್ಯಾರ್ಥಿ ಸಂಘ, ಜಿಮ್ಖಾನಾ ಚಟುವಟಿಕೆಗಳು ಹಾಗೂ 5 ವರ್ಷಗಳ ಸಂಯೋಜಿತ ಬಿಕಾಂ ಎಲ್‌ಎಲ್‌ಬಿ ಪದವಿ ಕೋರ್ಸ್‌ಗೆ ಚಾಲನೆ ನೀಡಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ಪಾಲ್ಗೊಂಡಿದ್ದ ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್.ಜಿ. ಪಲ್ಲೇದ ಮಾತನಾಡಿ, ವಿದ್ಯಾರ್ಥಿ ದೆಸೆಯಿಂದಲೇ ಪ್ರಾಯೋಗಿಕ ಕಾನೂನು ಅಧ್ಯಯನ ಹಾಗೂ ನ್ಯಾಯಾಂಗ ಶಿಸ್ತನ್ನು ಮೈಗೂಡಿಸಿಕೊಳ್ಳುವುದು ಯಶಸ್ವಿ ವೃತ್ತಿಜೀವನಕ್ಕೆ ಅಡಿಪಾಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಎಸ್.ಎ. ಮಾನ್ವಿ ಮಾತನಾಡಿ, ಪಿಯುಸಿ ಮುಗಿಸಿದ ಗ್ರಾಮೀಣ ಹಾಗೂ ನಗರ ಭಾಗದ ವಿದ್ಯಾರ್ಥಿಗಳಿಗೆ ವಾಣಿಜ್ಯ ಮತ್ತು ಕಾರ್ಪೊರೇಟ್ ಕಾನೂನು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಈ ನೂತನ ಕೋರ್ಸ್ ಮಹತ್ವದ ವೇದಿಕೆಯಾಗಲಿದೆ ಎಂದರು.

ವೇದಿಕೆಯಲ್ಲಿ ಕೆಎಲ್‌ಇ ಆಡಳಿತ ಮಂಡಳಿ ಸದಸ್ಯ ಜಯಾನಂದ ಎಂ. ಮುನವಳ್ಳಿ, ಸ್ಥಳೀಯ ಆಡಳಿತ ಮಂಡಳಿ ಸದಸ್ಯ ಬಿ.ಜಿ. ಶೆಲ್ಲಿಕೇರಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಪದ್ಮಾವತಿ ಮಾನೆ ಉಪಸ್ಥಿತರಿದ್ದರು. ಪ್ರಾಚಾರ್ಯ ಡಾ. ಎಸ್.ಎಂ. ಹುಲ್ಲೂರ ಸ್ವಾಗತಿಸಿದರು. ಡಾ. ವಿಜಯ ಮುರದಂಡೆ ನೂತನ ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಡಾ. ಎಸ್.ಸಿ. ಪಾಲಕೊಂಡ ಅತಿಥಿಗಳನ್ನು ಪರಿಚಯಿಸಿದರು. ಧ್ರುವ ಎಂ. ಹಿರೇಗೌಡರ ಹಾಗೂ ನಿಖಿತಾ ಕಟಾವಟೆ ನಿರೂಪಿಸಿದರು. ಧ್ರುವಿ ಎಲ್. ಸಂಕಲೇಶ ವಂದಿಸಿದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭುಗಿಲೆದ್ದ ಸರ್ಕಾರ ವರ್ಸಸ್‌ ಕುಮಾರಸ್ವಾಮಿ ಸ್ಟಿಂಗ್‌ ಫೈಟ್‌ - ಈಗ ಎಚ್‌ಡಿಕೆ ಚಾರ್ಜ್‌ಶೀಟ್‌
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ - ಇನ್ನೂ 3 ದಿನ ರಾಜ್ಯದೆಲ್ಲೆಡೆ ಮಳೆ