ಕಟ್ಟುನಿಟ್ಟಾಗಿ ಕಾನೂನು ನಿಯಮಗಳನ್ನು ಪಾಲಿಸಬೇಕು: ಪಿ ಚಂದ್ರಶೇಖರ್

KannadaprabhaNewsNetwork |  
Published : Aug 21, 2025, 02:00 AM IST
ಗಣಪತಿ ಪ್ರತಿಷ್ಠಾಪನ ಸಮಿತಿಯ ಪದಾಧಿಕಾರಿಗಳ ಸಭೆ | Kannada Prabha

ಸಾರಾಂಶ

ಗೌರಿ ಗಣೇಶ ಹಬ್ಬ ಆಚರಣೆ ಸಂದರ್ಭ ಗಣೇಶ ಪ್ರತಿಷ್ಠಾನ ಸಮಿತಿಯವರು ಕಟ್ಟುನಿಟ್ಟಾಗಿ ಕಾನೂನು ನಿಯಮಗಳನ್ನು ಪಾಲಿಸಬೇಕು ಎಂದು ಪಿ. ಚಂದ್ರಶೇಖರ್‌ ತಿಳಿಸಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರ ಗೌರಿ ಗಣೇಶ ಹಬ್ಬ ಆಚರಣೆ ಸಂದರ್ಭ ಗಣೇಶ ಪ್ರತಿಷ್ಠಾಪನ ಸಮಿತಿಯವರು ಕಟ್ಟುನಿಟ್ಟಾಗಿ ಕಾನೂನು ನಿಯಮಗಳನ್ನು ಪಾಲಿಸಬೇಕು ಎಂದು ಸೋಮವಾರಪೇಟೆ, ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರಾದ ಪಿ ಚಂದ್ರಶೇಖರ್ ತಿಳಿಸಿದ್ದಾರೆ. ಕುಶಾಲನಗರ ಏ ಪಿ ಸಿ ಎಂ ಎಸ್ ಸಭಾಂಗಣದಲ್ಲಿ ನಡೆದ ಕುಶಾಲನಗರ ತಾಲೂಕು ವ್ಯಾಪ್ತಿಯ ಗಣಪತಿ ಪ್ರತಿಷ್ಠಾಪನ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಗೌರಿ ಗಣೇಶ ಹಬ್ಬದ ಆಚರಣೆಯಲ್ಲಿ ಸಮಿತಿಯವರು ಅನುಸರಿಸಬೇಕಾದ ಕ್ರಮಗಳು ಅನುಸರಿಸಬಾರದ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು.ಗಣೇಶ ವಿಸರ್ಜನೆಯ ವೇಳೆ ಮೆರವಣಿಗೆ ಮತ್ತು ಇತರ ಸಂದರ್ಭ ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳ ಬಗ್ಗೆ ಸಲಹೆ ಸೂಚನೆ ನಿರ್ದೇಶನಗಳನ್ನು ನೀಡಿದರು. ಗೌರಿ ಗಣೇಶ ಹಬ್ಬದ ಸಂದರ್ಭ ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸುವ ಮೊದಲು ಪೊಲೀಸ್ ಇಲಾಖೆಯಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಧ್ವನಿವರ್ಧಕ ಮೆರವಣಿಗೆ ಕಾರ್ಯಕ್ರಮಗಳಿಗೆ ಕೂಡ ಪೊಲೀಸ್ ಇಲಾಖೆಯ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದರು. ರಸ್ತೆ ಫುಟ್ಪಾತ್ ಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅವಕಾಶ ಇರುವುದಿಲ್ಲ. ಗೌರಿ ಗಣೇಶ ಮೂರ್ತಿಗಳ ಸುರಕ್ಷತೆ ಸಮಿತಿಯವರ ಜವಾಬ್ದಾರಿಯಾಗಿದ್ದು ಈ ಬಗ್ಗೆ ಯಾವುದೇ ಅವಘಡಗಳು ಸಂಭವಿಸಿದಾಗ ಸಮಿತಿಯವರನ್ನೇ ನೇರವಾಗಿ ಮಾಡಬೇಕಾಗುತ್ತದೆ ಎಂದು ಅವರು ಹೇಳಿದರು. ಯಾವುದೇ ಸಂಘ ಸಂಸ್ಥೆ ಖಾಸಗಿ ಅಥವಾ ವೈಯಕ್ತಿಕವಾಗಿ ಗಣಪತಿ ಪ್ರತಿಷ್ಠಾಪನೆ ಸಂಬಂಧ ಸಾರ್ವಜನಿಕರಿಂದ ಬಲವಂತವಾಗಿ ಚಂದಾ ವಸೂಲಿ ಮಾಡುವಂತಿಲ್ಲ, ಸುಪ್ರೀಂಕೋರ್ಟ್ ಆದೇಶದಂತೆ ನಿಷೇಧಕ್ಕೆ ಒಳಪಟ್ಟಿರುವ ಡಿ ಜೆ ಸೌಂಡ್ ಸಿಸ್ಟಮ್ ಮೆರವಣಿಗೆ ಸಾಂಸ್ಕೃತಿಕ ಕಾರ್ಯಕ್ರಮದ ಸಮಯದಲ್ಲಿ ಬಳಸದಂತೆ ಅವರು ಸೂಚನೆ ನೀಡಿದರು.ಗೌರಿ ಗಣೇಶ ವಿಸರ್ಜನೆಯ ಸಮಯದಲ್ಲಿ ಈಜು ಬಾರದ ಮತ್ತು ಮಕ್ಕಳನ್ನು ನೀರಿಗೆ ಇಳಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಈ ಸಂದರ್ಭ ಮಾತನಾಡಿದ ಕುಶಾಲನಗರ ಪೊಲೀಸ್ ಇನ್ಸ್ಪೆಕ್ಟರ್ ದಿನೇಶ್ ಕುಮಾರ್ ಕುಶಾಲನಗರ ಮತ್ತು ಸುಂಟಿಕೊಪ್ಪ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 160 ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ನಡೆಯಲಿದೆ ಎಂದರು. ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಸಲಹೆ ನೀಡಿದರು. ಇಲಾಖೆ ಮೂಲಕ ನಿಯಮಾನುಸಾರ ಸಹಕಾರ ಒದಗಿಸುವ ಭರವಸೆ ವ್ಯಕ್ತಪಡಿಸಿದರು.ಕುಶಾಲನಗರ ಟೌನ್ ಪೊಲೀಸ್ ಠಾಣಾಧಿಕಾರಿ ಗಣೇಶ್, ಗ್ರಾಮಾಂತರ ಪೊಲೀಸ್ ಠಾಣೆಯ ರಾಮಚಂದ್ರ, ಅಪರಾಧ ವಿಭಾಗದ ಸ್ವಾಮಿ, ಸುಂಟಿಕೊಪ್ಪ ಪೊಲೀಸ್ ಠಾಣೆಯ ಠಾಣಾಧಿಕಾರಿ ಮೋಹನ್ ರಾಜ್ ಹಾಗೂ ಸಿಬ್ಬಂದಿ ಮತ್ತು ತಾಲೂಕಿನ 150 ಕ್ಕೂ ಅಧಿಕ ಸಮಿತಿಯ ಪದಾಧಿಕಾರಿಗಳು ಇದ್ದರು.

PREV

Recommended Stories

ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಎಮ್ಮೆ ಕೊಡಿಸುವುದಾಗಿ ಪ್ರೇಮ್‌ಗೆ ವಂಚನೆ : ₹4.75 ಲಕ್ಷ ಮೋಸ