ಹೆಣ್ಣುಮಕ್ಕಳ ರಕ್ಷಣೆಗೆ ಕಾನೂನು ಜ್ಞಾನ ಅಗತ್ಯ: ಯಮನಪ್ಪ ಬಮ್ಮಣಗಿ

KannadaprabhaNewsNetwork |  
Published : Oct 18, 2026, 02:15 AM IST
ಸುರಪುರದ ರಂಗಂಪೇಟೆಯಲ್ಲಿ ಶನಿವಾರ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನಿನ ಅರಿವು -ನೆರವು ಕಾಯ೯ಕ್ರಮವನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಉದ್ಘಾಟಿಸಿದರು. | Kannada Prabha

ಸಾರಾಂಶ

ಕಾನೂನಿನ ಅರಿವು ಪ್ರತಿಯೊಬ್ಬ ಪ್ರಜೆಗೂ ಅಗತ್ಯವಾಗಿದೆ. ಸಮಾಜದಲ್ಲಿ ಅಥವಾ ಕುಟುಂಬದಲ್ಲಿ ಯಾವುದೇ ಸಮಸ್ಯೆಗಳು ಎದುರಾದಾಗ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಂಡುಕೊಳ್ಳಬೇಕು. ಹೆಣ್ಣುಮಕ್ಕಳು ತಮ್ಮ ಹಕ್ಕು ಮತ್ತು ಬಾಧ್ಯತೆಗಳ ಅರಿತುಕೊಂಡು ತಮಗಾಗುವ ಅನ್ಯಾಯದ ವಿರುದ್ಧ ಧೈರ್ಯದಿಂದ ಧ್ವನಿ ಎತ್ತಬೇಕು ಎಂದು ಯಾದಗಿರಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಯಮನಪ್ಪ ಬಮ್ಮಣಗಿ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಸುರಪುರ

ಕಾನೂನಿನ ಅರಿವು ಪ್ರತಿಯೊಬ್ಬ ಪ್ರಜೆಗೂ ಅಗತ್ಯವಾಗಿದೆ. ಸಮಾಜದಲ್ಲಿ ಅಥವಾ ಕುಟುಂಬದಲ್ಲಿ ಯಾವುದೇ ಸಮಸ್ಯೆಗಳು ಎದುರಾದಾಗ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಂಡುಕೊಳ್ಳಬೇಕು. ಹೆಣ್ಣುಮಕ್ಕಳು ತಮ್ಮ ಹಕ್ಕು ಮತ್ತು ಬಾಧ್ಯತೆಗಳ ಅರಿತುಕೊಂಡು ತಮಗಾಗುವ ಅನ್ಯಾಯದ ವಿರುದ್ಧ ಧೈರ್ಯದಿಂದ ಧ್ವನಿ ಎತ್ತಬೇಕು ಎಂದು ಯಾದಗಿರಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಯಮನಪ್ಪ ಬಮ್ಮಣಗಿ ಕರೆ ನೀಡಿದರು.

ನಗರ ಸಮೀಪದ ರಂಗಂಪೇಟೆಯ ಅರುಂಧತಿ ಕಾನೂನು ಮಹಾವಿದ್ಯಾಲಯದಲ್ಲಿ ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಡಾ.ಬಾಬಾ ಸಾಹೇಬ ಅಂಬೇಡ್ಕರ್ ವಿದ್ಯಾವರ್ಧಕ ಸಂಘ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನಿನ ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಾಲಸಾಬ್ ಪೀರಾಪುರ ಮಾತನಾಡಿ, ಬಾಲ್ಯ ವಿವಾಹ ಕೊನೆಗೊಳಿಸುವುದು ಮತ್ತು ಹೆಣ್ಣು ಮಕ್ಕಳಲ್ಲಿ ಹೂಡಿಕೆ ಮಾಡುವುದು ಇಂದಿನ ಸಮಾಜದ ಅತ್ಯಂತ ಪ್ರಮುಖ ಧೈಯ. ಹೆಣ್ಣು ಮಕ್ಕಳಿಗೆ ಪ್ರಾಥಮಿಕ ಶಿಕ್ಷಣದ ಜತೆಗೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣಕ್ಕೂ ಪ್ರೋತ್ಸಾಹಿಸಬೇಕು. ಶಿಕ್ಷಣವು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದರೊಂದಿಗೆ ಸ್ವಂತ ಕಾಲಿನ ಮೇಲೆ ನಿಂತು ಜೀವನದ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸ ಬೆಳೆಸುತ್ತದೆ ಎಂದು ಹೇಳಿದರು.

ಬಾಲ್ಯವಿವಾಹವು ಹೆಣ್ಣುಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಲ್ಲದೆ, ಅವರ ಶಿಕ್ಷಣ ಮತ್ತು ಭವಿಷ್ಯದ ಕನಸುಗಳಿಗೆ ಅಡ್ಡಿಯಾಗುತ್ತದೆ. ಹೀಗಾಗಿ ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಅದನ್ನು ತಡೆಗಟ್ಟಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದರು.

ಹೆಣ್ಣುಮಕ್ಕಳ ಉತ್ತಮ ಬೆಳವಣಿಗೆಗೆ ಪೌಷ್ಟಿಕ ಆಹಾರ, ಆರೋಗ್ಯ ಸೇವೆ ಹಾಗೂ ಸುರಕ್ಷಿತ ವಾತಾವರಣ ಒದಗಿಸುವುದು ಅಗತ್ಯ. ಅವರ ಶಿಕ್ಷಣ, ಆರೋಗ್ಯ ಮತ್ತು ಭವಿಷ್ಯಕ್ಕಾಗಿ ಮಾಡುವ ಹೂಡಿಕೆ ದೇಶದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ತಿಳಿಸಿದರು. ವಕೀಲರಾದ ಮಲ್ಲಿಕಾರ್ಜುನ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ವಕೀಲೆ ಶ್ರೀದೇವಿ ಪಾಟೀಲ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ತಾಲೂಕು ವಕೀಲರ ಸಂಘ ಅಧ್ಯಕ್ಷ ಬಸವರಾಜ ಅನಸೂರು ಮತ್ತು ಹಿರಿಯ ವಕೀಲೆ ಜಯಲಲೀತಾ ವಿ. ಪಾಟೀಲ್ ಮಾತನಾಡಿದರು.

ಅಜಯಕುಮಾರ ಬಿಲ್ಲವ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಮುದುಕಪ್ಪ ಓದನ, ಅರುಂಧತಿ ಕಾನೂನು ಕಾಲೇಜು ಪ್ರಾಂಶುಪಾಲ ಲಕ್ಷ್ಮೇಶ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಕುಲಕರ್ಣಿ, ಬಿ.ಎಡ್.ಕಾಲೇಜು ಪ್ರಾಂಶುಪಾಲೆ ರೇಣುಕಾ ಕನಕಗಿರಿ ಉಪಸ್ಥಿತರಿದ್ದರು. ವಕೀಲರಾದ ಯಲ್ಲಪ್ಪ ಹುಲಕಲ್, ಜ್ಯೋತಿನಾಯಕ, ಯಲ್ಲಪ್ಪ ಹುಲಿಕಲ್, ಮಂಜುನಾಥ ಉದ್ದಾರ ಉಪನ್ಯಾಸಕರಾದ ಮಾರುತಿ, ರಮೇಶ, ಅನಿಲ, ಅಂಬ್ರೇಶನಾಯಕ ಡೊಣ್ಣೆಗೇರಾ, ಭೀಮಣ್ಣ, ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿನಿಯರು ಸೇರಿದಂತೆ ಇತರರು ಇದ್ದರು. ರೇಷ್ಮಾ ಪ್ರಾರ್ಥನೆ ಗೀತೆ ಹಾಡಿದರು. ಮೌನೇಶ ಸ್ವಾಗತಿಸಿದರು. ಬಿ.ಜಿ.ನಾಯಕ ನಿರೂಪಿಸಿ, ವಂದಿಸಿದರು.

ಕಾನೂನು ಎಂದರೆ ಕೇವಲ ವಕೀಲರಿಗೆ ಮಾತ್ರ ಸೀಮಿತವಾದ ವಿಷಯವಲ್ಲ. ಪ್ರತಿಯೊಬ್ಬರೂ ಕಾನೂನಿನ ಮೂಲಅಂಶಗಳ ತಿಳಿದುಕೊಳ್ಳಬೇಕು. ತಮ್ಮ ಹಕ್ಕುಗಳ ಜತೆಗೆ ಕರ್ತವ್ಯಗಳನ್ನೂ ಅರಿತು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಕಾನೂನನ್ನು ದುರುದ್ದೇಶದಿಂದ ದುರುಪಯೋಗಪಡಿಸಿಕೊಳ್ಳದೆ ಅದರ ಆಶಯಕ್ಕೆ ಅನುಗುಣವಾಗಿ ನಡೆದುಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ದೇಶದ ಭವಿಷ್ಯ ರೂಪಿಸುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ ಎಂದು ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಧಾರ್ ತಿದ್ದುಪಡಿಗೆ ಅರಸೀಕೆರೆಯಲ್ಲಿ ಪರದಾಟ
ನವರಾತ್ರಿ ಅನ್ನ ಸಂತರ್ಪಣೆಗೆ ಹರಿದು ಬರುತ್ತಿರುವ ಹೊರೆ ಕಾಣಿಕೆ